ಭಾರತ vs ದ. ಆಫ್ರಿಕಾ: ಐದು ಪಂದ್ಯಗಳ ಟಿ20 ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ಕ್ರಿಕೆಟ್ ಸೌತ್ ಆಫ್ರಿಕಾ

ಐಪಿಎಲ್ ಟೂರ್ನಿಯ ಬಳಿಕ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಭಾರತದಲ್ಲಿ ನಡೆಯಲಿರುವ ಈ ಸರಣಿಯಲ್ಲಿ ಎರಡು ತಂಡಗಳು ಕೂಡ ಐದು ಪಂದ್ಯಗಳಲ್ಲಿ ಮುಖಾಮುಖಿಯಾಗಲಿದೆ. ಈ ಐದು ಪಂದ್ಯಗಳ ಟಿ20 ಸರಣಿಗೆ ದಕ್ಷಿಣ ಆಫ್ರಿಕಾ ತಂಡವನ್ನು ಇಂದು ಪ್ರಕಟಿಸಲಾಗಿದೆ. 16 ಆಟಗಾರರನ್ನು ಒಳಗೊಂಡ ತಂಡವನ್ನು ಪ್ರಕಟಿಸಲಾಗಿದೆ.
ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಫ್ರಿಕಾ ತಂಡದಲ್ಲಿ ಟಿ20 ಸ್ಪೆಶಲಿಸ್ಟ್‌ಗಳನ್ನು ಹೊಂದಿದ್ದು ಭಾರತಕ್ಕೆ ಕಠಿಣ ಸವಾಲೊಡ್ಡಲು ಸಜ್ಜಾಗಿದೆ. ಅನುಭವಿ ಹಾಗೂ ಯುವ ಆಟಗಾರರನ್ನು ಒಳಗೊಂಡ ಸಮತೋಲಿತ ತಂಡ ಇದಾಗಿದ್ದು ಭಾರತದ ವಿರುದ್ಧ ಈ ತಂಡ ಯಾವ ರೀತಿಯ ಪ್ರದರ್ಶನ ನೀಡಲಿದೆ ಎಂಬುದು ಕುತೂಹಲ ಮೂಡಿಸಿದೆ.
ಇನ್ನು ಈ ಸರಣಿಯಲ್ಲಿ ಭಾಗಿಯಾಗಲಿರುವ ಬಹುತೇಕ ಆಟಗಾರರು ಭಾರತದಲ್ಲಿ ಸದ್ಯ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಆಡುತ್ತಿದ್ದಾರೆ. ಸುದೀರ್ಘ ಎರಡು ತಿಂಗಳ ಐಪಿಎಲ್ ಟೂರ್ನಿಯ ಕಾರಣದಿಂದಾಗಿ ಭಾರತದ ವಾತಾವರಣಕ್ಕೆ ಉತ್ತಮವಾಗಿ ಹೊಂದಿಕೊಂಡಿರುತ್ತಾರೆ ಈ ಆಟಗಾರರು. ಅಲ್ಲದೆ ಭಾರತೀಯ ತಂಡದ ಆಟಗಾರರನ್ನು ಈ ಸರಣಿಯಲ್ಲಿ ಎದುರಿಸಿರುವುದು ಹಾಗೂ ಅವರೊಂದಿಗೆ ಟೂರ್ನಿಯಲ್ಲಿ ಆಡಿರುವ ಅನುಭವವನ್ನು ಹೊಂದಿರುವುದು ಈ ಆಟಗಾರರಿಗೆ ಅನುಕೂಲವಾಗಲೂ ಬಹುದು.

ದಕ್ಷಿಣ ಆಫ್ರಿಕಾ ಟಿ20 ಬಳಗ ಹೀಗಿದೆ
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಕ್ ನಾರ್ಕಿಯಾ, ವಾಯ್ನೆ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ಟಬ್ರೈಜ್ ಶಮ್ಸಿ, ಸ್ಟೀಸ್ಟನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಜಾನ್ಸೆನ್

ಜೂನ್ 6ರಿಂದ ಸರಣಿ ಆರಂಭ
ಇನ್ನು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಈ ಸರಣಿ ಜೂನ್ 9ರಿಂದ ಆರಂಭವಾಗಲಿದೆ. ಐದು ಪಂದ್ಯಗಳ ಟಿ20 ಸರಣಿ ಇದಾಗಿದ್ದು ಐದು ಭಿನ್ನ ತಾಣಗಳಲ್ಲಿ ಈ ಸರಣೀ ಆಯೋಜನೆಯಾಗಲಿದೆ. ಮೊದಲ ಪಂದ್ಯ ಜೂನ್ 9ರಂದು ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದರೆ ಎರಡನೇ ಪಂದ್ಯ ಜೂನ್ 12ರಂದು ಕಟಕ್‌ನಲ್ಲಿ ನಡೆಯಲಿದೆ. ಮೂರನೇ ಪಂದ್ಯ ಜೂನ್ 14ರಂದು ವಿಶಾಖಪಟ್ಟಣಂನಲ್ಲಿ ಆಯೋಜನೆಯಾಗಲಿದೆ. ನಾಲ್ಕನೇ ಪಂದ್ಯ ಜೂನ್ 17ರಂದು ರಾಜ್‌ಕೋಟ್‌ನಲ್ಲಿ ಆಯೋಜನೆಯಾದರೆ ಅಂತಿಮ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಆತಿಥ್ಯವಹಿಸಲಿದೆ. ಈ ಪಂದ್ಯ ಜೂನ್ 19ರಂದು ನಡೆಯಲಿದೆ.

ಟೀಮ್ ಇಂಡಿಯಾ ಸ್ಕ್ವಾಡ್ ಪ್ರಕಟ ಯಾವಾಗ?
ಭಾರತ ಪ್ರವಾಸ ಕೈಗೊಳ್ಳಲಿರುವ ದಕ್ಷಿಣ ಆಫ್ರಿಕಾ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಹೀಗಾಗಿ ಸದ್ಯ ಭಾರತ ತಂಡದ ಆಟಗಾರರ ಪ್ರಕಟನೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಸದ್ಯ ಐಪಿಎಲ್ ಟೂರ್ನಿ ನಡೆಯುತ್ತಿದ್ದು ಈ ಟೂರ್ನಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಬಳಿಕ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಆಯ್ಕೆಗಾರರೊಂದಿಗೆ ತಂಡದ ಆಯ್ಕೆ ಬಗ್ಗೆ ಚರ್ಚೆಯನ್ನು ನಡೆಸಲಿದ್ದಾರೆ. ಅದಾದ ನಂತರ ಭಾರತೀಯ ತಂಡವನ್ನು ಕೂಡ ಘೋಷಣೆ ಮಾಡಲಿದೆ.

ಟಿ20 ವಿಶ್ವಕಪ್ ದೃಷ್ಟಿಯಿಂದ ಸರಣಿ ಮೇಲೆ ಎಲ್ಲರ ಕಣ್ಣು
ಇನ್ನು ಈ ವರ್ಷಾಂತ್ಯದಲ್ಲಿ ಟಿ20 ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ಆಯೋಜನೆಯಾಗಲಿದೆ. ಈ ದೃಷ್ಟಿಯಿಂದ ಈ ಸರಣಿ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಟೀಮ್ ಇಂಡಿಯಾ ಸಂಯೋಜನೆಯ ದೃಷ್ಟಿಯಿಂದ ಈ ಸರಣಿ ಗಮನಾರ್ಹವಾಗಿದ್ದು ಐಪಿಎಲ್‌ನಲ್ಲಿ ಫಾರ್ಮ್ ಕಳೆದುಕೊಂಡಿರುವ ಪ್ರಮುಖ ಆಟಗಾರರಿಗೆ ಫಾರ್ಮ್ ಗಳಿಸಲು ವೇದಿಕೆಯೂ ಆಗಿದೆ. ಇನ್ನು ಈ ಬಾರಿಯ ಐಪಿಎಲ್‌ನಲ್ಲಿ ಮಿಂಚುಹರಿಸಿರುವ ಕೆಲ ಆಟಗಾರರು ಈ ಸರಣಿಯಲ್ಲಿ ಅವಕಾಶವನ್ನು ಗಿಟ್ಟಿಸಿಕೊಳ್ಳುವ ನಿರೀಕ್ಷೆಯಿದೆ. ಯಾರಿಗೆಲ್ಲಾ ಈ ಅವಕಾಶ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ. ಮತ್ತೊಂದೆಡೆ ಅನುಭವಿ ಆಟಗಾರ ವಿರಾಟ್ ಕೊಹ್ಲಿಗೆ ಈ ಸರಣಿಯಿಂದ ವಿಶ್ರಾಂತಿ ನಿಡುವ ಸಾಧ್ಯೆತೆಯೂ ಇದೆ ಎನ್ನಲಾಗಿದೆ. ಈ ವಿಚಾರವಾಗಿ ಕೊಹ್ಲಿ ಜೊತೆಗೆ ಚರ್ಚಿಸಿದ ಬಳಿಕ ಆಯ್ಕೆ ಮಂಡಳಿ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications