ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ. ಆಫ್ರಿಕಾ: ಮುಂದಿನ ವರ್ಷದ ಏಕದಿನ ವಿಶ್ವಕಪ್‌ನ ಕನಸು ಹಂಚಿಕೊಂಡ ಶಿಖರ್ ಧವನ್

Ind vs SA, ODI series: Indian skipper Shikhar Dhawan said I want to keep myself fit for 2023 World Cup

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಗುರುವಾರದಿಂದ ಆರಂಭವಾಗಲಿದೆ. ಈ ಸರಣಿಗೂ ಮುನ್ನಾದಿನ ಟೀಮ್ ಇಂಡಿಯಾ ನಾಯಕ ಶಿಖರ್ ಧವನ್ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ಶಿಖರ್ ಧವನ್ ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಬಗ್ಗೆ ಮಾತನಾಡಿದ್ದಾರೆ. ಮುಂದಿನ ವಿಶ್ವಕಪ್‌ನಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ದೈಹಿಕವಾಗಿ ತಾನು ಸಮರ್ಥವಾಗಿ ಇರಲು ಬಯಸುತ್ತೇನೆ ಎಂದಿದ್ದಾರೆ ಶಿಖರ್ ಧವನ್.

ಅಕ್ಟೋಬರ್ 6 ರಿಂದ ಲಕ್ನೋದಲ್ಲಿ ಭಾರತ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾಗಿಯಾಗಲಿದೆ. ಈ ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸುತ್ತಿರುವ ಶಿಖರ್ ಧವನ್ ನಾಯಕನಷ್ಟೇ ಅಲ್ಲದೆ ಭಾರತ ತಂಡದ ಪ್ರಮುಖ ಬ್ಯಾಟರ್ ಕೂಡ ಹೌದು. ಧವನ್ ಕಳೆದೆರಡು ವರ್ಷಗಳಲ್ಲಿ ಅತ್ಯಂತ ಸ್ಥಿರ ಬ್ಯಾಟಿಂಗ್‌ ಪ್ರದರ್ಶನ ನೀಡುತ್ತಾ ಬಂದಿರುವ ಆಟಗಾರರ ಪೈಕಿ ಒಬ್ಬರಾಗಿದ್ದಾರೆ. ಶ್ರೀಲಂಕಾ ಮತ್ತು ವೆಸ್ಟ್ ಇಂಡೀಸ್ ಪ್ರವಾಸಗಳಲ್ಲಿ ಭಾರತ ತಂಡದ ನಾಯಕರಾಗಿಯೂ ಗಮನಾರ್ಹ ಪ್ರದರ್ಶನ ನೀಡಿದ್ದಾರೆ.

T20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರT20 World Cup: ಜಸ್ಪ್ರೀತ್ ಬುಮ್ರಾ ಅನುಪಸ್ಥಿತಿ ಭಾರತ ತಂಡಕ್ಕೆ ದೊಡ್ಡ ಸಮಸ್ಯೆಯಲ್ಲ ಎಂದ ಮಾಜಿ ಆಟಗಾರ

36 ವರ್ಷದ ಧವನ್ 158 ಏಕದಿನ ಪಂದ್ಯಗಳ ಭಾರತ ತಂಡವನ್ನು ಪ್ರತಿನಿಧಿಸಿದ್ದು 92.07 ಸ್ಟ್ರೈಕ್ ರೇಟ್‌ನಲ್ಲಿ 6647 ರನ್ ಗಳಿಸಿದ್ದಾರೆ. ಅವರು 17 ಶತಕ ಮತ್ತು 38 ಅರ್ಧ ಶತಕಗಳನ್ನು ಬಾರಿಸಿದ್ದು ಆರಂಭಿಕರಾಗಿ ರೋಹಿತ್ ಶರ್ಮಾ ಜೊತೆಗೆ ಸುದೀರ್ಘ ಕಾಲದಿಂದ ಜೋಡಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಧವನ್‌ಗೆ ಶುಬ್ಮನ್ ಗಿಲ್ ಆರಂಬಿಕನಾಗಿ ಸಾಥ್ ನೀಡುವ ನಿರೀಕ್ಷೆಯಿದೆ.

ಈ ಸಂದರ್ಭದಲ್ಲಿ ಶಿಖರ್ ಧವನ್ ಸುಂದರವಾದ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನು ಹೊಂದಿರುವುದಕ್ಕೆ ತಾನು ಅದೃಷ್ಟಶಾಲಿ ಎಂದಿದ್ದಾರೆ. ಇದಕ್ಕೆ ನಾನು ನಿಜಕ್ಕೂ ಕೃತಜ್ಞನಾಗಿದ್ದೇನೆ ಎಂದಿದ್ದಾರೆ ಧವನ್. ಮುಂದಿವರಿದು ಮಾತನಾಡಿದ ಅವರು "ಯಾವಾಗೆಲ್ಲಾ ಸಾಧ್ಯವೋ ನನ್ನ ಜ್ಞಾನವನ್ನು ನಾನು ಯುವ ಕ್ರಿಕೆಟಿಗರೊಂದಿಗೆ ಹಂಚಿಕೊಳ್ಳುತ್ತೇನೆ. ಈಗ ನನ್ನ ಮೇಲೆ ಹೊಸ ಜವಾಬ್ಧಾರಿಯಿದೆ. ಆದರೆ ನಾನು ಸವಾಲಿನಲ್ಲಿ ಅವಕಾಶವನ್ನು ನೋಡುತ್ತಿದ್ದು ಅದನ್ನು ಚೆನ್ನಾಗಿ ಆನಂದಿಸುತ್ತೇನೆ" ಎಂದಿದ್ದಾರೆ.

ಲೆಜೆಂಡ್ಸ್ ಲೀಗ್ ಕ್ರಿಕೆಟ್ 2022; ಫೈನಲ್‌ನಲ್ಲಿ ಗೌತಮ್ ಗಂಭೀರ್ ಬಳಗಕ್ಕೆ ಪಠಾಣ್ ಬಳಗ ಸವಾಲುಲೆಜೆಂಡ್ಸ್ ಲೀಗ್ ಕ್ರಿಕೆಟ್ 2022; ಫೈನಲ್‌ನಲ್ಲಿ ಗೌತಮ್ ಗಂಭೀರ್ ಬಳಗಕ್ಕೆ ಪಠಾಣ್ ಬಳಗ ಸವಾಲು

ನನ್ನ ಗುರಿ ಏಕದಿನ ವಿಶ್ವಕಪ್: ಈ ಸಂದರ್ಭದಲ್ಲಿ ಶಿಖರ್ ಧವನ್ ತಮ್ಮ ಮುಂದಿನ ಗುರಿ ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಎಂದಿದ್ದು ಈ ಹಂತದಲ್ಲಿ ತನ್ನನ್ನು ತಾನು ಮುಂದಿನ ವರ್ಷದ ಏಕದಿನ ವಿಶ್ವಕಪ್‌ಗೆ ದೈಹಿಕವಾಗಿ ಹಾಘೂ ಮಾನಸಿಕವಾಗಿ ಸಮರ್ಥವಾಗಿಟ್ಟುಕೊಳ್ಳುವುದಕ್ಕೆ ಬಯಸುತ್ತೇನೆ ಎಂದಿದ್ದಾರೆ.

ದಕ್ಷಿಣ ಆಪ್ರಿಕಾ ವಿರುದ್ಧದ ಸರಣಿಗೆ ಭಾರತ ತಂಡ: ಶಿಖರ್ ಧವನ್ (ನಾಯಕ), ಋತುರಾಜ್ ಗಾಯಕ್ವಾಡ್, ಶುಭ್ಮನ್ ಗಿಲ್, ಶ್ರೇಯಸ್ ಅಯ್ಯರ್ (ಉಪನಾಯಕ), ರಜತ್ ಪಾಟಿದಾರ್, ರಾಹುಲ್ ತ್ರಿಪಾಠಿ, ಇಶಾನ್ ಕಿಶನ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಕುಲ್ದೀಪ್ ಯಾದವ್ , ರವಿ ಬಿಷ್ಣೋಯ್, ಮುಕೇಶ್ ಕುಮಾರ್, ಆವೇಶ್ ಖಾನ್, ಮೊಹಮ್ಮದ್ ಸಿರಾಜ್, ದೀಪಕ್ ಚಹಾರ್.

Story first published: Wednesday, October 5, 2022, 23:15 [IST]
Other articles published on Oct 5, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X