Ind Vs SA T20: ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡ ದಕ್ಷಿಣ ಆಫ್ರಿಕಾ

ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಗುವಾಹಟಿಯ ಬರ್ಸಾಪುರ ಕ್ರೀಡಾಂಗಣದಲ್ಲಿ ಎರಡನೇ ಪಂದ್ಯ ನಡೆಯುತ್ತಿದೆ.
ದಕ್ಷಿಣ ಆಫ್ರಿಕಾ ತಂಡದಲ್ಲಿ ತಬ್ರೀಜ್ ಶಂಸಿ ಬದಲಿಗೆ ಲುಂಗಿ ಎಂಗಿಡಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆಯಾಗಿಲ್ಲ, ಮೊದಲನೇ ಟಿ20 ಪಂದ್ಯದಲ್ಲಿ ಆಡಿದ್ದ ತಂಡವೇ ಎರಡನೇ ಟಿ20 ಪಂದ್ಯದಲ್ಲಿ ಕಣಕ್ಕಿಳಿಯಲಿದೆ.
ಬುಧವಾರ ತಿರುವನಂತಪುರದಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 8 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಭಾರತದ ಪರವಾಗಿ ಅರ್ಶ್‌ದೀಪ್ ಸಿಂಗ್ ಮತ್ತು ದೀಪಕ್ ಚಹಾರ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದರು.
ಸೂರ್ಯಕುಮಾರ್ ಯಾದವ್ ಮತ್ತು ಕೆಎಲ್ ರಾಹುಲ್ ಅರ್ಧಶತಕ ಗಳಿಸುವ ಮೂಲಕ ಭಾರತವನ್ನು ಗೆಲುವಿನ ದಡ ಸೇರಿಸಿದ್ದರು. ಮೊದಲನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಟೀಂ ಇಂಡಿಯಾ, ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಣಿಯನ್ನು ಜಯಿಸುವ ಉತ್ಸಾಹದಲ್ಲಿದೆ.
ಇಂದಿನ ಪಂದ್ಯದಲ್ಲಿ ಜಯಗಳಿಸಿದರೆ ಕಳೆದ ಟಿ20 ವಿಶ್ವಕಪ್ ನಂತರ ಭಾರತ 9 ದ್ವಿಪಕ್ಷೀಯ ಟಿ20 ಸರಣಿಗಳಲ್ಲಿ 8ರಲ್ಲಿ ಜಯಗಳಿಸಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಸರಣಿ ಜಯ ಸಾಧಿಸಿದ ಸಾಧನೆ ಮಾಡಲಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಾಹರ್
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಿಯನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎಂಗಿಡಿ, ಅನ್ರಿಚ್ ನಾರ್ಟ್ಜೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications