IND vs SA 2ನೇ ಟಿ20 ಪಂದ್ಯ: ನೀರಸ ಬ್ಯಾಟಿಂಗ್ ಪ್ರದರ್ಶಿಸಿದ ಭಾರತ; ದಕ್ಷಿಣ ಆಫ್ರಿಕಾಗೆ ಸಾಮಾನ್ಯ ರನ್ ಗುರಿ

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ 5 ಪಂದ್ಯಗಳ ಟಿ ಟ್ವೆಂಟಿ ಸರಣಿ ನಡೆಯುತ್ತಿದ್ದು, ಇಂದು ( ಜೂನ್ 12 ) ಕಟಕ್ ನಗರದ ಬಾರಬತಿ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಇತ್ತಂಡಗಳ ನಡುವಿನ ದ್ವಿತೀಯ ಟಿ ಟ್ವೆಂಟಿ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಫೀಲ್ಡಿಂಗ್ ಆಯ್ದುಕೊಂಡು ಎದುರಾಳಿ ಟೀಮ್ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿರುವ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 148 ರನ್ ಕಲೆಹಾಕಿದ್ದು ಪ್ರವಾಸಿ ದಕ್ಷಿಣ ಆಫ್ರಿಕಾಗೆ 149 ರನ್‌ಗಳ ಸಾಮಾನ್ಯ ಗುರಿಯನ್ನು ನೀಡಿದೆ.
ಟೀಮ್ ಇಂಡಿಯಾ ಪರ ಆರಂಭಿಕ ಆಟಗಾರರಾಗಿ ರುತುರಾಜ್ ಗಾಯಕ್ವಾಡ್ ಮತ್ತು ಇಶಾನ್ ಕಿಶನ್ ಕಣಕ್ಕಿಳಿದರು. ರುತುರಾಜ್ ಗಾಯಕ್ವಾಡ್ 1 ರನ್ ಕಲೆಹಾಕಿ ಮೊದಲನೇ ಓವರ್‌ನಲ್ಲಿಯೇ ವಿಕೆಟ್ ಒಪ್ಪಿಸಿ ಪೆವಿಲಿಯನ್ ಸೇರಿಕೊಂಡರೆ, ಇಶಾನ್ ಕಿಶನ್ 21 ಎಸೆತಗಳಲ್ಲಿ 34 ರನ್ ಕಲೆ ಹಾಕಿದರು. ಇನ್ನುಳಿದಂತೆ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶ್ರೇಯಸ್ ಅಯ್ಯರ್ 35 ಎಸೆತಗಳಲ್ಲಿ 40 ರನ್ ಬಾರಿಸಿದರೆ, ರಿಷಭ್ ಪಂತ್ 5 ರನ್, ಹಾರ್ದಿಕ್ ಪಾಂಡ್ಯ 9 ರನ್, ಅಕ್ಷರ್ ಪಟೇಲ್ 10 ರನ್ ಕಲೆಹಾಕಿ ನಿರಾಸೆ ಮೂಡಿಸಿದರು. ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದಿನೇಶ್ ಕಾರ್ತಿಕ್ ಅಜೇಯ 30 ರನ್ ಬಾರಿಸಿದರೆ, ಹರ್ಷಲ್ ಪಟೇಲ್ 12 ರನ್ ಕಲೆಹಾಕಿ ಅಜೇಯರಾಗಿ ಉಳಿದರು.

ಅಂತಿಮ 2 ಓವರ್‌ನಲ್ಲಿ ಅಬ್ಬರಿಸಿದ ದಿನೇಶ್ ಕಾರ್ತಿಕ್
ಏಳನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ 16 ಎಸೆತಗಳನ್ನು ಎದುರಿಸಿ ಕೇವಲ 9 ರನ್ ಬಾರಿಸಿದ್ದರು. ನಂತರ 19ನೇ ಓವರ್‌ನಲ್ಲಿ 2 ಬೌಂಡರಿ ಚಚ್ಚಿದ ದಿನೇಶ್ ಕಾರ್ತಿಕ್ ಅಂತಿಮ ಓವರ್‌ನಲ್ಲಿ 2 ಸಿಕ್ಸರ್ ಸಿಡಿಸಿ ಅಬ್ಬರಿಸಿ ತಂಡದ ಮೊತ್ತ ಹೆಚ್ಚಾಗುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದರು. ದಿನೇಶ್ ಕಾರ್ತಿಕ್ 21 ಎಸೆತಗಳನ್ನು ಎದುರಿಸಿ 2 ಬೌಂಡರಿ ಮತ್ತು 2 ಸಿಕ್ಸರ್ ಸಹಿತ ಅಜೇಯ 30 ರನ್ ಬಾರಿಸಿದರು.

ದಕ್ಷಿಣ ಆಫ್ರಿಕಾ ಉತ್ತಮ ಬೌಲಿಂಗ್
ದಕ್ಷಿಣ ಆಫ್ರಿಕಾದ ಬೌಲಿಂಗ್ ವಿಭಾಗ ಈ ಪಂದ್ಯದಲ್ಲಿ ಉತ್ತಮವಾಗಿ ಬೌಲಿಂಗ್ ಪ್ರದರ್ಶನವನ್ನು ನೀಡಿತು. ಟೀಮ್ ಇಂಡಿಯಾ ಆಟಗಾರರಿಗೆ ಹೆಚ್ಚು ಮೊತ್ತ ಕಲೆ ಹಾಕಲು ಬಿಡದ ಹರಿಣಗಳು ಸಾಮಾನ್ಯ ಮೊತ್ತಕ್ಕೆ ತಂಡವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾದರು. ಅನ್ರಿಚ್ ನಾರ್ಕಿಯಾ 2 ವಿಕೆಟ್ ಪಡೆದರೆ, ಕಗಿಸೋ ರಬಾಡ, ವೇಯ್ನ್ ಪಾರ್ನೆಲ್, ಪ್ರಿಟೋರಿಯಸ್ ಮತ್ತು ಕೇಶವ್ ಮಹರಾಜ್ ತಲಾ ಒಂದೊಂದು ವಿಕೆಟ್ ಪಡೆದರು.

ಆಡುವ ಬಳಗಗಳು
ಟೀಂ ಇಂಡಿಯಾ ಆಡುವ ಬಳಗ
ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್(ವಿಕೆಟ್ ಕೀಪರ್/ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್
ದಕ್ಷಿಣ ಆಫ್ರಿಕಾ ಆಡುವ ಬಳಗ
ಟೆಂಬಾ ಬವುಮಾ (ನಾಯಕ), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಡೇವಿಡ್ ಮಿಲ್ಲರ್, ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ಡ್ವೈನ್ ಪ್ರಿಟೋರಿಯಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ತಬ್ರೈಜ್ ಶಮ್ಸಿ, ಕಗಿಸೊ ರಬಾಡ, ಅನ್ರಿಚ್ ನಾರ್ಕಿಯಾ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications