For Quick Alerts
ALLOW NOTIFICATIONS  
For Daily Alerts
 

IND vs SA: ವೈಟ್‌ಬಾಲ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದ ವಿರಾಟ್ ಕೊಹ್ಲಿ; ಖಚಿತಪಡಿಸದ ರೋಹಿತ್ ಶರ್ಮಾ!

2023ರ ಐಸಿಸಿ ಏಕದಿನ ವಿಶ್ವಕಪ್ ಮುಕ್ತಾಯದ ನಂತರ, ಭಾರತೀಯ ಕ್ರಿಕೆಟ್ ತಂಡವು ಹೊಸ ತಲೆಮಾರನ್ನು ಪ್ರವೇಶಿಸುತ್ತಿದೆ. ಅದರ ಸೂಚನೆಯಂತೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಯುವ ತಂಡವು ಆಸ್ಟ್ರೇಲಿಯಾ ವಿರುದ್ಧ 5 ಪಂದ್ಯಗಳ ಟಿ20 ಸರಣಿಯಲ್ಲಿ ಕಣಕ್ಕಿಳಿದಿದೆ.

ಇದಾದ ನಂತರ, ದಕ್ಷಿಣ ಆಫ್ರಿಕಾ ವಿರುದ್ಧದ ಬಹು-ಮಾದರಿಯ ಪ್ರವಾಸವು ಸಮೀಪದಲ್ಲಿದೆ. ಅನುಭವಿಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರಂತಹ ಹಿರಿಯ ಆಟಗಾರರ ಲಭ್ಯತೆಯ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ.

IND vs SA Series: Virat Kohli Decided to Stay Out South Africa Tour: Rohits Presence Yet to Confirm

ಇದೀಗ ಹರಿಣಗಳ ವಿರುದ್ಧದ ವೈಟ್ ಬಾಲ್ ಸರಣಿಗಳನ್ನು ತಪ್ಪಿಸಿಕೊಳ್ಳಲು ವಿರಾಟ್ ಕೊಹ್ಲಿ ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. ಆದರೆ, ಟೆಸ್ಟ್ ಸರಣಿಗೆ ಮಾತ್ರ ಭಾರತ ತಂಡವನ್ನು ಸೇರಿಕೊಳ್ಳಲಿದ್ದಾರೆ.

ಬಿಸಿಸಿಐನ ಕೆಲವು ಮೂಲಗಳ ಪ್ರಕಾರ, ಡಿಸೆಂಬರ್ 10ರಿಂದ ಪ್ರಾರಂಭವಾಗುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿಯುವುದು ಪಕ್ಕಾ ಆಗಿದೆ.

2022ರ ಟಿ20 ವಿಶ್ವಕಪ್ ಮುಕ್ತಾಯದ ನಂತರ ವಿರಾಟ್ ಕೊಹ್ಲಿಯ ಭವಿಷ್ಯ, ವಿಶೇಷವಾಗಿ ಚುಟುಕು ಸ್ವರೂಪದಲ್ಲಿ ಚರ್ಚೆಯಲ್ಲಿದೆ. ಅನುಭವಿ ಬ್ಯಾಟರ್ ಟಿ20 ಅಂತಾರಾಷ್ಟ್ರೀಯ ಪಂದ್ಯಗಳಿಂದ ದೂರ ಉಳಿದಿದ್ದಾರೆ. ಆದರೆ, ಇದೀಗ ಏಕದಿನ ಸರಣಿಯನ್ನು ತಪ್ಪಿಸಿಕೊಳ್ಳುತ್ತಿರುವುದು ಅಚ್ಚರಿ ಮೂಡಿಸಿದೆ.

IND vs SA Series: Virat Kohli Decided to Stay Out South Africa Tour: Rohits Presence Yet to Confirm

ಇನ್ನು ನಾಯಕ ರೋಹಿತ್ ಶರ್ಮಾ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ನಿಯೋಜನೆಯ ಭಾಗವಾಗುವುದನ್ನು ಇನ್ನೂ ಖಚಿತಪಡಿಸಿಲ್ಲ ಎಂದು ತಿಳಿದು ಬಂದಿದೆ.ರೋಹಿತ್ ಶರ್ಮಾ ಕೂಡ ಹರಿಣಗಳ ನಾಡಿನಲ್ಲಿ ನಡೆಯುವ ಟಿ20 ಸರಣಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ.

ಭಾರತದ ಮಾಜಿ ಆಲ್‌ರೌಂಡರ್ ಅಜಿತ್ ಅಗರ್ಕರ್ ನೇತೃತ್ವದ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು ಮುಂದಿನ ದಿನಗಳಲ್ಲಿ ಎಲ್ಲಾ ಮೂರು ಸ್ವರೂಪಗಳಿಗೆ ಪ್ರತ್ಯೇಕ ಭಾರತ ತಂಡವನ್ನು ಆಯ್ಕೆ ಮಾಡಲಿದೆ.

ಸೆಂಚುರಿಯನ್‌ನಲ್ಲಿ ಬಾಕ್ಸಿಂಗ್ ದಿನದಂದು ಪ್ರಾರಂಭವಾಗುವ ಟೆಸ್ಟ್ ಸರಣಿಗಾಗಿ ಇಬ್ಬರು ಹಿರಿಯ ಬ್ಯಾಟರ್‌ಗಳು ಭಾರತೀಯ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಸದ್ಯ ವಿರಾಟ್ ಕೊಹ್ಲಿ ಲಂಡನ್‌ನಲ್ಲಿ ರಜೆಯಲ್ಲಿದ್ದಾರೆ ಎನ್ನಲಾಗಿದೆ. ರೋಹಿತ್ ಶರ್ಮಾ ಕೂಡ ಇಂಗ್ಲೆಂಡ್‌ನಲ್ಲಿದ್ದಾರೆ ಎಂದು ವರದಿಯಾಗಿದೆ. ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾ ವಿರುದ್ಧದ ಹೃದಯವಿದ್ರಾವಕ ಸೋಲಿನ ನಂತರ ಇನ್ನೂ ಯಾವುದೇ ಸ್ವರೂಪದ ಆಟದಲ್ಲಿ ಮೈದಾನಕ್ಕಿಳಿದಿಲ್ಲ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಇಬ್ಬರೂ ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದರು. ಮಾಜಿ ನಾಯಕ ಐಸಿಸಿ ಪಂದ್ಯಾವಳಿಯನ್ನು ಅಗ್ರ ರನ್ ಗಳಿಸಿದ ಆಟಗಾರನಾಗಿ ಮುಗಿಸಿದರು.

ಯಾವಾಗ ಮತ್ತು ಯಾವ ಸಾಮರ್ಥ್ಯದ ಅಡಿಯಲ್ಲಿ ಇವರಿಬ್ಬರು ವೈಟ್-ಬಾಲ್ ತಂಡಕ್ಕೆ ಮರಳುವ ಗುರಿ ಹೊಂದಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

Story first published: Wednesday, November 29, 2023, 11:44 [IST]
Other articles published on Nov 29, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+