Ind vs SA: ಟೀಮ್ ಇಂಡಿಯಾದಲ್ಲಿ ಸ್ಥಾನ ಭದ್ರಪಡಿಸಲು ಮತ್ತೊಂದು ಅವಕಾಶ ಪಡೆದ ಆಟಗಾರರು

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಗುರುವಾರದಿಂದ ಆರಂಭವಾಗಲಿದೆ. ಈ ಸರಣಿಯಲ್ಲಿ ಭಾರತ ತಂಡದ ಹಲವು ಪ್ರಮುಖ ಆಟಗಾರರು ಹೊರಗುಳಿಯುತ್ತಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲು ಆಯ್ಕೆಯಾಗಿರುವ ಎಲ್ಲಾ ಆಟಗಾರರಿಗೆ ಕೂಡ ಈ ಸರಣಿಯಿಂದ ವಿಶ್ರಾಂತಿ ನೀಡಲಾಗಿದ್ದು ಹೀಗಾಗಿ ಅನೇಕ ಯುವ ಆಟಗಾರರಿಗೆ ಅವಕಾಶ ದೊರೆತಿದೆ.

ಇನ್ನು ಈ ಸರಣಿಯ ಮೂಲಕ ಭಾರತ ತಂಡದಲ್ಲಿ ಸ್ಥಾನವನ್ನು ಭದ್ರಪಡಿಸಲು ಪ್ರಯತ್ನಿಸುತ್ತಿರುವ ಹಲವು ಪ್ರತಿಭಾವಂಣತ ಆಟಗಾರರಿಗೆ ಮತ್ತೊಂದು ಅವಕಾಶ ದೊರೆತಂತಾಗಿದೆ. ಈ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡ ಪೂರ್ಣ ಸಾಮರ್ಥ್ಯದ ತಂಡದೊಂದಿಗೆ ಕಣಕ್ಕಿಳಿಯುತ್ತಿದ್ದು ಆ ಬಲಿಷ್ಠ ತಂಡವನ್ನು ಭಾರತದ ಎರಡನೇ ದರ್ಜೆಯ ತಂಡ ಹೇಗೆ ಎದುರಿಸಲಿದೆ ಎಂಬುದು ಕುತೂಹಲ ಮೂಡಿಸಿದೆ.

T20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರT20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಸಂಪೂರ್ಣ ಹೊಸತನದೊಂದಿಒಗೆ ಕಂಡುಬರುತ್ತಿದೆ. ಈ ಸರಣಿಯ ಮೂಲಕ ಮೂವರು ಯುವ ಆಟಗಾರರು ಭಾರತ ತಂಡದಲ್ಲಿ ಮೊದಲ ಬಾರಿಗೆ ಆಡುವ ಅವಕಾಶ ಗಿಟ್ಟಿಸಿಕೊಂಡಿದ್ದಾರೆ. ಮುಕೇಶ್ ಕುಮಾರ್, ರಜತ್ ಪಾಟಿದಾರ್ ಮತ್ತು ರಾಹುಲ್ ತ್ರಿಪಾಠಿ ಟೀಮ್ ಇಂಡಿಯಾದ ಕರೆ ಸ್ವೀಕರಿಸಿದ ಆಟಗಾರರಾಗಿದ್ದಾರೆ.

ನಾಯಕ ಶಿಖರ್ ಧವನ್ ಜೊತೆಗೆ ಶುಬ್ಮನ್ ಗಿಲ್ ಈ ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆಯಿದೆ. ರಾಹುಲ್ ತ್ರಿಪಾಠಿ ಅಥವಾ ರಜತ್ ಪಾಟಿದಾರ್ ಏಕದಿನ ಕ್ಯಾಪ್ ಧರಿಸುವ ಸಾಧ್ಯತೆಯೂ ಇದೆ. ಇನ್ನು ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಮಧ್ಯಮ ಕ್ರಮಾಂಕದಲ್ಲಿ ಪ್ರಮುಖ ಆಟಗಾರರಾಗಲಿದ್ದಾರೆ. ಇನ್ನು ಶಹ್ಬಾಜ್ ಅಹ್ಮದ್, ರವಿ ಬಿಷ್ಣೋಯ್ ಹಾಗೂ ಕುಲ್ದೀಪ್ ಯಾದವ್ ಸ್ಪಿನ್ ದಾಳಿಯಲ್ಲಿ ಜೊತೆಯಾಗಲಿದ್ದಾರೆ.

ಶಾರ್ದೂಲ್ ಠಾಕೂರ್ ಅವರು ದೀಪಕ್ ಚಹಾರ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್ ಮತ್ತು ಹೊಸಬರಾದ ಮುಖೇಶ್ ಕುಮಾರ್ ಅವರೊಂದಿಗೆ ಭಾರತ ತಂಡದ ವೇಗ ಬೌಲಿಂಗ್ ವಿಭಾಗವನ್ನು ಮುನ್ನಡೆಸಲಿದ್ದಾರೆ. ಈ ಸರಣಿಯು ಭಾರತಕ್ಕೆ ಕಠಿಣ ಸವಾಲನ್ನು ಒಡ್ಡಲಿದ್ದು ದಕ್ಷಿಣ ಆಫ್ರಿಕಾ ಈ ಸರಣಿಯ ಮೂಲಕ ಸಾಧ್ಯವಾದಷ್ಟು ಸೂಪರ್ ಲೀಗ್ ಅಂಕಗಳನ್ನು ಪಡೆದುಕೊಳ್ಳಲು ಪ್ರಯತ್ನಿಸಲಿದೆ.

ಟಿ20 ವಿಶ್ವಕಪ್ ಗೆಲ್ಲಬಲ್ಲ ಎರಡು ತಂಡಗಳನ್ನು ಊಹಿಸಿದ ಇಂಗ್ಲೆಂಡ್ ಸ್ಟಾರ್: ಭಾರತವೂ ಇದೆಯಾ?ಟಿ20 ವಿಶ್ವಕಪ್ ಗೆಲ್ಲಬಲ್ಲ ಎರಡು ತಂಡಗಳನ್ನು ಊಹಿಸಿದ ಇಂಗ್ಲೆಂಡ್ ಸ್ಟಾರ್: ಭಾರತವೂ ಇದೆಯಾ?

ಇತ್ತಂಡಗಳ ಸ್ಕ್ವಾಡ್ ಹೀಗಿದೆ

ಭಾರತ ತಂಡ: ಶಿಖರ್ ಧವನ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ರಜತ್ ಪಾಟಿದಾರ್, ಇಶಾನ್ ಕಿಶನ್, ಶಾರ್ದೂಲ್ ಠಾಕೂರ್, ದೀಪಕ್ ಚಾಹರ್, ಕುಲದೀಪ್ ಯಾದವ್, ಅವೇಶ್ ಖಾನ್, ಮೊಹಮ್ಮದ್ ಸಿರಾಜ್, ರಾಹುಲ್ ತ್ರಿಪಾಠಿ, ಮುಖೇಶ್ ಕುಮಾರ್, ಋತುರಾಜ್ ಗಾಯಕ್ವಾಡ್, ಶಹಬಾಜ್ ಅಹ್ಮದ್, ರವಿ ಬಿಷ್ಣೋಯ್

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ಜಾನ್ನೆಮನ್ ಮಲನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಆಂಡಿಲೆ ಫೆಹ್ಲುಕ್ವಾಯೊ, ಡ್ವೈನ್ ಪ್ರಿಟೋರಿಯಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ತಬ್ರೈಜ್ ಶಮ್ಸಿ, ಅನ್ರಿಚ್ ನಾರ್ಟ್ಜೆ, ಹೆನ್ರಿಚ್ ಕ್ಲಾಸೆನ್, ಲುಂಗಿ ಎನ್‌ಗಿಡಿ, ರೀಜಾ ಹೆಂಡ್ರಿಕ್ಸ್

For Quick Alerts
ALLOW NOTIFICATIONS
For Daily Alerts
Story first published: Thursday, October 6, 2022, 0:16 [IST]
Other articles published on Oct 6, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X