Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs SA: ಭಾರತ ವಿರುದ್ಧದ ಸರಣಿಗೆ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡ ಪ್ರಕಟ; ಏಕದಿನ ತಂಡದಿಂದ ಬವುಮಾ ಔಟ್!

ಇದೇ ಡಿಸೆಂಬರ್ 10ರಿಂದ ಪ್ರವಾಸಿ ಭಾರತ ತಂಡದ ವಿರುದ್ಧ ಆರಂಭವಾಗಲಿರುವ ಬಹು-ಮಾದರಿಯ ಸರಣಿಗೆ ಆತಿಥೇಯ ದಕ್ಷಿಣ ಆಫ್ರಿಕಾ ತನ್ನ ಮೂರು ಮಾದರಿಯ ತಂಡಗಳನ್ನು ಸೋಮವಾರ, ಡಿಸೆಂಬರ್ 4ರಂದು ಪ್ರಕಟಿಸಿದೆ.

2023ರ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಾವಳಿಯ ನಂತರ, ದಕ್ಷಿಣ ಆಫ್ರಿಕಾ ತಂಡಕ್ಕೆ ಮೊದಲ ನಿಯೋಜನೆಯಾಗಿದ್ದು, ಭಾರತ ತಂಡದ ವಿರುದ್ಧ ತವರಿನಲ್ಲಿ ಮೂರು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ.

IND vs SA: South Africa Squad Announced For Series Against India; Temba Bavuma out of ODI Squad

ಏಕದಿನ ವಿಶ್ವಕಪ್ ಸೋಲಿನ ಬಳಿಕ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ನಾಯಕ ತೆಂಬಾ ಬವುಮಾ ಅವರನ್ನು ಏಕದಿನ ತಂಡದಿಂದ ಕೈಬಿಡಲಾಗಿದೆ. ಬದಲಿಗೆ ಏಡೆನ್ ಮಾರ್ಕ್ರಾಮ್ ಅವರು ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.

ಏಡೆನ್ ಮಾರ್ಕ್ರಾಮ್ ಅವರು ಟಿ20 ತಂಡವನ್ನು ಸಹ ಮುನ್ನಡೆಸುತ್ತಾರೆ ಮತ್ತು ತೆಂಬಾ ಬವುಮಾ ಭಾರತ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡದ ನಾಯಕರಾಗಿರುತ್ತಾರೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಹೆಚ್ಚು ಗಮನಹರಿಸುವ ಸಲುವಾಗಿ ಏಕದಿನ ತಂಡದಲ್ಲಿ ನಾಯಕ ತೆಂಬಾ ಬವುಮಾ ಮತ್ತು ಕಗಿಸೊ ರಬಾಡ ಅವರು ಭಾರತ ವಿರುದ್ಧದ ವೈಟ್-ಬಾಲ್ ಸರಣಿಯಿಂದ ಹೊರಗುಳಿಯಲು ನಿರ್ಧರಿಸಿದರು.

ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ಸೋತು ನಿರ್ಗಮಿಸಿದ ನಂತರ, ತೆಂಬಾ ಬವುಮಾ ತಮ್ಮ ದೇಶದ ಕ್ರಿಕೆಟ್ ಅಭಿಮಾನಿಗಳಿಂದ ಕಟುವಾದ ಟೀಕೆಗಳನ್ನು ಎದುರಿಸಿದರು. ಆ ಬಳಿಕ, ಅವರನ್ನು ನಾಯಕತ್ವದಿಂದ ತೆಗೆದುಹಾಕುವ ಬಗ್ಗೆ ಮಾತುಕತೆಗಳು ನಡೆದಿವೆ ಆದರೆ ಇಲ್ಲಿಯವರೆಗೆ ಯಾವುದನ್ನೂ ಅಂತಿಮಗೊಳಿಸಲಾಗಿಲ್ಲ.

ಟಿ20 ಸರಣಿಯು ಡಿಸೆಂಬರ್ 10ರಂದು ಪ್ರಾರಂಭವಾಗುತ್ತದೆ. ಕಗಿಸೊ ರಬಾಡ ಅವರು ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಮಾತ್ರ ಗಮನಹರಿಸಿದ್ದರಿಂದ ಏಕದಿನ ತಂಡದಿಂದ ಕೈಬಿಡಲಾಗಿದೆ.

ಆದಾಗ್ಯೂ, 2024ರ ಟಿ20 ವಿಶ್ವಕಪ್ ಪಂದ್ಯಾವಳಿಗೆ ಇನ್ನು ಕೇವಲ ಆರು ತಿಂಗಳುಗಳಿರುವಾಗ, ದಕ್ಷಿಣ ಆಫ್ರಿಕಾ ಟಿ20 ತಂಡದಲ್ಲಿ ಡೆವಾಲ್ಡ್ ಬ್ರೆವಿಸ್ ಅವರನ್ನು ಆಯ್ಕೆ ಮಾಡಲಾಗಿಲ್ಲ.

ತೆಂಬಾ ಬವುಮಾ ಕೂಡ ದಕ್ಷಿಣ ಆಫ್ರಿಕಾದ ಟಿ20 ತಂಡದಲ್ಲಿ ಕಾಣಿಸಿಕೊಂಡಿಲ್ಲ. ಬದಲಿಗೆ, ನಾಂಡ್ರೆ ಬರ್ಗರ್, ಒಟ್ನಿಯೆಲ್ ಬಾರ್ಟ್‌ಮ್ಯಾನ್ ರಾಷ್ಟ್ರೀಯ ತಂಡದಿಂದ ಮೊದಲ ಕರೆ ಪಡೆದಿದ್ದಾರೆ.

ಭಾರತ ವಿರುದ್ಧ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡ

ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮನ್, ಮ್ಯಾಥ್ಯೂ ಬ್ರೀಟ್ಜ್ಕೆ, ನಾಂಡ್ರೆ ಬರ್ಗರ್, ಜೆರಾಲ್ಡ್ ಕೊಯೆಟ್ಜಿ (1ನೇ ಮತ್ತು 2ನೇ ಟಿ20), ಡೊನೊವನ್ ಫೆರೇರಾ, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್ (1ನೇ ಮತ್ತು 2ನೇ ಟಿ20), ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ (1ನೇ ಮತ್ತು 2ನೇ ಟಿ20), ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಲಿಜಾಡ್ ವಿಲಿಯಮ್ಸ್.

ಭಾರತ ವಿರುದ್ಧ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ

ಏಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮನ್, ನಾಂಡ್ರೆ ಬರ್ಗರ್, ಟೋನಿ ಡಿ ಜೊರ್ಜಿ, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಮಿಹ್ಲಾಲಿ ಮ್ಪೊಂಗ್ವಾನಾ, ಡೇವಿಡ್ ಮಿಲ್ಲರ್, ವಿಯಾನ್ ಮುಲ್ಡರ್, ಆಂಡಿಲ್ ಫೆಹ್ಲುಕ್ವಾಯೊ, ತಬ್ರೈಜ್ ಶಮ್ಸಿ, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಕೈಲ್ ವೆರ್ರೆನ್ ಮತ್ತು ಲಿಜಾಡ್ ವಿಲಿಯಮ್ಸ್.

ಭಾರತ ವಿರುದ್ಧ ಟೆಸ್ಟ್ ಸರಣಿಗೆ ದಕ್ಷಿಣ ಆಫ್ರಿಕಾ ತಂಡ

ತೆಂಬಾ ಬವುಮಾ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ನಾಂಡ್ರೆ ಬರ್ಗರ್, ಜೆರಾಲ್ಡ್ ಕೋಟ್ಜಿ, ಟೋನಿ ಡಿ ಜೊರ್ಜಿ, ಡೀನ್ ಎಲ್ಗರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ವಿಯಾನ್ ಮುಲ್ಡರ್, ಲುಂಗಿ ಎನ್ಗಿಡಿ, ಕೀಗನ್ ಪೀಟರ್ಸನ್, ಕಗಿಸೊ ರಬಾಡ, ಟ್ರಿಸ್ಟಾನ್ ಸ್ಟಬ್ಸ್ ಮತ್ತು ಕೈಲ್ ವೆರ್ರೆನ್ನೆ.

Story first published: Monday, December 4, 2023, 13:40 [IST]
Other articles published on Dec 4, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+