ಸದ್ಯ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಬಳಿಕ ಭಾರತ ಕ್ರಿಕೆಟ್ ತಂಡವು ಡಿಸೆಂಬರ್ ಮೊದಲ ವಾರದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಲಿದೆ.
ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಮೂರು ಟಿ20, ಮೂರು ಏಕದಿನ ಹಾಗೂ ಎರಡು ಟೆಸ್ಟ್ ಪಂದ್ಯಗಳ ಬಹು-ಮಾದರಿಯ ಸರಣಿಯನ್ನು ಆಡಬೇಕಿದೆ. ಡಿಸೆಂಬರ್ 10ರಿಂದ ಆರಂಭವಾಗುವ ಟಿ20 ಮೊದಲ ಪಂದ್ಯದಿಂದ ಭಾರತ ತಂಡದ ಆಫ್ರಿಕಾ ಪ್ರವಾಸ ಆರಂಭಿಸಲಿದೆ. ಭಾರತ ತಂಡದ ದಕ್ಷಿಣ ಆಫ್ರಿಕಾ ಪ್ರವಾಸದ ಸಂಪೂರ್ಣ ವೇಳಾಪಟ್ಟಿಯನ್ನು ಇಲ್ಲಿದೆ.

ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಗುರುವಾರ, ನವೆಂಬರ್ 30ರಂದು ಭಾರತ ತಂಡಗಳನ್ನು ಪ್ರಕಟಿಸಿದೆ. 2024ರ ವಿಶ್ವಕಪ್‌ಗೆ ಆಯ್ಕೆಯಾಗುವ ಆಟಗಾರರು ಮಾತ್ರ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ ಎಂದು ಅಂದಾಜಿಸಲಾಗಿದೆ.
ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಟಿ20 ತಂಡವು ಮೂರು ಪಂದ್ಯಗಳ ಸರಣಿಯೊಂದಿಗೆ ದಕ್ಷಿಣ ಆಫ್ರಿಕಾ ಪ್ರವಾಸ ಪ್ರಾರಂಭಿಸಲಿದೆ. ಇದಾದ ಬಳಿಕ ಮೂರು ಏಕದಿನ ಪಂದ್ಯಗಳು ನಡೆಯಲಿದ್ದು, ಅಂತಿಮವಾಗಿ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟಿ20 ಪಂದ್ಯವು ಡಿಸೆಂಬರ್ 10ರಂದು ಡರ್ಬನ್‌ನಲ್ಲಿ ನಡೆಯಲಿದೆ. ಎರಡನೇ ಟಿ20 ಪಂದ್ಯ ಡಿಸೆಂಬರ್ 12ರಂದು ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ಮತ್ತು ಮೂರನೇ ಹಾಗೂ ಅಂತಿಮ ಟಿ20 ಪಂದ್ಯವು ಡಿಸೆಂಬರ್ 14ರಂದು ಜೋಹಾನ್ಸ್‌ಬರ್ಗ್‌ನಲ್ಲಿ ನಡೆಯಲಿದೆ.
ಬಳಿಕ ಡಿಸೆಂಬರ್ 17ರಿಂದ ಏಕದಿನ ಸರಣಿ ಆರಂಭವಾಗಲಿದ್ದು, ಜೋಹಾನ್ಸ್‌ಬರ್ಗ್‌ನಲ್ಲಿ ಮೊದಲ ಪಂದ್ಯ ನಡೆಯಲಿದ್ದರೆ, ಎರಡನೇ ಏಕದಿನ ಪಂದ್ಯ ಡಿಸೆಂಬರ್ 19ರಂದು ಸೇಂಟ್ ಜಾರ್ಜ್ ಪಾರ್ಕ್‌ನಲ್ಲಿ ಮತ್ತು ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯವು ಡಿಸೆಂಬರ್ 21ರಂದು ಪಾರ್ಲ್‌ನಲ್ಲಿ ನಡೆಯಲಿದೆ.
ಇದಾದ ನಂತರ ಡಿಸೆಂಬರ್ 26ರಿಂದ ಸೆಂಚುರಿಯನ್‌ನಲ್ಲಿ ಮೊದಲ ಬಾಕ್ಸಿಂಗ್ ಡೇ ಟೆಸ್ಟ್ ನಡೆಯಲಿದೆ. ಎರಡನೇ ಟೆಸ್ಟ್ ಜನವರಿ 3ರಿಂದ ಆರಂಭವಾಗಲಿದೆ.
ದಕ್ಷಿಣ ಆಫ್ರಿಕಾ ಪ್ರವಾಸದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್‌ಗಳನ್ನು ಕೈ ಬಿಡಲಾಗಿದೆ. ಟೆಸ್ಟ್ ಸ್ಪೇಷಲಿಸ್ಟ್ ಆಟಗಾರರಾದ ಚೇತೇಶ್ವರ್ ಪೂಜಾರ್ ಹಾಗೂ ಅಜಿಂಕ್ಯ ರಹಾನೆಗೆ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದ್ದಾರೆ.
ಯುವ ಆಟಗಾರರಾದ ಯಶಸ್ವಿ ಜೈಸ್ವಾಲ್, ರುತುರಾಜ್ ಗಾಯಕ್ವಾಡ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟೆಸ್ಟ್‌ನಲ್ಲಿ ವಿಕೆಟ್ ಕೀಪರ್ ಆಗಿ ಇಶಾನ್ ಕಿಶನ್ ಹಾಗೂ ಕೆಎಲ್ ರಾಹುಲ್ ಕಾಣಿಸಿಕೊಂಡಿದ್ದಾರೆ. ಯುವ ವೇಗಿ ಮುಖೇಶ್ ಕುಮಾರ್ ಅವರು ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರು ವಿಶ್ರಾಂತಿಗಾಗಿ ಬಿಸಿಸಿಐಗೆ ವಿನಂತಿಸಿದ ಕಾರಣ ವೈಟ್-ಬಾಲ್ ಸರಣಿಗೆ ಪ್ರಯಾಣಿಸುವುದಿಲ್ಲ. ವೇಗಿ ಮೊಹಮ್ಮದ್ ಶಮಿ ಪ್ರಸ್ತುತ ವೈದ್ಯಕೀಯ ಚಿಕಿತ್ಸೆಯಲ್ಲಿರುವ ಕಾರಣ, ಅವರ ಲಭ್ಯತೆಯು ಫಿಟ್‌ನೆಸ್‌ಗೆ ಒಳಪಟ್ಟಿರುತ್ತದೆ.
ಯಶಸ್ವಿ ಜೈಸ್ವಾಲ್, ಶುಭ್ಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪ ನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್.
ರುತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ/ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಶ್‌ದೀಪ್ ಸಿಂಗ್, ದೀಪಕ್ ಚಹಾರ್.
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.