IND Vs SA : ಉತ್ತಮ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿರುವ ಟೀಂ ಇಂಡಿಯಾ ಆಟಗಾರರು

ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಟಿ20 ವಿಶ್ವಕಪ್‌ಗೆ ಕೇವಲ ಮೂರು ವಾರಗಳು ಬಾಕಿ ಉಳಿದಿವೆ. ಬುಧವಾರದಿಂದ ಆರಂಭವಾಗಲಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ಟಿ20 ಸರಣಿಯು ತಂಡದಲ್ಲಿರುವ ಇತರ ಮೂವರು ಭಾರತೀಯ ಆಟಗಾರರಿಗೆ ದೊಡ್ಡ ಪರೀಕ್ಷೆಯಾಗಿದೆ.

ಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ, ನವರಾತ್ರಿ ಶುಭಾಶಯ ಕೋರಿದ ದಕ್ಷಿಣ ಆಫ್ರಿಕಾ ಕ್ರಿಕೆಟಿಗಅನಂತಪದ್ಮನಾಭ ದೇವಸ್ಥಾನಕ್ಕೆ ಭೇಟಿ ನೀಡಿ, ನವರಾತ್ರಿ ಶುಭಾಶಯ ಕೋರಿದ ದಕ್ಷಿಣ ಆಫ್ರಿಕಾ ಕ್ರಿಕೆಟಿಗ

ಯುವ ವೇಗದ ಬೌಲರ್ ಅರ್ಷದೀಪ್ ಸಿಂಗ್, ವಿಕೆಟ್ ಕೀಪರ್ ರಿಷಬ್ ಪಂತ್ ಮತ್ತು ಟೀಂ ಇಂಡಿಯಾದ ಪ್ರಮುಖ ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯು ವಿಶ್ವಕಪ್‌ಗಿಂದ ಮೊದಲು ಭಾರತದ ಕೊನೆಯ ಟಿ20 ಸರಣಿಯಾಗಿದೆ ಎನ್ನುವುದು ಮುಖ್ಯವಾಗಿದೆ. ಸರಣಿಯ ನಂತರ ವಿಶ್ವಕಪ್ ತಂಡದ ಆಟಗಾರರು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.

ಭಾರತವು ಆಸ್ಟ್ರೇಲಿಯಾದಲ್ಲಿ ವಿಶ್ವಕಪ್‌ ಆರಂಭಕ್ಕೂ ಮುನ್ನ ಕೆಲವು ಅಭ್ಯಾಸ ಪಂದ್ಯಗಳನ್ನು ಆಡುತ್ತದೆಯಾದರೂ, ತವರಿನಲ್ಲಿ ಈ ಸರಣಿಯು ತಂಡದ ಸಂಯೋಜನೆಯನ್ನು ನಿರ್ಧರಿಸಲು ತಂಡದ ನಿರ್ವಹಣೆಗೆ ಸಹಾಯ ಮಾಡುತ್ತದೆ. ಈ ಹಂತದಲ್ಲಿಯೇ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸರಣಿಗೆ ಹೆಚ್ಚಿನ ಮಹತ್ವವಿದೆ.

ಅರ್ಷ್‌ದೀಪ್ ಪ್ರದರ್ಶನದ ಮೇಲೆ ಎಲ್ಲರ ಗಮನ

ಅರ್ಷ್‌ದೀಪ್ ಪ್ರದರ್ಶನದ ಮೇಲೆ ಎಲ್ಲರ ಗಮನ

ಆಸ್ಟ್ರೇಲಿಯಾ ವಿರುದ್ಧದ ಸರಣಿಯನ್ನು ತಪ್ಪಿಸಿಕೊಂಡ ಅರ್ಷ್‌ದೀಪ್ ಸಿಂಗ್ ಕಂಡೀಷನಿಂಗ್ ಕೆಲಸಕ್ಕಾಗಿ ಎನ್‌ಸಿಎನಲ್ಲಿದ್ದರು. ಈಗ, ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಆಡಲಿದ್ದು, ಈಗಾಗಲೇ ತಂಡವನ್ನು ಸೇರಿಕೊಂಡಿದ್ದಾರೆ.

ಸ್ಲಾಗ್‌ ಓವರ್‌ಗಳಲ್ಲಿ ಭಾರತದ ಬೌಲಿಂಗ್ ಪ್ರದರ್ಶನ ಕಳಪೆಯಾಗಿದ್ದು, ಭುವನೇಶ್ವರ್ ಕುಮಾರ್ ಮತ್ತು ಹರ್ಷಲ್ ಪಟೇಲ್ ಸ್ಲಾಗ್ ಓವರ್‌ಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದಾರೆ. ಅರ್ಷ್‌ದೀಪ್ ಆಗಮನದ ನಂತರ ಬೌಲಿಂಗ್‌ ವಿಭಾಗದಲ್ಲಿ ಸುಧಾರಣೆಯಾಗಲಿದೆಯಾ ನೋಡಬೇಕಿದೆ.

ಆದ್ದರಿಂದ ಮುಂಬರುವ ಸರಣಿಯಲ್ಲಿ ಅರ್ಷ್‌ದೀಪ್ ಅವರ ಪ್ರದರ್ಶನ ತಂಡದಲ್ಲಿ ಪ್ಲೇಯಿಂಗ್ 11 ನಲ್ಲಿ ತಮ್ಮ ಸ್ಥಾನವನ್ನು ಖಚಿತಪಡಿಸಿಕೊಳ್ಳುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜಸ್ಪ್ರೀತ್ ಬುಮ್ರಾ ಮಾತ್ರ ಪ್ಲೇಯಿಂಗ್ 11 ನಲ್ಲಿ ಆಡುವುದು ಖಚಿತವಾಗಿದೆ.

Ind vs SA 1st T20: ಉಭಯ ತಂಡಗಳ ಸಂಭಾವ್ಯ ಪ್ಲೇಯಿಂಗ್ 11, ಸವಾಲುಗಳು

ವಿಕೆಟ್ ಪಡೆಯಬೇಕಿದೆ ಯುಜುವೇಂದ್ರ ಚಹಾಲ್‌

ವಿಕೆಟ್ ಪಡೆಯಬೇಕಿದೆ ಯುಜುವೇಂದ್ರ ಚಹಾಲ್‌

ಯುಜುವೇಂದ್ರ ಚಹಾಲ್ ಭಾರತದ ಪ್ರಮುಖ ಸ್ಪಿನ್ನರ್ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಅವರು ಭಾರತದ ವಿಕೆಟ್ ಟೇಕರ್ ಬೌಲರ್ ಆಗಿದ್ದಾರೆ. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಅಕ್ಷರ್ ಪಟೇಲ್ ಚಹಾಲ್ ಅವರಿಗಿಂತ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ.

ಆಸ್ಟ್ರೇಲಿಯಾದ ವೇಗದ ಮತ್ತು ಬೌನ್ಸ್ ಪಿಚ್‌ಗಳಲ್ಲಿ ಭಾರತ ತಂಡ ಒಬ್ಬ ಸ್ಪಿನ್ನರ್ ಜೊತೆ ಆಡಲು ಯೋಚಿಸಿದರೆ ಚಹಾಲ್ ಸ್ಥಾನ ಪಡೆಯುವುದು ಕಷ್ಟವಾಗಲಿದೆ. ಈಗಾಗಲೇ ಅಕ್ಷರ್ ಪಟೇಲ್ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ, ಪ್ರಮುಖ ವಿಕೆಟ್‌ಗಳನ್ನು ತೆಗೆದುಕೊಂಡಿದ್ದಾರೆ. ಬ್ಯಾಟಿಂಗ್‌ನಲ್ಲೂ ಮಿಂಚುವ ಸಾಮರ್ಥ್ಯ ಹೊಂದಿರುವ ಅಕ್ಷರ್ ಪಟೇಲ್ ತಂಡದ ಮೊದಲ ಆಯ್ಕೆಯಾಗಲಿದ್ದಾರೆ.

ಲೆಗ್ ಸ್ಪಿನ್ನರ್ ಚಹಾಲ್ ದಕ್ಷಿಣ ಆಫ್ರಿಕಾ ಸರಣಿಯಲ್ಲಿ ವಿಕೆಟ್‌ಗಳನ್ನು ಪಡೆಯುವ ಮೂಲಕ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಿದೆ. ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಮಾತ್ರ ಚಹಾಲ್ ಆಡಿದರು.

ರಿಷಬ್ ಪಂತ್‌ಗೆ ಇದು ಕೊನೆಯ ಅವಕಾಶ

ರಿಷಬ್ ಪಂತ್‌ಗೆ ಇದು ಕೊನೆಯ ಅವಕಾಶ

ರಿಷಬ್ ಪಂತ್ ಮತ್ತು ದಿನೇಶ್ ಕಾರ್ತಿಕ್ ಇಬ್ಬರ ನಡುವೆ ಸದ್ಯ ವಿಪರೀತ ಸ್ಪರ್ಧೆ ಏರ್ಪಟ್ಟಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ದಿನೇಶ್ ಕಾರ್ತಿಕ್‌ ಬ್ಯಾಟಿಂಗ್ ಮಾಡಲು ಹೆಚ್ಚಿನ ಅವಕಾಶ ಸಿಗಲಿಲ್ಲ. ಎರಡನೇ ಪಂದ್ಯದಲ್ಲಿ ಪಂತ್ ಆಯ್ಕೆಯಾದರೂ ಅವರಿಗೆ ಬ್ಯಾಟಿಂಗ್ ಮಾಡಲು ಅವಕಾಶ ಸಿಗಲಿಲ್ಲ.

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ರಿಷಬ್‌ ಪಂತ್‌ಗೆ ಅವಕಾಶ ಸಿಗುವ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ. ಆದರೂ ಒಂದು ವೇಳೆ ಅವಕಾಶ ಸಿಕ್ಕರೆ ಪಂತ್ ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕಿದೆ. ದಿನೇಶ್ ಕಾರ್ತಿಕ್ ಮತ್ತು ರಿಷಬ್ ಪಂತ್ ಇಬ್ಬರಿಗೂ ಬ್ಯಾಟಿಂಗ್‌ಗೆ ಅವಕಾಶ ಸಿಗಬೇಕು ಎಂದು ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಕೊನೆಯ ಪಂದ್ಯದ ನಂತರ ಹೇಳಿಕೆ ನೀಡಿದ್ದರು.

For Quick Alerts
ALLOW NOTIFICATIONS
For Daily Alerts
Story first published: Tuesday, September 27, 2022, 14:43 [IST]
Other articles published on Sep 27, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X