ಭಾರತ-ದಕ್ಷಿಣ ಆಫ್ರಿಕಾ ಟಿ20 ಮುಖಾಮುಖಿ: ಹೆಚ್ಚು ಸಿಕ್ಸರ್ ಸಿಡಿಸಿದ ಐವರು ಬ್ಯಾಟ್ಸ್‌ಮನ್

ಜೂನ್ 9ರಿಂದ ಭಾರತ-ದಕ್ಷಿಣ ಆಫ್ರಿಕಾ ತಂಡಗಳು ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗುತ್ತಿವೆ. ಸೂಪರ್ ಸ್ಟಾರ್ ಆಟಗಾರರ ಅನುಪಸ್ಥಿತಿಯಲ್ಲಿ ಕೆ.ಎಲ್ ರಾಹುಲ್ ಟೀಂ ಇಂಡಿಯಾವನ್ನ ಮುನ್ನಡೆಸಲಿದ್ದಾರೆ.
ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಇಲ್ಲದೆ ಕೆಎಲ್ ರಾಹುಲ್ ತಂಡದ ನಾಯಕತ್ವ ಜವಾಬ್ದಾರಿ ಹೊತ್ತಿದ್ದಾರೆ. ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಅಯ್ಯರ್ ಮತ್ತು ಭುವನೇಶ್ವರ್ ಕುಮಾರ್ ಅವರು ಭಾರತದೊಂದಿಗೆ ಇದ್ದಾರೆ.
ಅತ್ತ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿಕಾಕ್, ಏಡನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಕಗಿಸೊ ರಬಾಡ ಮತ್ತು ಅನ್ರಿಕ್ ನೊರ್ಕಿಯಾ ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿ ಆಡಿದ್ದಾರೆ. ಹೀಗಾಗಿ ಟೀಂ ಇಂಡಿಯಾ ವಿರುದ್ಧದ ಸರಣಿಯಲ್ಲಿ ಕಠಿಣ ಹೋರಾಟ ನಿರೀಕ್ಷಿಸಬಹುದು. ಎರಡು ತಂಡಗಳ ಕಾದಾಟದ ಇತಿಹಾಸ ನೋಡಿದರೆ ಟಿ20ಯಲ್ಲಿ ಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರರು ನೆನಪಾಗಬಹುದು. ಹಾಗಿದ್ರೆ ಆ ಪಟ್ಟಿಯಲ್ಲಿ ಅಗ್ರ ಐದು ಸ್ಥಾನದಲ್ಲಿರುವ ಆಟಗಾರರು ಯಾರೆಂಬುದನ್ನ ಈ ಕೆಳಗೆ ಕಾಣಬಹುದು.

ಹೆನ್ರಿಕ್ ಕ್ಲಾಸೆನ್
ಹೆನ್ರಿಕ್ ಕ್ಲಾಸೆನ್ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಕಂ ಬ್ಯಾಟ್ಸ್‌ಮನ್. ಉಭಯ ತಂಡಗಳ ಮುಖಾಮುಖಿಯಲ್ಲಿ ಹೆಚ್ಚು ಸಿಕ್ಸರ್ ಸಿಡಿಸಿದವರ ಪಟ್ಟಿಯಲ್ಲಿ ಹೆನ್ರಿಚ್ ಕ್ಲಾಸೆನ್ ಐದನೇ ಸ್ಥಾನದಲ್ಲಿದ್ದಾರೆ. ಅವರು ಭಾರತದ ವಿರುದ್ಧ ಕೇವಲ ಮೂರು ಟಿ20 ಪಂದ್ಯಗಳನ್ನು ಆಡಿದ್ದರು. ಆದರೆ ಎಂಟು ಸಿಕ್ಸರ್‌ಗಳನ್ನು ಬಾರಿಸಿದರು.
2018 ರ ಭಾರತ ವಿರುದ್ಧದ ಸರಣಿಯಲ್ಲಿ, ಕ್ಲಾಸೆನ್ 30 ಎಸೆತಗಳಲ್ಲಿ 69 ರನ್ ಗಳಿಸಿದರು. ಅವರು ಮಧ್ಯಮ ಕ್ರಮಾಂಕದಲ್ಲಿ ಅಪಾಯಕಾರಿ ಬ್ಯಾಟ್ಸ್‌ಮನ್ ಆಗಿದ್ದು, ಈ ಬಾರಿಯೂ ಅವರು ದಕ್ಷಿಣ ಆಫ್ರಿಕಾ ತಂಡದಲ್ಲಿದ್ದಾರೆ. ಆಡುವ 11ರಲ್ಲಿ ಆಡುವ ಸಾಧ್ಯತೆಯೂ ಹೆಚ್ಚಿದೆ. ಆದ್ದರಿಂದ, ಕ್ಲಾಸೆನ್ ಭಾರತಕ್ಕೆ ದೊಡ್ಡ ಅಪಾಯವನ್ನುಂಟು ಮಾಡಲು ಸಮರ್ಥರಾಗಿದ್ದಾರೆ.

