ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ, ನವರಾತ್ರಿ ಶುಭಾಶಯ ಕೋರಿದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

Ind Vs SA T20: South African Spinner Keshav Maharaj Visited Padmanabhaswamy Temple

ಸೆಪ್ಟೆಂಬರ್ 28ರಿಂದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ಆರಂಭವಾಗಲಿದೆ. ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ಆಟಗಾರರು ಈಗಾಗಲೇ ತಿರುವನಂತಪುರವನ್ನು ತಲುಪಿದ್ದಾರೆ. ದಕ್ಷಿಣ ಆಫ್ರಿಕಾ ತಂಡದ ಸ್ಪಿನ್ನರ್ ಕೇಶವ್ ಮಹಾರಾಜ್ ತಿರುವನಂತಪುರದಲ್ಲಿರುವ ಪ್ರಸಿದ್ಧ ಪದ್ಮನಾಭಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಾರೆ.

ಕೇಶವ್ ಮಹಾರಾಜ್ ತಮ್ಮ ಇನ್‌ಸ್ಟಾಗ್ರಾಂನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಮಾತ್ರವಲ್ಲದೆ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ಧರಿಸಿ ಎಲ್ಲರಿಗೂ ನವರಾತ್ರಿಯ ಶುಭಾಶಯಗಳನ್ನು ಕೋರಿದ್ದಾರೆ. ಒಂಬತ್ತು ದಿನಗಳ ಕಾಲ ನಡೆಯುವ ನವರಾತ್ರಿ ಹಬ್ಬ ಸೋಮವಾರದಿಂದ ಆರಂಭವಾಗಿದೆ. ಇಡೀ ದೇಶದಾದ್ಯಂತ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ.

Ind vs SA 1st T20: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11, ಸವಾಲುಗಳುInd vs SA 1st T20: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11, ಸವಾಲುಗಳು

ಕೇಶವ್ ಮಹಾರಾಜ್‌ ಭಾರತೀಯ ಮೂಲದವರು ಮತ್ತು ಅವರ ಪೂರ್ವಜರು ಉತ್ತರ ಪ್ರದೇಶದ ಸುಲ್ತಾನ್‌ಪುರದವರು. 32 ವರ್ಷ ವಯಸ್ಸಿನ ಕೇಶವ್ ಮಹಾರಾಜ್ 2016 ರ ನವೆಂಬರ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡಕ್ಕೆ ಪದಾರ್ಪಣೆ ಮಾಡಿದರು ಮತ್ತು ಎಲ್ಲಾ ಮೂರು ಮಾದರಿ ಕ್ರಿಕೆಟ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಭಾಗವಾಗಿದ್ದಾರೆ. ಭಾರತದಲ್ಲಿ ನಡೆಯುವ ಟಿ20 ಮತ್ತು ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನ ಹೊಂದಿದ್ದಾರೆ.

ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿರುವ ಕೇಶವ್ ಮಹಾರಾಜ್

ಟಿ20 ವಿಶ್ವಕಪ್ ತಂಡಕ್ಕೆ ಆಯ್ಕೆಯಾಗಿರುವ ಕೇಶವ್ ಮಹಾರಾಜ್

ಭಾರತದ ವಿರುದ್ಧದ ತಲಾ ಮೂರು ಪಂದ್ಯಗಳ ಟಿ20 ಮತ್ತು ಏಕದಿನ ಸರಣಿಯಲ್ಲಿ ಕೇಶವ್ ಮಹಾರಾಜ್ ಪ್ರಮುಖ ಪಾತ್ರ ವಹಿಸಲಿದ್ದಾರೆ. ಅಲ್ಲದೆ, ಆಸ್ಟ್ರೇಲಿಯಾದಲ್ಲಿ ಮುಂಬರುವ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಸರಣಿಯ ಮೊದಲನೇ ಟಿ20 ಪಂದ್ಯ ತಿರುವನಂತಪುರದಲ್ಲಿ ಸೆಪ್ಟೆಂಬರ್ 28ರಂದು ನಡೆಯಲಿದೆ.

ಟಿ20 ಸರಣಿಯ ನಂತರ ಟೆಂಬಾ ಬವುಮಾ ನೇತೃತ್ವದ ದಕ್ಷಿಣ ಆಪ್ರಿಕಾ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದ್ದು, ನಂತರ ಟಿ20 ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲು ನೇರವಾಗಿ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲಿದ್ದಾರೆ.

Ind Vs SA T20: ಟೀಂ ಇಂಡಿಯಾ ಬೌಲಿಂಗ್ ಸಮಸ್ಯೆಗೆ ಅಂತ್ಯ ಹಾಡುತ್ತಾರಾ ಅರ್ಶ್‌ದೀಪ್ ಸಿಂಗ್

ಗ್ರೀನ್‌ಫೀಲ್ಡ್‌ನಲ್ಲಿ ಉಭಯ ತಂಡಗಳ ಅಭ್ಯಾಸ

ಗ್ರೀನ್‌ಫೀಲ್ಡ್‌ನಲ್ಲಿ ಉಭಯ ತಂಡಗಳ ಅಭ್ಯಾಸ

ತೆಂಬಾ ಬಾವುಮಾ ನೇತೃತ್ವದ ತಂಡವು ಸೋಮವಾರ ಭಾರತವನ್ನು ತಲುಪಿತು. ಸೋಮವಾರ ಬೆಳಿಗ್ಗೆ ವಿಶ್ರಾಂತಿ ಪಡೆದಿರುವ ದಕ್ಷಿಣ ಆಫ್ರಿಕಾ ಆಟಗಾರರು, ಸಂಜೆಯಿಂದ ಅಭ್ಯಾಸ ಆರಂಭಿಸಿದರು.

ಇನ್ನು ಸೋಮವಾರ ಸಂಜೆ ತಿರುವನಂತಪುರ ತಲುಪಿದ ಟೀಂ ಇಂಡಿಯಾ ಮಂಗಳವಾರ ಸಂಜೆ ಅಭ್ಯಾಸ ಆರಂಭಿಸಲಿದೆ. ತರಬೇತಿ ಅವಧಿಗೂ ಮುನ್ನ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಟಿ20 ಸರಣಿಯಲ್ಲಿ ಆಡುವ ಉಭಯ ತಂಡಗಳ ವಿವರ

ಟಿ20 ಸರಣಿಯಲ್ಲಿ ಆಡುವ ಉಭಯ ತಂಡಗಳ ವಿವರ

ದಕ್ಷಿಣ ಆಫ್ರಿಕಾ ಟಿ20 ತಂಡ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ಹೆನ್ರಿಕ್ ಕ್ಲಾಸೆನ್, ರೀಜಾ ಹೆಂಡ್ರಿಕ್ಸ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಆನ್ರಿಕ್ ನೋಕಿಯಾ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ರಿಲಿ ರೊಸೊ, ತಬ್ರೇಝ್ ಶಂಸಿ, ಟ್ರಿಸ್ಟಾನ್ ಸ್ಟಬ್ಸ್.

ಟಿ20 ಸರಣಿಗೆ ಭಾರತ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಯುಜವೇಂದ್ರ ಚಹಾಲ್, ರಿಷಬ್ ಪಂತ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್,

Story first published: Tuesday, September 27, 2022, 13:38 [IST]
Other articles published on Sep 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X