IND vs SA: ಮೊದಲ ಟಿ20 ಪಂದ್ಯದ ಡ್ರೀಮ್ ಟೀಂ ಮತ್ತು ಸಂಭಾವ್ಯ ಆಡುವ 11ರ ಬಳಗ

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಜೂನ್ 9ರಿಂದ ಆರಂಭವಾಗಲಿರುವ ಐದು ಟಿ20 ಪಂದ್ಯಗಳ ಸರಣಿಯ ಮೊದಲ ಪಂದ್ಯ ನಡೆಯಲಿದೆ.
ಇದೇ ವೇಳೆ ಭಾರತ ತಂಡವು ಕಡಿಮೆ ಸ್ವರೂಪದ ಆಟದಲ್ಲಿ ತನ್ನ 13ನೇ ಸತತ ಗೆಲುವಿನ ಮೇಲೆ ಕಣ್ಣಿಟ್ಟಿದ್ದು, ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಪಂದ್ಯ ಗೆದ್ದರೆ ದಾಖಲೆ ನಿರ್ಮಿಸಲಿದೆ. ಈ ಸರಣಿಯಲ್ಲಿ ವಿಶ್ರಾಂತಿ ಪಡೆದಿರುವ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಅವರಿಲ್ಲದೇ ಕಣಕ್ಕಿಳಿಯುತ್ತಿದೆ.
ಇನ್ನು ಹಂಗಾಮಿ ಭಾರತ ತಂಡದ ನಾಯಕರಾಗಿದ್ದ ಕೆಎಲ್ ರಾಹುಲ್‌ಗೆ ಕೊನೆಯ ಕ್ಷಣದಲ್ಲಿ ಗಾಯವಾದ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಯುವ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ರಿಷಭ್ ಪಂತ್ ಭಾರತ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ.

ರಿಷಭ್ ಪಂತ್‌ಗೆ ನಾಯಕನ ಸ್ಥಾನ
ಕೆಎಲ್ ರಾಹುಲ್ ಮತ್ತು ಚೈನಾಮನ್ ಬೌಲರ್ ಕುಲದೀಪ್ ಯಾದವ್ ಅವರ ತೊಡೆಸಂದು ಗಾಯದಿಂದಾಗಿ ಟಿ20 ಸರಣಿಯಿಂದ ಹೊರಗುಳಿದ ನಂತರ ರಿಷಭ್ ಪಂತ್‌ಗೆ ನಾಯಕನ ಸ್ಥಾನ ಒಲಿದುಬಂದಿದ್ದು, ಇನ್ನು ಉಪ ನಾಯಕರಾಗಿ ಹಾರ್ದಿಕ್ ಪಾಂಡ್ಯ ನೇಮಕವಾಗಿದ್ದಾರೆ.
ಅತ್ತ ಭಾರತ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಆರಂಭದ ಮೊದಲು ತಮ್ಮ ತಂಡವು ಯಾವುದೇ ವಿಷಯಗಳನ್ನು ಸುಲಭವಾಗಿ ಭಾವಿಸುತ್ತಿಲ್ಲ ಎಂದು ದಕ್ಷಿಣ ಆಫ್ರಿಕಾದ ನಾಯಕ ಟೆಂಬಾ ಬವುಮಾ ತಿಳಿಸಿದ್ದಾರೆ.

ದ್ವಿಪಕ್ಷೀಯ ಟಿ20 ಸರಣಿ ಆಡುತ್ತಿರುವುದು ಇದು 3ನೇ ಬಾರಿ
ಅಕ್ಟೋಬರ್ 2015ರಲ್ಲಿ ದಕ್ಷಿಣ ಆಫ್ರಿಕಾ ತಂಡ 2-0 ಅಂತರದಿಂದ ಜಯ ಗಳಿಸಿದೆ. ಸೆಪ್ಟೆಂಬರ್ 2019ರಲ್ಲಿ 1-1ರಲ್ಲಿ ಸರಣಿ ಡ್ರಾ ಆದ ನಂತರ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ದ್ವಿಪಕ್ಷೀಯ ಟಿ20 ಸರಣಿಯನ್ನು ಆಡುತ್ತಿರುವುದು ಇದು ಮೂರನೇ ಬಾರಿಯಾಗಿದೆ. ಈ ವರ್ಷದ ಆರಂಭದಲ್ಲಿ ದಕ್ಷಿಣ ಆಫ್ರಿಕಾ ತನ್ನ ಅಂಗಳದಲ್ಲಿ ಟೆಸ್ಟ್ ಸರಣಿಯನ್ನು 2-1 ಮತ್ತು ಏಕದಿನ ಸರಣಿಯನ್ನು 3-0 ಅಂತರದಲ್ಲಿ ಗೆದ್ದುಕೊಂಡಿತ್ತು.
"ಇದು ನಿಸ್ಸಂಶಯವಾಗಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಎರಡೂ ತಂಡಕ್ಕೂ ಒಂದು ರೋಚಕ ಸರಣಿಯಾಗಿದೆ. ಒಂದೆರಡು ತಿಂಗಳ ಹಿಂದೆ ನಾವು ಭಾರತದ ತಂಡದ ವಿರುದ್ಧ ಉತ್ತಮವಾಗಿ ಆಡಿದ್ದೆವು. ಆದರೆ ಭಾರತ ತಂಡದಲ್ಲಿ ವಿಭಿನ್ನವಾಗಿ ಕಾಣುವ ಹುಡುಗರಿದ್ದಾರೆ ಎಂದು ನಾನು ಭಾವಿಸುತ್ತೇನೆ. ಭಾರತೀಯ ತಂಡದಲ್ಲಿ ತಮ್ಮ ಸ್ಥಾನಕ್ಕಾಗಿ ಹಕ್ಕನ್ನು ಸಾಬೀತುಪಡಿಸಲು ಹೊಸ ಹೊಸ ಮುಖಗಳು ಪ್ರತಿಭೆಗಳು ಇದ್ದಾರೆ," ಎಂದು ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬಾವುಮಾ ಹೇಳಿದ್ದಾರೆ.

IND vs SA ಡ್ರೀಮ್ ಟೀಂ ಹೀಗಿರಲಿದೆ
ವಿಕೆಟ್ ಕೀಪರ್: ಕ್ವಿಂಟನ್ ಡಿ ಕಾಕ್, ರಿಷಭ್ ಪಂತ್
ಬ್ಯಾಟ್ಸ್‌ಮನ್‌ಗಳು: ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಡೇವಿಡ್ ಮಿಲ್ಲರ್
ಆಲ್‌ರೌಂಡರ್‌ಗಳು: ಹಾರ್ದಿಕ್ ಪಾಂಡ್ಯ, ಏಡನ್ ಮಾರ್ಕ್ರಂ
ಬೌಲರ್‌ಗಳು: ಯುಜ್ವೇಂದ್ರ ಚಹಾಲ್, ತಬ್ರೈಜ್ ಶಮ್ಸಿ, ಕಗಿಸೊ ರಬಾಡ, ಹರ್ಷಲ್ ಪಟೇಲ್
ನಾಯಕ: ರಿಷಭ್ ಪಂತ್, ಉಪ ನಾಯಕ: ಕ್ವಿಂಟನ್ ಡಿ ಕಾಕ್
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 1ನೇ ಟಿ20 ಪಂದ್ಯವು ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಸಂಜೆ 7:00ಕ್ಕೆ ಪ್ರಾರಂಭವಾಗುತ್ತದೆ. ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ. ಇನ್ನು ಲೈವ್ ಸ್ಟ್ರೀಮಿಂಗ್ Hotstar ನಲ್ಲಿ ಲಭ್ಯವಿರುತ್ತದೆ.

ಭಾರತ ತಂಡದ ಸಂಭಾವ್ಯ ಆಡುವ 11ರ ಬಳಗ
ಭಾರತ: ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ನಾಯಕ/ ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅರ್ಶ್ದೀಪ್ ಸಿಂಗ್/ಅವೇಶ್ ಖಾನ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಹೆನ್ರಿಕ್ ಕ್ಲಾಸೆನ್, ಮಾರ್ಕೊ ಜಾನ್ಸೆನ್, ಡ್ವೈನ್ ಪ್ರಿಟೋರಿಯಸ್/ ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications