Ind vs SA 2nd T20: 16 ರನ್‌ಗಳ ಜಯ ಸಾಧಿಸಿದ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ಮೊದಲ ಬಾರಿ ಸರಣಿ ಗೆಲುವು

ಗುವಾಹಟಿಯ ಬರ್ಸಾಪುರ ಕ್ರೀಡಾಂಗಣದಲ್ಲಿ ನಡೆದ ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ 16 ರನ್‌ಗಳ ಜಯ ಸಾಧಿಸುವ ಮೂಲಕ ಟೀಂ ಇಂಡಿಯಾ 2-0 ಅಂತರದಲ್ಲಿ ಸರಣಿ ಗೆಲವು ಸಾಧಿಸಿದೆ. ಇನ್ನೂ ಒಂದು ಪಂದ್ಯ ಬಾಕಿ ಇರುವಂತೆಯೇ ಟೀಂ ಇಂಡಿಯಾ ಸರಣಿ ವಶಪಡಿಸಿಕೊಂಡಿದೆ. ಕಳೆದ ಟಿ20 ವಿಶ್ವಕಪ್‌ ನಂತರ ಭಾರತ 9 ದ್ವಿಪಕ್ಷೀಯ ಟಿ20 ಸರಣಿಗಳಲ್ಲಿ 8ರಲ್ಲಿ ಜಯಗಳಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ತವರಿನಲ್ಲಿ ಮೊದಲ ಟಿ20 ಸರಣಿ ಗೆಲವು ಸಾಧಿಸಿದೆ.

ಭಾರತದ ಈ ಬ್ಯಾಟರ್ ವಿಶ್ವಕಪ್‌ನಲ್ಲಿ ಅತ್ಯುತ್ತಮ ಫಿನಿಷರ್ ಆಗಲಿದ್ದಾನೆ ಎಂದ ರವಿಚಂದ್ರನ್ ಅಶ್ವಿನ್ಭಾರತದ ಈ ಬ್ಯಾಟರ್ ವಿಶ್ವಕಪ್‌ನಲ್ಲಿ ಅತ್ಯುತ್ತಮ ಫಿನಿಷರ್ ಆಗಲಿದ್ದಾನೆ ಎಂದ ರವಿಚಂದ್ರನ್ ಅಶ್ವಿನ್

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ತಂಡಕ್ಕೆ 238 ರನ್‌ಗಳ ಬೃಹತ್ ಗುರಿ ನೀಡಿತು. ಬೃಹತ್ ಮೊತ್ತವನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಅರ್ಶ್‌ದೀಪ್ ಸಿಂಗ್ ಆರಂಭದಲ್ಲೇ ಆಘಾತ ನೀಡಿದರು. ದಕ್ಷಿಣ ಆಫ್ರಿಕಾ ತಂಡದ ನಾಯಕ ಟೆಂಬಾ ಬವುಮಾ ಮತ್ತು ರಿಲೀ ರೊಸೊವ್ ಶೂನ್ಯಕ್ಕೆ ಔಟಾದರು.

ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿ ಕಾಕ್ ಮತ್ತು ಐಡೆನ್ ಮಾರ್ಕ್ರಾಮ್ ಉತ್ತಮ ಜೊತೆಯಾಟ ಆಡಿದರು. 19 ಎಸೆತಗಳಲ್ಲಿ 33 ರನ್ ಗಳಿಸಿದ ಮಾರ್ಕ್ರಾಮ್ ವಿಕೆಟ್ ಒಪ್ಪಿಸಿದರು. ನಂತರ ಬಂದ ಡೇವಿಡ್ ಮಿಲ್ಲರ್ ಭರ್ಜರಿ ಶತಕ ಗಳಿಸಿದರು.

ಡೇವಿಡ್ ಮಿಲ್ಲರ್ ಕೇವಲ 47 ಎಸೆತಗಳಲ್ಲಿ 8 ಬೌಂಡರಿ ಮತ್ತು 7 ಸಿಕ್ಸರ್‍‌ಗಳ ನೆರವಿನಿಂದ ಅಜೇಯ 106 ರನ್ ಗಳಿಸಿದರು. ಕ್ವಿಂಟನ್ ಡಿ ಕಾಕ್ 48 ಎಸೆತಗಳಲ್ಲಿ3 ಬೌಂಡರಿ ಮತ್ತು 4 ಸಿಕ್ಸರ್‍‌ಗಳ ನೆರವಿನಿಂದ ಅಜೇಯ 69 ರನ್ ಗಳಿಸಿದರು ಕೂಡ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 3 ವಿಕೆಟ್ ಕಳೆದುಕೊಂಡು 221 ರನ್ ಗಳಿಸುವ ಮೂಲಕ 16 ರನ್‌ಗಳ ಅಂತರದಲ್ಲಿ ಸೋಲನುಭವಿಸಿತು.

ಮೊದಲ ವಿಕೆಟ್‌ಗೆ 96 ರನ್‌ಗಳ ಜೊತೆಯಾಟ

ಮೊದಲ ವಿಕೆಟ್‌ಗೆ 96 ರನ್‌ಗಳ ಜೊತೆಯಾಟ

ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ತಂಡ ಸ್ಫೋಟಕ ಆರಂಭ ಪಡೆಯಿತು. ನಾಯಕ ರೋಹಿತ್ ಶರ್ಮಾ ಮತ್ತು ಕೆಎಲ್‌ ರಾಹುಲ್ ಉತ್ತಮ ಬ್ಯಾಟಿಂಗ್ ಮಾಡಿದರು.

ನಾಯಕ ರೋಹಿತ್ ಶರ್ಮಾ 37 ಎಸೆತಗಳಲ್ಲಿ 7 ಬೌಂಡರಿ ಒಂದು ಸಿಕ್ಸರ್ ಸಹಿತ 43 ರನ್ ಗಳಿಸಿದರೆ, ಉಪನಾಯಕ ಕೆಎಲ್ ರಾಹುಲ್ 28 ಎಸೆತಗಳಲ್ಲಿ 57 ರನ್ ಗಳಿಸಿ ತಂಡಕ್ಕೆ ಉತ್ತಮ ಆರಂಭ ಒದಗಿಸಿದರು. ಈ ಜೋಡಿ ಮೊದಲನೇ ವಿಕೆಟ್‌ಗೆ 96 ರನ್‌ಗಳನ್ನು ಕಲೆ ಹಾಕಿ ಉತ್ತಮ ಅಡಿಪಾಯ ಹಾಕಿತು.

IND vs SA ODI: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟ, ಆರ್‌ಸಿಬಿ ಆಟಗಾರನಿಗೆ ಅವಕಾಶ

ರಾಹುಲ್, ಸೂರ್ಯಕುಮಾರ್ ಯಾದವ್ ಅರ್ಧಶತಕ

ರಾಹುಲ್, ಸೂರ್ಯಕುಮಾರ್ ಯಾದವ್ ಅರ್ಧಶತಕ

ಕಳೆದ ಪಂದ್ಯದಲ್ಲಿ ನಿಧಾನಗತಿಯ ಬ್ಯಾಟಿಂಗ್‌ಗಾಗಿ ಟೀಕೆಗೆ ಗುರಿಯಾಗಿದ್ದ ಕೆಎಲ್ ರಾಹುಲ್ ತಮ್ಮ ಬ್ಯಾಟಿಂಗ್‌ನಿಂದ ಟೀಕಾಕಾರರ ಬಾಯಿ ಮುಚ್ಚಿಸಿದರು. ಕೇವಲ 28 ಎಸೆತಗಳಲ್ಲಿ 200 ಸ್ಟ್ರೈಕ್‌ ರೇಟ್‌ನಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ತಮ್ಮ ಇನ್ನಿಂಗ್ಸ್‌ನಲ್ಲಿ ರಾಹುಲ್ 5 ಬೌಂಡಿ, 4 ಭರ್ಜರಿ ಸಿಕ್ಸರ್ ಸಿಡಿಸಿದರು.

ಕೆಎಲ್ ರಾಹುಲ್ ಔಟಾದ ನಂತರ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್ ಅಕ್ಷರರ್ಶ ಆರ್ಭಟಿಸಿದರು. ಕೇವಲ 18 ಎಸೆತಗಳಲ್ಲಿ ಅರ್ಧಶತಕವನ್ನು ಪೂರೈಸಿದ ಸೂರ್ಯಕುಮಾರ್ ಯಾದವ್ ದಕ್ಷಿಣ ಆಫ್ರಿಕಾ ಬೌಲರ್ ಗಳ ಬೆಂಡೆತ್ತಿದರು. ಕೇವಲ 22 ಎಸೆತಗಳಲ್ಲಿ 5 ಬೌಂಡರಿ 5 ಭರ್ಜರಿ ಸಿಕ್ಸರ್ ನೆರವಿನಿಂದ 61 ರನ್ ಗಳಿಸಿದ ಅವರು ರನೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದರು.

ಅರ್ಧಶತಕ ತಪ್ಪಿಸಿಕೊಂಡ ಕೊಹ್ಲಿ

ಅರ್ಧಶತಕ ತಪ್ಪಿಸಿಕೊಂಡ ಕೊಹ್ಲಿ

ವಿರಾಟ್ ಕೊಹ್ಲಿ ಕೂಡ ಅಂತಿಮ ಓವರ್ ಗಳಲ್ಲಿ ಆರ್ಭಟಿಸಿದರು. 28 ಎಸೆತಗಳನ್ನು ಎದುರಿಸಿದ ಅವರು 7 ಬೌಂಡರಿ 1 ಸಿಕ್ಸರ್ ನೆರವಿನಿಂದ 49 ರನ್ ಗಳಿಸಿದರು. ಕೇವಲ ಒಂದು ರನ್‌ನಿಂದ ತಮ್ಮ ಅರ್ಧಶತಕ ತಪ್ಪಿಸಿಕೊಂಡರು. ಅಂತಿಮ ಓವರ್ ನಲ್ಲಿ ಡಿಕೆ ಅಬ್ಬರಿಸಿ 7 ಎಸೆತಗಳಲ್ಲಿ ಎರಡು ಸಿಕ್ಸರ್, ಒಂದು ಬೌಂಡರಿ ನೆರವಿನಿಂದ 17 ರನ್ ಗಳಿಸಿದರು.

ದಕ್ಷಿಣ ಆಫ್ರಿಕಾ ಪರ ಕೇಶವ್ ಮಹಾರಾಜ್ 4 ಓವರ್ ಗಳಲ್ಲಿ 23 ರನ್ ನೀಡಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

ಭಾರತ, ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್

ಭಾರತ, ದಕ್ಷಿಣ ಆಫ್ರಿಕಾ ಪ್ಲೇಯಿಂಗ್ ಇಲೆವೆನ್

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಾಹರ್

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಿಲೀ ರೊಸೊವ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಟ್ರಿಸ್ಟಿಯನ್ ಸ್ಟಬ್ಸ್, ವೇಯ್ನ್ ಪಾರ್ನೆಲ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಲುಂಗಿ ಎಂಗಿಡಿ, ಅನ್ರಿಚ್ ನಾರ್ಟ್ಜೆ

For Quick Alerts
ALLOW NOTIFICATIONS
For Daily Alerts
Story first published: Monday, October 3, 2022, 10:28 [IST]
Other articles published on Oct 3, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X