Ind Vs SA T20: ರಾಹುಲ್, ಸೂರ್ಯಕುಮಾರ್, ಕೊಹ್ಲಿ ಆರ್ಭಟ 237 ರನ್ ಕಲೆಹಾಕಿದ ಟೀಂ ಇಂಡಿಯಾ

ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡಕ್ಕೆ 238 ರನ್‌ಗಳ ಬೃಹತ್ ಗುರಿಯನ್ನು ನೀಡಿದೆ.
ಗುವಾಹಟಿಯ ಬರ್ಸಾಪುರ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ತಂಡ ಸ್ಫೋಟಕ ಆರಂಭ ಪಡೆಯಿತು. ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್ ರಾಹುಲ್ ಉತ್ತಮ ಬ್ಯಾಟಿಂಗ್ ಮಾಡಿದರು.
ನಾಯಕ ರೋಹಿತ್ ಶರ್ಮಾ 37 ಎಸೆತಗಳಲ್ಲಿ 7 ಬೌಂಡರಿ ಒಂದು ಸಿಕ್ಸರ್ ಸಹಿತ 43 ರನ್ ಗಳಿಸಿದರೆ, ಉಪನಾಯಕ ಕೆಎಲ್ ರಾಹುಲ್ 28 ಎಸೆತಗಳಲ್ಲಿ 57 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲನೇ ವಿಕೆಟ್‌ಗೆ 96 ರನ್‌ಗಳನ್ನು ಕಲೆ ಹಾಕಿ ಉತ್ತಮ ಅಡಿಪಾಯ ಹಾಕಿತು.
ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ 4 ಓವರ್ ಗಳಲ್ಲಿ 23 ರನ್ ನೀಡಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಅಬ್ಬರಿಸಿದ ರಾಹುಲ್, ಸೂರ್ಯಕುಮಾರ್ ಯಾದವ್
ಕಳೆದ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್‌ಗಾಗಿ ಟೀಕೆಗೆ ಗುರಿಯಾಗಿದ್ದ ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್‌ನಿಂದ ಟೀಕಾಕಾರರ ಬಾಯಿ ಮುಚ್ಚಿಸಿದರು. ಕೇವಲ 28 ಎಸೆತಗಳಲ್ಲಿ 200 ಸ್ಟ್ರೈಕ್ ರೇಟ್‌ನಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ ರಾಹುಲ್ 5 ಬೌಂಡಿ, 4 ಭರ್ಜರಿ ಸಿಕ್ಸರ್ ಸಿಡಿಸಿದರು.
ಕೆಎಲ್ ರಾಹುಲ್ ಔಟಾದ ನಂತರ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್ ಅಕ್ಷರರ್ಶ ಆರ್ಭಟಿಸಿದರು. ಕೇವಲ 18 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದ ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ಬೌಲರ್ ಗಳ ಬೆಂಡೆತ್ತಿದರು. ಕೇವಲ 22 ಎಸೆತಗಳಲ್ಲಿ 5 ಬೌಂಡರಿ 5 ಭರ್ಜರಿ ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದ ಅವರು ರನೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದರು.
ವಿರಾಟ್ ಕೊಹ್ಲಿ ಕೂಡ ಅಂತಿಮ ಓವರ್ ಗಳಲ್ಲಿ ಆರ್ಭಟಿಸಿದರು. 28 ಎಸೆತಗಳನ್ನು ಎದುರಿಸಿದ ಅವರು 7 ಬೌಂಡರಿ 1 ಸಿಕ್ಸರ್ ನೆರವಿನಿಂದ 49 ರನ್ ಗಳಿಸಿದರು. ಅಂತಿಮ ಓವರ್ ನಲ್ಲಿ ಡಿಕೆ ಅಬ್ಬರಿಸಿ 7 ಎಸೆತಗಳಲ್ಲಿ ಎರಡು ಸಿಕ್ಸರ್, ಒಂದು ಬೌಂಡರಿ ನೆರವಿನಿಂದ 17 ರನ್ ಗಳಿಸಿದರು.
ಇಂದಿನ ಪಂದ್ಯದಲ್ಲಿ ಜಯಗಳಿಸಿದರೆ ಕಳೆದ ಟಿ20 ವಿಶ್ವಕಪ್ ನಂತರ ಭಾರತ 9 ದ್ವಿಪಕ್ಷೀಯ ಟಿ20 ಸರಣಿಗಳಲ್ಲಿ 8ರಲ್ಲಿ ಜಯಗಳಿಸಲಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಟಿ20 ಸರಣಿ ಜಯ ಸಾಧಿಸಿದ ಸಾಧನೆ ಮಾಡಲಿದೆ.

ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಾಹರ್
ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಿಯನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎಂಗಿಡಿ, ಅನ್ರಿಚ್ ನಾರ್ಟ್ಜೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications