ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ. ಆಫ್ರಿಕಾ: ಏಕದಿನ ಸರಣಿಗೆ ಟೀಮ್ ಇಂಡಿಯಾದಲ್ಲಿ 2 ಬದಲಾವಣೆ

Ind vs SA, ODI series: two changes in Team India squad Jayant Yadav replaces Sundar and Saini Added

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿ ಅಂತಿಮ ಘಟ್ಟವನ್ನು ತಲುಪಿದೆ. ಈ ಸರಣಿಯ ಅಂತ್ಯವಾಗುತ್ತಿದ್ದಂತೆಯೇ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಈ ಸರಣಿಗಾಗಿ ಬಿಸಿಸಿಐನ ಆಯ್ಕೆ ಸಮಿತಿ ಈಗಾಗಲೇ ಟೀಮ್ ಇಂಡಿಯಾ ತಂಡವನ್ನು ಪ್ರಕಡಿಸಿದೆ. ಈ ತಂಡದಲ್ಲಿ ಈಗ ಎರಡು ಬದಲಾವಣೆ ಮಾಡಲಾಗಿದ್ದು ಇಂದು ಪರಿಷ್ಕೃತ ತಂಡವನ್ನು ಪ್ರಕಟಿಸಿದೆ.

ಇನ್ನು ಏಕದಿನ ಸರಣಿಗೆ ಮುನ್ನ ಟೀಮ್ ಇಂಡಿಯಾದ ಆಲ್‌ರೌಂಡರ್ ವಾಶಿಂಗ್ಟನ್ ಸುಂದರ್ ಕೊರೊನಾವೈರಸ್‌ಗೆ ತುತ್ತಾಗಿದ್ದು ಅವರು ಸರಣಿಯಿಂದ ಸಂಪೂರ್ಣವಾಗಿ ಹೊರಗುಳಿಯಲಿದ್ದಾರೆ. ಅವರ ಸ್ಥಾನಕ್ಕೆ ಜಯಂತ್ ಯಾದವ್ ಅವರನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಇನ್ನು ಈ ಸರಣಿಯಲ್ಲಿ ಟೀಮ್ ಇಂಡಿಯಾ ಸ್ಕ್ವಾಡ್‌ಗೆ ಮತ್ತೋರ್ವ ವೇಗಿಯನ್ನು ಕೂಡ ಆಯ್ಕ ಸಮಿಸಿ ಸೇರ್ಪಡೆಗೊಳಿಸಿದ್ದು ನವದೀಪ್ ಸೈನಿ ಕೂಡ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ. ಎರಡನೇ ಟೆಸ್ಟ್‌ನಲ್ಲಿ ಮೊಹಮ್ಮದ್ ಸಿರಾಜ್ ಗಾಯಕ್ಕೆ ತುತ್ತಾಗಿರುವ ಕಾರಣ ಹೆಚ್ಚುವರಿ ಆಟಗಾರನನ್ನು ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ. ಹೀಗಾಗಿ ದಕ್ಷಿಣ ಆಪ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ 19 ಆಟಗಾರರ ಸ್ಕ್ವಾಡ್‌ನೊಂದಿಗೆ ಕಣಕ್ಕಿಳಿಯಲಿದೆ.

ಐಪಿಎಲ್: ನೂತನ ಫ್ರಾಂಚೈಸಿಗಲ್ಲ, ಈ ತಂಡಕ್ಕೆ ನಾಯಕನಾಗಲಿದ್ದಾರೆ ಶ್ರೇಯಸ್ ಐಯ್ಯರ್ಐಪಿಎಲ್: ನೂತನ ಫ್ರಾಂಚೈಸಿಗಲ್ಲ, ಈ ತಂಡಕ್ಕೆ ನಾಯಕನಾಗಲಿದ್ದಾರೆ ಶ್ರೇಯಸ್ ಐಯ್ಯರ್

ಕೆಎಲ್ ರಾಹುಲ್ ನಾಯಕತ್ವ: ಇನ್ನು ವಿರಾಟ್ ಕೊಹ್ಲಿ ಏಕದಿನ ನಾಯಕತ್ವದಿಂದ ಕೆಳಗಿಳಿದ ಬಳಿಕ ನಡೆಯುತ್ತಿರುವ ಮೊದಲ ಸರಣಿ ಇದಾಗಿದೆ. ಆದರೆ ಈ ಸರಣಿಗೆ ರೋಹಿತ್ ಶರ್ಮಾ ಅಲಭ್ಯವಾಗಿರುವ ಕಾರಣ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಜಸ್ಪ್ರೀತ್ ಬೂಮ್ರಾ ದಕ್ಷಿಣ ಆಪ್ರಿಕಾ ವಿರುದ್ಧದ ಏಕದಿನ ಸರಣಿಗೆ ಟೀಮ್ ಇಂಡಿಯಾದ ಉಪನಾಯಕನಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ.

ಸದ್ಯ ನಡೆಯುತ್ತಿರು ಟೆಸ್ಟ್ ಸರಣಿಯ ಬಳಿಕ ಏಕದಿನ ಸರಣಿ ಆಯೋಜನೆಯಾಗಲಿದೆ. ಏಕದಿನ ಸರಣಿ ಕೂಡ ಮೂರು ಪಂದ್ಯಗಳನ್ನು ಒಳಗೊಂಡಿದ್ದು ಎರಡು ತಂಡಗಳ ಮಧ್ಯೆ ಜಿದ್ದಾಜಿದ್ದಿನ ಕದನವೇರ್ಪಡಲಿದೆ. ಜನವರಿ 19 ಮತ್ತು 21ರಂದು ಮೊದಲ ಎರಡು ಏಕದಿನ ಪಂದ್ಯಗಳು ನಡೆಯಲಿದ್ದು ಈ ಎರಡು ಪಂದ್ಯಗಳು ಪಾರ್ಲ್‌ನ ಬೊಲ್ಯಾಂಡ್ ಪಾರ್ಕ್‌ನಲ್ಲಿ ನಡೆಯಲಿದೆ. ಅಂತಿಮ ಏಕದಿನ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಜನವರಿ 23ರಂದು ನಡೆಯಲಿದೆ.

ಇನ್ನು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಮೊದಲ ಎರಡು ಪಮದ್ಯಗಳು ಈಗಾಗಲೇ ಅಂತ್ಯವಾಗಿದೆ. ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿ ಸರಣಿಯಲ್ಲಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿತ್ತು. ಆದರೆ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ದಕ್ಷಿಣ ಆಪ್ರಿಕಾ ತಮಡ ಭಾರತವನ್ನು ಮಣಿಸುವಲ್ಲಿ ಯಶಸ್ವಿಯಾಗಿದೆ. ಹೀಗಾಗಿ ಸರಣಿಯನ್ನು ಎರಡು ತಮಡಗಳು ಕೂಡ 1-1 ಅಂತರದಿಂದ ಸಮಬಲಗೊಳಿಸಿದೆ. ಇದೀಗ ಅಂತಿಮ ಪಂದ್ಯ ನಡೆಯುತ್ತಿದ್ದು ಎರಡು ತಂಡಗಳಿಗೂ ಟೆಸ್ಟ್ ಸರಣಿ ಗೆಲ್ಲಲು ನಿರ್ಣಾಯಕ ಪಂದ್ಯವಾಗಿದೆ.

ಪ್ರೊ ಕಬ್ಬಡಿಯಲ್ಲಿ ಅಗ್ರ ಸ್ಥಾನಕ್ಕೆ ಏರಿದೆ ಈ ತಂಡ ! | Oneindia Kannada

ಸಿಕ್ಸರ್ ಸಿಡಿಸೋದ್ರಲ್ಲಿ ಕೊಹ್ಲಿಗಿಂತ ಮುಂದಿರುವ ಉಮೇಶ್ ಯಾದವ್: ವಿರಾಟ್‌ನ ಅಪರೂಪದ ಸಿಕ್ಸರ್!

ಟೀಮ್ ಇಂಡಿಯಾ ಸ್ಕ್ವಾಡ್: ಕೆಎಲ್ ರಾಹುಲ್ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಶಿಖರ್ ಧವನ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ರಿಷಬ್ ಪಂತ್ (ವಿಕೆಟ್-ಕೀಪರ್), ಇಶಾನ್ ಕಿಶನ್ (ವಿಕೆಟ್-ಕೀಪರ್), ಯುಜ್ವೇಂದ್ರ ಚಾಹಲ್ , ಆರ್ ಅಶ್ವಿನ್, ಭುವನೇಶ್ವರ್ ಕುಮಾರ್, ದೀಪಕ್ ಚಹಾರ್, ಪ್ರಸಿದ್ಧ್ ಕೃಷ್ಣ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಜಯಂತ್ ಯಾದವ್, ನವದೀಪ್ ಸೈನಿ.

Story first published: Wednesday, January 12, 2022, 17:57 [IST]
Other articles published on Jan 12, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X