ವಿರಾಟ್ ಕೊಹ್ಲಿ
ಭಾರತದ ಮಾಜಿ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಸಿಕ್ಸರ್‌ಗಳೊಂದಿಗೆ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಕೊಹ್ಲಿ ಒಂಬತ್ತು ಸಿಕ್ಸರ್‌ಗಳನ್ನು ಸಿಡಿಸಿದ್ದರು. 33 ವರ್ಷದ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ 234 ರನ್ ಗಳಿಸಿದ್ದರು. ಕೊಹ್ಲಿಯ ಅತ್ಯಧಿಕ ಸ್ಕೋರ್ ಅಜೇಯ 72 ಆಗಿದ್ದು, 134.39ರ ಸ್ಟ್ರೈಕ್‌ರೇಟ್ ಆಗಿದೆ.
ಆದರೆ ಈ ಬಾರಿ ವಿರಾಟ್ ಕೊಹ್ಲಿ ಭಾರತ ತಂಡದಲ್ಲಿ ಇಲ್ಲ. ಇದಾದ ಬಳಿಕ ಇಂಗ್ಲೆಂಡ್ ಸರಣಿ ಇರುವುದರಿಂದ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ಕೊಹ್ಲಿ ಇತ್ತೀಚೆಗೆ ಕೆಟ್ಟ ಫಾರ್ಮ್‌ನಲ್ಲಿದ್ದಾರೆ. ಕಳೆದ ಮೂರು ವರ್ಷಗಳಿಂದ ಶತಕ ಸಿಡಿಸದೇ ಇದ್ದ ಕೊಹ್ಲಿ ಈ ಬಾರಿಯ ಐಪಿಎಲ್ ನಲ್ಲೂ ನಿರಾಸೆ ಮೂಡಿಸಿದ್ದಾರೆ.

ಸುರೇಶ್ ರೈನಾ
ಭಾರತದ ಮಾಜಿ ಕ್ರಿಕೆಟಿಗ ಸುರೇಶ್ ರೈನಾ ಮೂರನೇ ಸ್ಥಾನದಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ರೈನಾ 13 ಸಿಕ್ಸರ್‌ಗಳನ್ನು ಸಿಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ರೈನಾ 11 ಇನ್ನಿಂಗ್ಸ್‌ಗಳಿಂದ 339 ರನ್ ಗಳಿಸಿದ್ದಾರೆ. ಅವರು 33.90 ರ ಸರಾಸರಿ ಮತ್ತು 148.03 ರ ಸ್ಟ್ರೈಕ್‌ರೇಟ್ ಹೊಂದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಟಿ20ಯಲ್ಲಿ ಶತಕ ಸಿಡಿಸಿದ ಏಕೈಕ ಆಟಗಾರ ರೈನಾ ಎಂಬುದು ವಿಶೇಷ. ರೈನಾ 60 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ 5 ಸಿಕ್ಸರ್‌ಗಳೊಂದಿಗೆ 101 ರನ್ ಗಳಿಸಿದ್ದರು.

ರೋಹಿತ್ ಶರ್ಮಾ
ಭಾರತದ ಆರಂಭಿಕ ಹಾಗೂ ನಾಯಕ ರೋಹಿತ್ ಶರ್ಮಾ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ರೋಹಿತ್ 14 ಸಿಕ್ಸರ್ ಬಾರಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ರೋಹಿತ್ 362 ರನ್ ಗಳಿಸಿದ್ದು, 134.07 ಸ್ಟ್ರೈಕ್‌ರೇಟ್ ಮತ್ತು ಸರಾಸರಿ 32.90 ರಷ್ಟು ಹೊಂದಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧ ಉತ್ತಮ ದಾಖಲೆ ಹೊಂದಿರುವ ರೋಹಿತ್ ಈ ಬಾರಿಯ ಸರಣಿಯಲ್ಲಿ ಆಡುವುದಿಲ್ಲ. ಇಂಗ್ಲೆಂಡ್ ಸರಣಿಗೂ ಮುನ್ನ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಜೆಪಿ ಡುಮಿನಿ
ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಹಾಗೂ ಸ್ಪಿನ್ ಆಲ್ ರೌಂಡರ್ ಜೆಪಿ ಡುಮಿನಿ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಅವರು 16 ಸಿಕ್ಸರ್‌ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಎಡಗೈ ಬ್ಯಾಟ್ಸ್‌ಮನ್ 10 ಟಿ20ಗಳಲ್ಲಿ 295 ರನ್ ಗಳಿಸಿದ್ದಾರೆ. ಡುಮಿನಿ ಸರಾಸರಿ 59 ಮತ್ತು 121.90 ಸ್ಟ್ರೈಕ್‌ರೇಟ್ ಹೊಂದಿದ್ದಾರೆ. ಡುಮಿನಿ ಭಾರತದ ವಿರುದ್ಧ ಅತ್ಯುತ್ತಮ ಬ್ಯಾಟಿಂಗ್ ದಾಖಲೆ ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications