ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

3 ವರ್ಷಗಳ ಬಳಿಕ ಟೀಂ ಇಂಡಿಯಾಗೆ ಕಂಬ್ಯಾಕ್ ಮಾಡಿದ ದಿನೇಶ್ ಕಾರ್ತಿಕ್

Dinesh karthik
Dinesh Karthik 2019ರ ನಂತರ ಈಗ ಮತ್ತೊಮ್ಮೆ ಇಂಡಿಯಾ ಜೆರ್ಸಿಯಲ್ಲಿ | Oneindia Kannada

ದಕ್ಷಿಣ ಆಫ್ರಿಕಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. 9ರಂದು ಆರಂಭವಾಗಲಿರುವ ಟೂರ್ನಿಗೆ ಬಿಸಿಸಿಐ 18 ಮಂದಿಯ ತಂಡವನ್ನು ಪ್ರಕಟಿಸಿದೆ. ಈ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಬುಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಭಾರತ ತಂಡದ ಹಂಗಾಮಿ ನಾಯಕರಾಗಿ ಕೆಎಲ್ ರಾಹುಲ್ ಹಾಗೂ ಉಪನಾಯಕರಾಗಿ ರಿಷಬ್ ಪಂತ್ ಆಯ್ಕೆಯಾಗಿದ್ದಾರೆ ಎಂದು ಪ್ರಕಟಿಸಲಾಗಿದೆ. ವಿಶೇಷ ಅಂದ್ರೆ ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ಬಳಿಕ ಮತ್ತೆ ಟೀಂ ಇಂಡಿಯಾಗೆ ಕಂಬ್ಯಾಖ್ ಮಾಡಿದ್ದಾರೆ.

IPL 2022: ಮುಂದಿನ ಸೀಸನ್‌ಗೆ ಹೊಸ ನಾಯಕನ ಹುಡುಕಾಟ ನಡೆಸಲಿವೆ ಈ 4 ತಂಡಗಳುIPL 2022: ಮುಂದಿನ ಸೀಸನ್‌ಗೆ ಹೊಸ ನಾಯಕನ ಹುಡುಕಾಟ ನಡೆಸಲಿವೆ ಈ 4 ತಂಡಗಳು

ಮುಂಬೈ ಪರ ಉತ್ತಮ ಆಟವಾಡಿದ ತಿಲಕ್ ವರ್ಮಾ, ಗುಜರಾತ್ ಪರ ಉತ್ತಮ ಆಟವಾಡಿದ ರಾಹುಲ್ ತೆವಾಟಿಯಾ, ಎಸ್ಆರ್ಎಚ್ ಪರ ಆಡಿದ ರಾಹುಲ್ ತ್ರಿಪಾಠಿ ಅವರ ಬ್ಯಾಟಿಂಗ್ ಸಾಮರ್ಥದ ಮುಂದೆ ದಿನೇಶ್ ಕಾರ್ತಿಗೆ ಅವಕಾಶ ಸಿಗುವುದು ಅನುಮಾನವಾಗಿತ್ತು. ಏಕೆಂದರೆ ದಿನೇಶ್ ಕಾರ್ತಿಕ್ ಇದ್ದ ತಂಡದಲ್ಲೇ ರಿಷಬ್ ಪಂತ್ ಕೂಡ ಇದ್ದಾರೆ. ಇದರಿಂದ ದಿನೇಶ್ ಕಾರ್ತಿಕ್ ಸ್ಥಾನ ಪಡೆಯುತ್ತಾರಾ ಎಂಬ ಅನುಮಾನ ಮೂಡಿದೆ. ಆದ್ರೂ ಅವರಿಗೆ ಟಿ20 ವಿಶ್ವಕಪ್‌ನಲ್ಲಿ ಸ್ಥಾನ ಸಿಗುತ್ತದೆಯೋ ಇಲ್ಲವೋ, ಆದ್ರೆ 3 ವರ್ಷಗಳ ನಂತರ ದಿನೇಶ್ ಕಾರ್ತಿಕ್ ತಂಡಕ್ಕೆ ಮರಳಿರುವುದು ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

ಅದೇ ರೀತಿ ಶ್ರೀಲಂಕಾ ವಿರುದ್ಧದ ಟಿ20 ತಂಡದಲ್ಲಿ ಸ್ಥಾನ ಪಡೆದಿದ್ದ ಸಂಜು ಸ್ಯಾಮ್ಸನ್ ಗೆ ಈ ಬಾರಿ ಅವಕಾಶ ಸಿಗಲಿಲ್ಲ. ಜೂನ್ 9 ರಿಂದ ಆರಂಭಗೊಳ್ಳುವ ಮೊದಲ ಟಿ20 ಪಂದ್ಯವು ದೆಹಲಿಯಲ್ಲಿ ನಡೆಯಲಿದ್ದು, ಜೂನ್ 12 ಎರಡನೇ ಟಿ20 ಕಟಕ್, ಜೂನ್ 14 ಮೂರನೇ ಟಿ20 ವಿಶಾಖಪಟ್ಟಣಂ, ಜೂನ್ 17 ನಾಲ್ಕನೇ ಟಿ20 ರಾಜ್‌ಕೋಟ್‌, ಜೂನ್ 19 ಐದನೇ ಟಿ20 ಬೆಂಗಳೂರಿನಲ್ಲಿ ನಡೆಯಲಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತದ ಸ್ಕ್ವಾಡ್‌
ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ) (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಆವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್

Story first published: Sunday, May 22, 2022, 23:19 [IST]
Other articles published on May 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X