IND vs SA Super 8: ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್‌ಗಳ ಪಟ್ಟಿ
ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಸೂಪರ್ 8 ಹಂತದಲ್ಲಿ ಭಾನುವಾರ ಸೆಣಸಾಡಲಿವೆ. ಅಹಮದಾಬಾದ್‌ನಲ್ಲಿ ನಡೆಯುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಉಭಯ ತಂಡಗಳು 2024ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ಮುಖಾಮುಖಿ ನಡೆಸಿದ್ದವು. ಈಗ ಮತ್ತೊಮ್ಮೆ ಬಿಗ್ ಮ್ಯಾಚ್‌ನಲ್ಲಿ ಎರಡೂ ತಂಡಗಳು ಕಾದಾಟವನ್ನು ನಡೆಸಲಿವೆ. ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಎರಡೂ ತಂಡಗಳು ಬಲಿಷ್ಠವಾಗಿವೆ.
ಒಟ್ಟಾರೆ ಟಿ20 ಕ್ರಿಕೆಟ್‌ನಲ್ಲಿ ಉಭಯ ತಂಡಗಳು 31 ಬಾರಿ ಮುಖಾಮುಖಿಯಾಗಿದ್ದು, ಭಾರತ 18 ಬಾರಿ, ದಕ್ಷಿಣ ಆಫ್ರಿಕಾ 12 ಬಾರಿ ಪಂದ್ಯ ಗೆದ್ದಿವೆ. ಟಿ20 ವಿಶ್ವಕಪ್‌ನಲ್ಲೂ ಎರಡೂ ತಂಡಗಳು ಈ ವರೆಗೆ 7 ಪಂದ್ಯಗಳಲ್ಲಿ ಕಾದಾಟ ನಡೆಸಿದ್ದು, ಭಾರತ 5, ದಕ್ಷಿಣ ಆಫ್ರಿಕಾ 2 ಪಂದ್ಯಗಳಲ್ಲಿ ಜಯ ಸಾಧಿಸಿವೆ. ಉಭಯ ತಂಡಗಳು ಮೈದಾನದಲ್ಲಿ ಕಾದಾಟ ನಡೆಸುವಾಗ ಬೌಲರ್‌ಗಳ ಮೇಲೆ ಎಲ್ಲರ ಚಿತ್ತ ನೆಟ್ಟಿರಲಿದೆ. ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಆಟಗಾರರ ಪಟ್ಟಿ ಇಲ್ಲಿದೆ.

ಅರ್ಶದೀಪ್ ಸಿಂಗ್
ಟೀಮ್ ಇಂಡಿಯಾದ ಭರವಸೆಯ ಬೌಲರ್ ಅರ್ಶದೀಪ್ ಸಿಂಗ್ ಟಿ20 ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ಬೌಲರ್. ಇವರು ಆಡಿದ 14 ಪಂದ್ಯಗಳಲ್ಲಿ 9.04ರ ಎಕಾನಮಿಯಲ್ಲಿ 23 ವಿಕೆಟ್ ಕಬಳಿಸಿದ್ದಾರೆ.
ವರುಣ್ ಚಕ್ರವರ್ತಿ
ಟಿ20 ಕ್ರಿಕೆಟ್‌ನ ನಂಬರ್ 1 ಬೌಲರ್ ವರುಣ್ ಚಕ್ರವರ್ತಿ ಸಹ ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ವಿಕೆಟ್‌ಗಳನ್ನು ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಕಾಣಿಸಿಕೊಳ್ಳುತ್ತಾರೆ. ಇವರು ಹರಿಣಿಗಳ ವಿರುದ್ಧ ಆಡಿದ 8 ಪಂದ್ಯಗಳಲ್ಲಿ 22 ವಿಕೆಟ್ ಪಡೆದು ಬೀಗಿದ್ದಾರೆ.

ಹಾರ್ದಿಕ್ ಪಾಂಡ್ಯ
ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಹಾರ್ದಿಕ್ ಪಾಂಡ್ಯಗೆ ಮೂರನೇ ಸ್ಥಾನ. ಇವರು ಹಾಗೂ ಭುವನೇಶ್ವರ್ ಕುಮಾರ್ ಈ ತಂಡದ ವಿರುದ್ಧ 14 ವಿಕೆಟ್ ಕಬಳಿಸಿದ್ದಾರೆ. ಸದ್ಯ ಹಾರ್ದಿಕ್ ತಂಡದ ಭಾಗವಾಗಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ 20 ಪಂದ್ಯಗಳಲ್ಲಿ 14 ವಿಕೆಟ್ ಉರುಳಿಸಿದ್ದಾರೆ.
ಅಕ್ಷರ್ ಪಟೇಲ್
ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಷರ್ ಪಟೇಲ್ ಸಹ ಕಮಾಲ್ ಬೌಲಿಂಗ್ ನಡೆಸಿದ್ದಾರೆ. ಇವರು ಆಡಿರುವ 18 ಪಂದ್ಯಗಳಲ್ಲಿ 8.41ರ ಎಕಾನಮಿಯಲ್ಲಿ 13 ವಿಕೆಟ್ ಪಡೆದಿದ್ದಾರೆ.
ಆರ್ ಅಶ್ವಿನ್
ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಅಶ್ವಿನ್‌ಗೂ ಸ್ಥಾನ. ಇವರು ಆಡಿದ 10 ಟಿ20 ಪಂದ್ಯಗಳಲ್ಲಿ 11 ವಿಕೆಟ್ ಪಡೆದಿದ್ದಾರೆ.
ಭಾನುವಾರ ನಡೆಯಲಿರುವ ಸೂಪರ್ 8 ಹಂತದ ಪಂದ್ಯದಲ್ಲಿ ಯಾವ ಬೌಲರ್ ಬಿಗುವಿನ ದಾಳಿ ನಡೆಸಿ ಎದುರಾಳಿ ಬ್ಯಾಟರ್‌ಗಳನ್ನು ಕಾಡಲಿದ್ದಾರೆ ಎಂಬ ಲೆಕ್ಕಾಚಾರ ಆರಂಭವಾಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications