
ಮುಂಬರುವ ದಕ್ಷಿಣ ಆಫ್ರಿಕಾ ಹಾಗೂ ಭಾರತ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ ಹಿರಿಯ ಆಟಗಾರರ ಆಯ್ಕೆ ಸಮಿತಿ ತಂಡವನ್ನ ಆಯ್ಕೆ ಮಾಡಿದೆ. ಗಾಯಾಳು ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಕೆ.ಎಲ್ ರಾಹುಲ್ ಟೀಂ ಇಂಡಿಯಾವನ್ನ ಮುನ್ನಡೆಸಲಿದ್ದು, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಟೀಂ ಇಂಡಿಯಾಕ್ಕೆ ಕಂಬ್ಯಾಕ್ ಮಾಡಿದ್ದಾರೆ.
ಸ್ನಾಯು ಸೆಳೆತದಿಂದಾಗಿ ಈಗಾಗಲೇ ಟೆಸ್ಟ್ ಸರಣಿಯಿಂದ ಹೊರಬಿದ್ದಿರುವ ರೋಹಿತ್ ಶರ್ಮಾ, ಏಕದಿನ ಸರಣಿ ಹೊತ್ತಿಗೂ ಫಿಟ್ ಆಗುವ ಯಾವುದೇ ಲಕ್ಷಣ ಕಾಣದೇ ಇರುವ ಹಿನ್ನಲೆಯಲ್ಲಿ, ಆಯ್ಕೆ ಸಮಿತಿಯು ಉಪನಾಯಕ ಕೆ.ಎಲ್ ರಾಹುಲ್‌ಗೆ ಟೀಂ ಇಂಡಿಯಾ ಏಕದಿನ ನಾಯಕತ್ವ ನೀಡಿದೆ. ಏಕದಿನ ತಂಡದಲ್ಲಿ ಐಪಿಎಲ್ ಸೆನ್ಸೇಷನ್ ರುತುರಾಜ್ ಗಾಯಕ್ವಾಡ್ ಸ್ಥಾನ ಪಡೆದಿದ್ದು, ಅನುಭವಿ ಓಪನರ್ ಶಿಖರ್ ಧವನ್ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದಿದ್ದಾರೆ.
ವಿಕೆಟ್ ಕೀಪರ್ ಸ್ಥಾನದಲ್ಲಿ ರಿಷಭ್ ಪಂತ್, ಇಶನ್ ಕಿಶನ್ ಅವಕಾಶ ಪಡೆದಿದ್ದು, ಮೂವರು ಸ್ಪಿನ್ನರ್‌ಗಳಿಗೆ ಮಣೆ ಹಾಕಲಾಗಿದೆ. ಯುಜವೇಂದ್ರ ಚಹಾಲ್ ಜೊತೆಗೆ, ರವಿಚಂದ್ರನ್ ಅಶ್ವಿನ್ ಬಹಳ ಸಮಯದ ಬಳಿಕ ಏಕದಿನ ಸ್ಕ್ವಾಡ್‌ನಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್ ಭಾರತ ತಂಡಕ್ಕೆ ವಾಪಸ್ಸಾಗಿದ್ದು, ಆರು ವೇಗಿಗಳೊಂದಿಗೆ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯನ್ನು ಆಡಲಿದೆ.
ಇನ್ನು ರೋಹಿತ್ ಅನುಪಸ್ಥಿತಿಯಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಭಾರತ ತಂಡವನ್ನ ಮುನ್ನಡೆಸಲಿದ್ದು, ಉಪನಾಯಕನಾಗಿ ಮೊದಲ ಬಾರಿಗೆ ಜಸ್ಪ್ರೀತ್ ಬುಮ್ರಾ ಆಯ್ಕೆಯಾಗಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಏಕದಿನ ತಂಡ:
ಕೆ.ಎಲ್ ರಾಹುಲ್ (ಸಿ), ಶಿಖರ್ ಧವನ್, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಇಶನ್ ಕಿಶನ್ (ವಿಕೆಟ್ ಕೀಪರ್), ಯುಜವೇಂದ್ರ ಚಾಹಲ್, ಆರ್. ಅಶ್ವಿನ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ (ಉಪನಾಯಕ) , ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್
ಏಕದಿನ ಸರಣಿ ವೇಳಾಪಟ್ಟಿ
ಭಾರತವು ಮೂರು ಏಕದಿನ ಪಂದ್ಯಗಳನ್ನು ಸಹ ಆಡುತ್ತದೆ. ಆದರೆ ಬಿಸಿಸಿಐ ಮೊದಲೇ ಘೋಷಿಸಿದಂತೆ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಮತ್ತೆ ನಿಗದಿಪಡಿಸಲಾಗುತ್ತದೆ.
ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್ ಟೌನ್, ಸಮಯ - 2.00 PM