For Quick Alerts
ALLOW NOTIFICATIONS  
For Daily Alerts
 

ಐಪಿಎಲ್‌ನಲ್ಲಿ ಮಿಂಚಿದ ಡೇವಿಡ್ ಮಿಲ್ಲರ್‌ಗೆ ಕ್ರಮಾಂಕ ಬದಲಾವಣೆಯ ಸೂಚನೆ ನೀಡಿದ ದ.ಆಫ್ರಿಕಾ ನಾಯಕ

IND vs SA t20 series: Temba Bavuma said he is Open To Discuss David Miller Batting Up The Order

ಈ ಬಾರಿಯ ಐಪಿಎಲ್‌ನಲ್ಲಿ ದಕ್ಷಿಣ ಆಫ್ರಿಕಾದ ಸ್ಪೋಟಕ ಆಟಗಾರ ಡೇವಿಡ್ ಮಿಲ್ಲರ್ ಅದ್ಭುತ ಪ್ರದರ್ಶನ ನೀಡಿ ಮಿಂಚಿದ್ದಾರೆ. ಗುಜರಾತ್ ಟೈಟಮ್ಸ್ ತಂಡದ ಪರವಾಗಿ ಆಡಿರುವ ಮಿಲ್ಲರ್ ತಂಡದ ಯಶಸ್ಸಿನಲ್ಲಿ ಮಹತ್ವದ ಪಾತ್ರವಹಿಸಿದ್ದಾರೆ. ಈ ಮೂಲಕ ಕಳೆದ ಕೆಲ ಸಮಯಗಳಿಂದ ಕಳಪೆ ಫಾರ್ಮ್‌ನಲ್ಲಿದ್ದ ಈ ಆಟಗಾರ ಮತ್ತೊಮ್ಮೆ ಫಾರ್ಮ್‌ಗೆ ಮರಳಿರುವ ಮೂಲಕ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡಕ್ಕೂ ಭರವಸೆ ಮೂಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದಕ್ಷಿಣ ಆಪ್ರಿಕಾ ಕ್ರಿಕೆಟ್ ತಂಡದ ನಾಯಕ ಟೆಂಬಾ ಬವುಮಾ ಮಾತನಾಡಿದ್ದು ಮಿಲ್ಲರ್ ಬಗ್ಗೆ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ. ಈ ಸಂದರ್ಭದಲ್ಲಿ ಭಾರತದ ವಿರುದ್ಧದ ಸರಣಿಯಲ್ಲಿ ಡೇವಿಡ್ ಮಿಲ್ಲರ್ ಕ್ರಮಾಂಕದಲ್ಲಿ ಬದಲಾವಣೆ ಮಾಡುವ ಬಗ್ಗೆ ಟೆಂಬಾ ಬವುಮಾ ಮಾತನಾಡಿದ್ದಾರೆ. ಡೇವಿಡ್ ಮಿಲ್ಲರ್ ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಆಫ್ರಿಕಾ ತಂಡದ ಪರವಾಗಿ ರನ್‌ಗಳಿಸಲು ಪರದಾಡಿದ್ದರು. ಆದರೆ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿ ಮಿಂಚುಹರಿಸಿರುವ ಕಾರಣ ಈ ಆಟಗಾರನ ಮೇಲಿನ ಭರವಸೆ ಹೆಚ್ಚಾಗಿದೆ.

ಇನ್ನು ಡೇವಿಡ್ ಮಿಲ್ಲರ್ ಗುಜರಾತ್ ಟೈಟನ್ಸ್ ತಂಡದ ಪರವಾಗಿ ತಾವಿ ಸಾಮಾನ್ಯವಾಗಿ ಆಡುವ ಆರನೇ ಕ್ರಮಾಂಕದ ಬದಲಾಗಿ ಐದನೇ ಕ್ರಮಾಂಕದಲ್ಲಿ ಆಡಲು ಇಳಿದಿದ್ದಾರೆ. ಈ ಕ್ರಮಾಂಕದಲ್ಲಿ 68.71ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿರುವ ಮಿಲ್ಲರ್ 481 ರನ್‌ಗಳಿಸಿದ್ದಾರೆ. 143ರಷ್ಟು ಅದ್ಭುತ ಸ್ಟ್ರೈಕ್‌ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ.

"ಈ ಬಾರಿಯ ಐಪಿಎಲ್‌ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ತಂಡದಲ್ಲಿ ಸ್ಥಾನದ ಬಗ್ಗೆ ಅಭದ್ರತೆಯಿಂದ ಅವರು ಈಗ ಹೊರಗೆ ಬಂದಿದ್ದಾರೆ. ನಾವಿಬ್ಬರು ಇನ್ನಷ್ಟೇ ಸಂವಹನ ನಡೆಸಬೇಕಿದೆ. ಅವರು ನಮ್ಮ ತಂಡದ ಪ್ರಮುಖ ಸದಸ್ಯರಾಗಿದ್ದಾರೆ. ಅವರು ಉನ್ನತ ಕ್ರಮಾಂಕದಲ್ಲಿ ಆಡಿದರೆ ತಂಡಕ್ಕೆ ಹೆಚ್ಚಿನ ಕೊಡುಗೆ ನೀಡಲು ಸಾಧ್ಯವಿದೆ ಎಂದು ಅವರು ಭಾವಿಸುತ್ತಾರಾದರೆ ನಾವು ಆ ಬಗ್ಗೆ ಮಾತುಕತೆ ನಡೆಸುತ್ತೇವೆ" ಎಂದಿದ್ದಾರೆ ಟೆಂಬಾ ಬವುಮಾ.

ಮುಂಬರುವ ಅಕ್ಟೋಬರ್ ತಿಂಗಳಿನಲ್ಲಿ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್ ನಡೆಯಲಿರುವ ಕಾರಣ ಅದ್ಭುತ ಬ್ಯಾಟಿಂಗ್ ಕ್ರಮಾಂಕವನ್ನು ಸಿದ್ಧಪಡಿಸಿಕೊಳ್ಳಲು ದಕ್ಷಿಣ ಆಫ್ರಿಕಾ ತಂಡ ಈ ಸರಣಿಯನ್ನು ಬಳಸಿಕೊಳ್ಳುವ ಸಾಧ್ಯತಯಿದೆ. ಆದರೆ ಭಾರತ ವಿರುದ್ಧದ ಸರಣಿಯನ್ನು ಗೆಲ್ಲುವ ಮೂಲಕ ಒತ್ತಡವನ್ನು ಕಡಿಮೆ ಮಾಡಿಕೊಳ್ಳುವ ಇರಾದೆ ದಕ್ಷಿಣ ಆಫ್ರಿಕಾ ತಂಡದ ನಾಯಕನದ್ದು.

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಜೂನ್ 9ರಿಂದ ಆರಂಭವಾಗಲಿದ್ದು ಮೊದಲ ಪಂದ್ಯ ದೆಹಲಿಯಲ್ಲಿ ನಡೆಯಲಿದೆ. ಈ ಸರಣಿಗೆ ಭಾರತ ತಂಡದ ನಾಯಕತ್ವವನ್ನು ಕೆಎಲ್ ರಾಹುಲ್ ವಹಿಸಿಕೊಳ್ಳಲಿದ್ದಾರೆ.

ದಕ್ಷಿಣ ಆಫ್ರಿಕಾದ ತಂಡ- ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್ಗಿಡಿ, ಆನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಟ್ವೈನ್ ಪ್ರಿಟೋರಿಯಸ್ , ಟ್ರಿಸ್ಟಾನ್ ಸ್ಟಬ್ಸ್, ರಾಸ್ಸೀ ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಜಾನ್ಸೆನ್

Story first published: Wednesday, June 1, 2022, 10:20 [IST]
Other articles published on Jun 1, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+