ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಸೂಪರ್ 8 ಹಂತದ ಪಂದ್ಯ ಭಾನುವಾರ ಅಹಮದಾಬಾದ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕಾಗಿ ಈಗ ಎರಡೂ ತಂಡಗಳು ಭರದ ಸಿದ್ಧತೆ ನಡೆಸಿವೆ. ಟೀಮ್ ಇಂಡಿಯಾ ಸಹ ಈ ಪಂದ್ಯಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿದೆ. ಈ ವೇಳೆ ಸೂರ್ಯಕುಮಾರ್ ಯಾದವ್ ಬಳಗದಲ್ಲಿ ಬದಲಾವಣೆ ಆಗುವ ಸಾಧ್ಯತೆ ಇದೆ. ಯಾರು ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಕಳೆದುಕೊಳ್ಳಬಹುದು ಎಂಬ ಬಗ್ಗೆ ಕಂಪ್ಲೀಟ್ ಮಾಹಿತಿ ಇಲ್ಲಿದೆ.
ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡುತ್ತಿದೆ. ಅಲ್ಲದೆ ಲೀಗ್ ಹಂತದ ಎಲ್ಲ ಪಂದ್ಯಗಳನ್ನು ಗೆದ್ದು ಅಜೇಯವಾಗಿ ಸೂಪರ್ 8 ಹಂತಕ್ಕೆ ಅರ್ಹತೆ ಪಡೆದಿದೆ. ಈ ವೇಳೆ ತಂಡದ ಎಲ್ಲ ಆಟಗಾರರು ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ಆದರೆ ತಂಡದಲ್ಲಿನ ಆ ಒಬ್ಬ ಪ್ಲೇಯರ್ ಮಾತ್ರ ರನ್ ಕಲೆ ಹಾಕಲು ಪರದಾಟ ನಡೆಸಿದ್ದು ಮ್ಯಾನೇಜ್ಮೆಂಟ್ ಚಿಂತೆಯನ್ನು ಹೆಚ್ಚಿಸಿದ್ದಾರೆ. ಹೀಗಾಗಿ ಇವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ತಂಡದಿಂದ ಕೈ ಬಿಡುವ ಸಾಧ್ಯತೆ ಕಾಣುತ್ತಿದೆ. ಹಾಗಿದ್ದರೆ ಆ ಪ್ಲೇಯರ್ ಯಾರು ಎಂಬ ಬಗ್ಗೆ ವರದಿ ಇಲ್ಲಿದೆ.

ಭಾರತ ಹಾಗೂ ಶ್ರೀಲಂಕಾದಲ್ಲಿ ಟಿ20 ವಿಶ್ವಕಪ್ ಆಯೋಜಿಸಲಾಗುತ್ತಿದೆ. ಈ ವೇಳೆ ಎಲ್ಲರ ಕಣ್ಣುಗಳು ಮಾತ್ರ ಟೀಮ್ ಇಂಡಿಯಾದ ಸ್ಫೋಟಕ ಬ್ಯಾಟರ್ ಅಭಿಷೇಕ್ ಶರ್ಮಾ ಅವರ ಮೇಲೆ ನೆಟ್ಟಿದ್ದವು. ಇವರು ಮೆಗಾ ಈವೆಂಟ್‌ನಲ್ಲಿ ಹೇಗೆ ಪ್ರದರ್ಶನ ನೀಡುತ್ತಾರೆ ಎಂಬ ಬಗ್ಗೆ ಪ್ರಶ್ನೆಗಳು ಮೂಡಿದ್ದವು. ಅದರಂತೆ ಲೀಗ್ ಹಂತದ ಪಂದ್ಯಗಳು ಆರಂಭವಾದಗಲೂ ಈ ಪ್ಲೇಯರ್ ಅಬ್ಬರಿಸುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಈ ಪ್ಲೇಯರ್ ಸತತ ವೈಫಲ್ಯವನ್ನು ಅನುಭವಿಸಿತ್ತಿದ್ದಾರೆ. ಇವರೇ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ.
ಟೀಮ್ ಇಂಡಿಯಾದ ಯುವ ಆಟಗಾರ ಅಭಿಷೇಕ್ ಶರ್ಮಾ ಕಳೆದ ವರ್ಷ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ ಟಿ20 ಫಾರ್ಮೆಟ್‌ನಲ್ಲಿ ನಂಬರ್ 1 ಬ್ಯಾಟರ್ ಆಗಿದ್ದರು. ಆದರೆ ಇವರು ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಇನ್ನು ಒಂದೇ ಒಂದು ರನ್ ಬಾರಿಸಿಲ್ಲ. ಹೀಗಾಗಿ ಇವರ ಸ್ಥಾನದ ಮೇಲೆ ಈಗ ಪ್ರಶ್ನೆಗಳು ಎದ್ದಿವೆ. ಯುಎಸ್‌ಎ, ಪಾಕಿಸ್ತಾನ, ನೆದರ್ಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಸೊನ್ನೆ ಸುತ್ತಿದ್ದರು. ಇವರ ಫಾರ್ಮ್ ತಂಡದ ಚಿಂತೆಯನ್ನು ಹೆಚ್ಚಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸೂಪರ್ 8 ಹಂತದ ಪಂದ್ಯಕ್ಕೆ ಇವರನ್ನು ಬೆಂಚ್ ಕಾಯಿಸಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ. ಇದಕ್ಕೆ ಕಾರಣ ಬೆಂಚ್ ಮೇಲೆ ಕುಳಿತಿರುವ ಸಂಜು ಸ್ಯಾಮ್ಸನ್ ಅವರ ಅಂಕಿ ಅಂಶ ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿಯಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ಅಭಿಷೇಕ್ ಶರ್ಮಾ ಈ ವರೆಗೆ 8 ಪಂದ್ಯಗಳನ್ನು ಆಡಿದ್ದು, 25ರ ಸರಾಸರಿಯಲ್ಲಿ 200 ರನ್ ಕಲೆ ಹಾಕಿದ್ದಾರೆ. ಈ ವೇಳೆ ಒಂದು ಅರ್ಧಶತಕ ಸೇರಿದೆ.
ಸಂಜು ಸ್ಯಾಮ್ಸನ್ ಹರಿಣಿಗಳ ವಿರುದ್ಧ ಉತ್ತಮ ಅಂಕಿ ಅಂಶಗಳನ್ನು ಹೊಂದಿದ್ದಾರೆ. ಇವರು ಆಡಿದ 6 ಪಂದ್ಯಗಳಲ್ಲಿ 238 ರನ್ ಸಿಡಿಸಿದ್ದಾರೆ. ಈ ವೇಳೆ 1 ಶತಕ ಹಾಗೂ 1 ಅರ್ಧಶತಕಗಳು ಸಹ ಸೇರಿವೆ. ಈ ಎಲ್ಲ ಅಂಕಿ ಅಂಶಗಳನ್ನು ಗಮನಿಸಿದರೆ ಸಂಜುಗೆ ಅವಕಾಶ ನೀಡಬಹುದು ಎಂಬ ಲೆಕ್ಕಾಚಾರ ಆರಂಭವಾಗಿದೆ.