ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕಪಿಲ್ ದೇವ್ ದಾಖಲೆ ಮೇಲೆ ಆರ್ ಅಶ್ವಿನ್ ಕಣ್ಣು: ಮಹತ್ವದ ಮೈಲಿಗಲ್ಲು ದಾಟಲು ಶಮಿಗೆ ಕಾತುರ

Ind vs SA: R Ashwin eye on Kapil Dev record and Shami also near to major Test milestone

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಆರಂಭಕ್ಕೆ ಇನ್ನು ಬೆರಳೆಣಿಕೆಯ ದಿನಗಳು ಮಾತ್ರವೇ ಬಾಕಿಯಿದೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಟೆಸ್ಟ್ ಸರಣಿಯನ್ನು ಗೆಲ್ಲುವ ನಿಟ್ಟಿನಲ್ಲಿ ವಿರಾಟ್ ಕೊಹ್ಲಿ ಪಡೆ ತೀವ್ರ ಕಸರತ್ತನ್ನು ನಡೆಸುತ್ತಿದೆ. ಇನ್ನು ಈ ಸರಣಿಯಲ್ಲಿ ಭಾರತದ ಕೆಲ ಆಟಗಾರರು ಮಹತ್ವದ ಮೈಲಿಗಲ್ಲುಗಳನ್ನು ದಾಟಲು ಕಾತರಿಸುತ್ತಿದ್ದಾರೆ. ಅದರಲ್ಲೂ ಟೀಮ್ ಇಂಡಿಯಾದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತದ ಪರವಾಗಿ ಮಹತ್ವದ ಸಾಧನೆ ಮಾಡುವ ಸನಿಹದಲ್ಲಿದ್ದಾರೆ.

2011ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧಧ ಸರಣಿಯಲ್ಲಿ ಆರ್ ಅಶ್ವಿನ್ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ. ಈವರಗೆ 30 ಬಾರಿ ಐದು ವಿಕೆಟ್‌ಗಳ ಗೊಂಚಲು ಪಡೆದಿರುವ ಆರ್ ಅಶ್ವಿನ್ 7 ಬಾರಿ ಪಂದ್ಯವೊಂದರಲ್ಲಿ 10 ವಿಕೆಟ್‌ಗಳ ಗೊಂಚಲು ಪಡೆದು ಮಿಂಚಿದ್ದಾರೆ. ಈಗ ಆರ್ ಅಶ್ವಿನ್ ಪ್ರತಿ ಪಂದ್ಯಲ್ಲಿಯೂ ಒಂದಲ್ಲಾ ಒಂದು ಮೈಲಿಗಲ್ಲುಗಳನ್ನು ಸಾಧಿಸುತ್ತಾ ಮುನ್ನುಗ್ಗುತ್ತಿದ್ದಾರೆ.

ಭಾರತ vs ದ.ಆಫ್ರಿಕಾ ಚೊಚ್ಚಲ ಟೆಸ್ಟ್: ಮೊದಲೆರಡು ದಿನ ಅನುಮಾನ, ಆರಂಭಕ್ಕೂ ಮುನ್ನ 2 ಕಹಿಸುದ್ದಿ!ಭಾರತ vs ದ.ಆಫ್ರಿಕಾ ಚೊಚ್ಚಲ ಟೆಸ್ಟ್: ಮೊದಲೆರಡು ದಿನ ಅನುಮಾನ, ಆರಂಭಕ್ಕೂ ಮುನ್ನ 2 ಕಹಿಸುದ್ದಿ!

ಕಪಿಲ್ ದಾಖಲೆ ಮೇಲೆ ಅಶ್ವಿನ್ ಕಣ್ಣು: ನಿರಂತರವಾಗಿ ಎದುರಾಳಿ ಬ್ಯಾಟರ್‌ಗಳಿಗೆ ಸಿಂಹಸ್ವಪ್ನವಾಗಿ ಕಾಡುತ್ತಿರುವ ಆರ್ ಅಶ್ವಿನ್ ಅತಿ ವೇಗವಾಗಿ 400 ಟೆಸ್ಟ್ ವಿಕೆಟ್ ಪಡೆದ ಭಾರತದ ಬೌಲರ್ ಎನಿಸಿದ್ದಾರೆ. ಇತ್ತೀಚಗಷ್ಟೇ ಹರ್ಭಜನ್ ಸಿಂಗ್ ಅವರನ್ನು ಹಿಂದಿಕ್ಕಿರುವ ಆರ್ ಆಶ್ವಿನ್ ಭಾರತದ ಪರವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ಏರಿದ್ದರು. ಇದೀಗ ದಕ್ಷಿಣ ಆಪ್ರಿಕಾ ವಿರುದ್ಧದ ಸರಣಿಯಲ್ಲಿ ಆಡಲು ಸಜ್ಜಾಗಿರುವ ಆರ್ ಅಶ್ವಿನ್ ವಿಶ್ವ ಕ್ರಿಕೆಟ್ ಕಂಡ ಶ್ರೇಷ್ಠ ಆಲ್‌ರೌಂಡರ್ ಕಪಿಲ್‌ದೇವ್ ಅವರ ಸಾಧನೆಯನ್ನು ಹಿಂದಿಕ್ಕಲು ಸಜ್ಜಾಗಿದ್ದಾರೆ.

ಆರ್ ಅಶ್ವಿನ್ ಸದ್ಯ ಟೆಸ್ಟ್ ಕ್ರಿಕೆಟ್‌ನಲ್ಲಿ 427 ವಿಕೆಟ್ ಪಡೆದುಕೊಂಡಿದ್ದಾರೆ. ಭಾರತದ ಪರವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಕಪಿಲ್‌ದೇವ್ ಅವರ ದಾಖಲೆ ಹಿಂದಿಕ್ಕಲು ಆರ್ ಅಶ್ವಿನ್‌ಗೆ ಇನ್ನು ಕೇವಲ 8 ವಿಕೆಟ್‌ಗಳ ಅಗತ್ಯವಿದೆ. ಇನ್ನು ಇದೇ ಸಮದರ್ಭದಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ವೇಗಿ ಡೇಲ್ ಸ್ಟೇನ್ ಅವರ ಟೆಸ್ಟ್ ವಿಕೆಟ್‌ಗಳ ಸಾಧನೆಯನ್ನು ಹಿಂದಿಕ್ಕುವ ಅವಕಾಶ ಕೂಡ ಆರ್ ಅಶ್ವಿನ್ ಮುಂದಿದ್ದು ಅದಕ್ಕಾಗಿ ಅಶ್ವಿನ್ ಮೂರು ಪಂದ್ಯಗಳ ಈ ಸರಣಿಯಲ್ಲಿ 12 ವಿಕೆಟ್‌ಗಳನ್ನು ಪಡೆಯಬೇಕಿದೆ.

ಭಾರತ V/S ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ 5 ಬೌಲರ್ಸ್‌ಭಾರತ V/S ದಕ್ಷಿಣ ಆಫ್ರಿಕಾ: ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ 5 ಬೌಲರ್ಸ್‌

ಮಹತ್ವದ ಮೈಲಿಗಲ್ಲಿನ ಮೇಲೆ ಶಮಿ ಕಣ್ಣು: ಇನ್ನು ಟೀಮ್ ಇಂಡಿಯಾದ ಪ್ರಮುಖ ವೇಗಿ ಮೊಹಮ್ಮದ್ ಶಮಿ ಇತ್ತೀಚೆಗೆ ನಡೆದ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿಶ್ರಾಂತಿಯನ್ನು ಪಡೆದುಕೊಂಡಿದ್ದರು. ಈಗ ಮತ್ತೆ ತಂಡಕ್ಕೆ ಮರಳಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಈ ಸರಣಿಯಲ್ಲಿ ಕೇವಲ 5 ವಿಕೆಟ್‌ಗಳನ್ನು ಶಮಿ ಪಡೆದರೆ 200 ವಿಕೆಟ್‌ಗಳನ್ನು ಪಡೆದ ಆಟಗಾರರ ಪಟ್ಟಿಗೆ ಸೇರಿಕೊಳ್ಳಲಿದ್ದಾರೆ. ಈ ಮಹತ್ವದ ಮೈಲಿಗಲ್ಲನ್ನು ಸಾಧಿಸಲು ಶಮಿ ಸಜ್ಜಾಗಿದ್ದಾರೆ.

ಕಪಿಲ್‌ದೇವ್, ಜಹೀರ್ ಖಾನ್, ಇಶಾಂತ್ ಶರ್ಮಾ ಹಾಗೂ ಜಾವಗಲ್ ಶ್ರೀಕಾಂತ್ ಬಳಿಕ ಈ ಸಾಧನೆ ಮಾಡಲಿರುವ ಭಾರತದ ಕೇವಲ 5ನೇ ವೇಗದ ಬೌಲರ್ ಎನಿಸಿಕೊಳ್ಳಲಿದ್ದಾರೆ. ಇನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ 100 ವಿಕೆಟ್ ಪಡೆದ ಸಾಧನೆ ಮಾಡಲು ಶಮಿ 8 ವಿಕೆಟ್‌ಗಳನ್ನು ಪಡೆಯಬೇಕಿದೆ.

ಇನ್ನು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಈ ಟೆಸ್ಟ್ ಸರಣಿಯನ್ನು ಪ್ರೇಕ್ಷಕರ ಅಲಭ್ಯತೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ದಕ್ಷಿಣ ಆಫ್ರಿಕಾದಲ್ಲಿ ಕೊರೊನಾವೈರಸ್‌ನ ಹೊಸ ರೂಪಾಂತರಿಯ ಅಬ್ಬರ ಹೆಚ್ಚಾಗಿರುವ ಕಾರಣದಿಂದಾಗಿ ಈ ಮುನ್ನೆಚ್ಚರಿಕೆಯನ್ನು ತೆಗೆದುಕೊಳ್ಳಲಾಗಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಹಾಗೂ ಏಕದಿನ ಪಂದ್ಯಗಳ ಸರಣಿಯಲ್ಲಿ ತಲಾ ಮೂರು ಪಂದ್ಯಗಳಲ್ಲಿ ಈ ಎರಡು ತಂಡಗಳು ಮುಖಾಮುಖಿಯಾಗಲಿದೆ. ಟೆಸ್ಟ್ ಸರಣಿಯ ಮೂರು ಪಂದ್ಯಗಳು ಕ್ರಮವಾಗಿ ಸೆಂಚೂರಿಯನ್, ಕೇಪ್‌ಟೌನ್ ಹಾಗೂ ಜೋಹನ್ಸ್‌ಬರ್ಗ್‌ನಲ್ಲಿ ನಡೆಯಲಿದೆ. ಏಕದಿನ ಸರಣಿಯ ಪಂದ್ಯಗಳು ಪಾರ್ಲ್ ಹಾಗೂ ಕೇಪ್‌ಟೌನ್‌ನಲ್ಲಿ ಆಯೋಜನೆಯಾಗಲಿದೆ.

ಟೀಮ್ ಇಂಡಿಯಾ ಸ್ಕ್ವಾಡ್: ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಶ್ರೇಯಸ್ ಅಯ್ಯರ್, ಅಜಿಂಕ್ಯ ರಹಾನೆ, ಹನುಮ ವಿಹಾರಿ, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊಹಮ್ಮದ್. ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಪ್ರಿಯಾಂಕ್ ಪಾಂಚಾಲ್
ಮೀಸಲು ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ಅರ್ಜನ್ ನಾಗ್ವಾಸ್ವಾಲ್ಲಾ, ದೀಪಕ್ ಚಾಹರ್

Cricket Flashback 2021 Episode 02 | Top 10 Richest cricketers of India | Oneindia Kannada

Story first published: Tuesday, December 21, 2021, 23:44 [IST]
Other articles published on Dec 21, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X