ದ. ಆಫ್ರಿಕಾ ವಿರುದ್ಧ ತವರಿನಲ್ಲಿ ಇದುವರೆಗೂ ಟಿ20 ಸರಣಿ ಗೆದ್ದಿಲ್ಲ ಟೀಂ ಇಂಡಿಯಾ!

ಐಪಿಎಲ್ ಬಳಿಕ ಮೊದಲ ಅಂತರಾಷ್ಟ್ರೀಯ ಕ್ರಿಕೆಟ್ ಸರಣಿಯನ್ನ ಟೀಂ ಇಂಡಿಯಾ ಆಡಲು ಸಿದ್ಧಗೊಂಡಿದ್ದು, ದಕ್ಷಿಣ ಆಫ್ರಿಕಾ ವಿರುದ್ದ ಐದು ಪಂದ್ಯಗಳ ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಈಗಾಗಲೇ ಐಪಿಎಲ್ ನಲ್ಲಿ ಆಡಿದ ವಿದೇಶಿ ಆಟಗಾರರು ತಮ್ಮ ತಂಡದ ಪರ ಏಕದಿನ, ಟಿ20 ಪಂದ್ಯಗಳನ್ನ ಮಿಂಚುತ್ತಿದ್ದಾರೆ.
ಶ್ರೀಲಂಕಾ ಮತ್ತು ಪಾಕಿಸ್ತಾನ ಟಿ20 ಸರಣಿ, ವೆಸ್ಟ್ ಇಂಡೀಸ್ ಮತ್ತು ಪಾಕಿಸ್ತಾನ ಏಕದಿನ ಸರಣಿ ಆಡುತ್ತಿವೆ. ಇನ್ನು ನ್ಯೂಜಿಲೆಂಡ್ ಹಾಗೂ ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಬ್ಯುಸಿಯಾಗಿವೆ. ಇದರ ನಡುವೆ ಇಂದಿನಿಂದು (ಜೂ.9) ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ಆಡಲಿವೆ.

ಇದುವರೆಗೂ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಗೆದ್ದಿಲ್ಲ ಭಾರತ
ಹೌದು, ಟೀಂ ಇಂಡಿಯಾ ಇದುವರೆಗೆ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆದ ಟಿ20 ದ್ವಿಪಕ್ಷೀಯ ಸರಣಿಯನ್ನು ಗೆದ್ದಿಲ್ಲ. 2015 ರಲ್ಲಿ ಪ್ರೋಟೀಸ್ ತಂಡವು ಭಾರತದಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿತು. ಇದರ ನಂತರದಲ್ಲಿ 2019ರಲ್ಲಿ ಭಾರತದೆದುರು ಸರಣಿ ಸಮಬಲ ಮಾಡಿಕೊಂಡಿತು. ಹೀಗಾಗಿ ಸ್ವದೇಶದಲ್ಲೇ ಭಾರತವು ಹರಿಣಗಳ ವಿರುದ್ಧ ಚುಟುಕು ಸರಣಿ ಗೆಲ್ಲಲು ಸಾಧ್ಯವಾಗಿಲ್ಲ.

ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಐದು ಪಂದ್ಯಗಳ ಟಿ20 ಸರಣಿ
ಹೌದು ಭಾರತ-ದಕ್ಷಿಣ ಆಫ್ರಿಕಾ ನಡುವೆ ಇದು ಮೊದಲ ಬಾರಿಗೆ ಐದು ಪಂದ್ಯಗಳ ಟಿ20 ಸರಣಿಯಾಗಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ರಾತ್ರಿ 7 ಗಂಟೆಗೆ ಪಂದ್ಯ ಆರಂಭವಾಗಲಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಲಭ್ಯವಿಲ್ಲ. ಸರಣಿ ಆರಂಭಕ್ಕೂ ಮುನ್ನ ನಾಯಕ ಕೆ.ಎಲ್ ರಾಹುಲ್ ಹಾಗೂ ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ ಗಾಯಗೊಂಡು ತಂಡವನ್ನು ತೊರೆದಿದ್ದಾರೆ. ಹೀಗಾಗಿ ರಿಷಭ್ ಪಂತ್ ಟೀಂ ಇಂಡಿಯಾವನ್ನ ಮುನ್ನಡೆಸಲಿದ್ದಾರೆ.
2006ರಲ್ಲಿ ದ.ಆಫ್ರಿಕಾ ವಿರುದ್ಧದ ಚೊಚ್ಚಲ ಟಿ20ಯಲ್ಲಿ ಕಣಕ್ಕಿಳಿದಿದ್ದ ಇವರು ಇಂದಿಗೂ ಭಾರತ ತಂಡದಲ್ಲಿದ್ದಾರೆ!

ಸತತ 13ನೇ ಪಂದ್ಯ ಗೆದ್ದು ವಿಶ್ವ ದಾಖಲೆ ಮಾಡುತ್ತಾ ಟೀಂ ಇಂಡಿಯಾ ?
ಈಗಾಗಲೇ ಸತತ 12 ಟಿ20 ಪಂದ್ಯಗಳನ್ನ ಜಯಿಸಿರುವ ಟೀಂ ಇಂಡಿಯಾ ವಿಶ್ವದಾಖಲೆಯ ಹೊಸ್ತಿಲಿನಲ್ಲಿ ಬಂದು ತಲುಪಿದೆ. ದಕ್ಷಿಣ ಆಫ್ರಿಕಾ ವಿರುದ್ಧ ದೆಹಲಿಯಲ್ಲಿ ನಡೆಯುವ ಟಿ20 ಪಂದ್ಯ ಗೆದ್ದರೆ ಈ ಸಾಧನೆ ಮಾಡಿದ ಮೊದಲ ತಂಡವಾಗಿ ಹೊರಹೊಮ್ಮಲಿದೆ.
IND vs SA: ಕೆಎಲ್ ರಾಹುಲ್ ಅನುಪಸ್ಥಿತಿಯಲ್ಲಿ ಗೆಲ್ಲುವ ನೆಚ್ಚಿನ ತಂಡ ತಿಳಿಸಿದ ವಾಸಿಂ ಜಾಫರ್

ಓಪನಿಂಗ್ ಬ್ಯಾಟರ್ಸ್ ಮತ್ತು ಬ್ಯಾಟಿಂಗ್ ಕ್ರಮಾಂಕ
ಕೆಎಲ್ ರಾಹುಲ್ ಬದಲಿಗೆ ರಿಷಬ್ ಪಂತ್ ತಂಡದ ನಾಯಕತ್ವ ವಹಿಸಿಕೊಂಡಿರುವುದರಿಂದ ತಂಡದ ಬ್ಯಾಟಿಂಗ್ ಕ್ರಮಾಂಕದಲ್ಲೂ ಬದಲಾವಣೆ ಆಗುತ್ತಿದೆ. ರುತುರಾಜ್ ಗಾಯಕ್ವಾಡ್ ಅಥವಾ ವೆಂಕಟೇಶ್ ಅಯ್ಯರ್ ಅವರನ್ನು ಅಂತಿಮ ತಂಡಕ್ಕೆ ಸೇರಿಸಿಕೊಳ್ಳಬಹುದು. ಇಬ್ಬರೂ ಹೊಸ ಚೆಂಡನ್ನು ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. ಇಶಾನ್ ಕಿಶನ್ ಜೊತೆಗೆ ರುತುರಾಜ್ ಗಾಯಕ್ವಾಡ್ ಆರಂಭಿಕರಾಗಿ ಕಣಕ್ಕೆ ಇಳಿದರು ಸಹ ಅನುಮಾನವಿಲ್ಲ.
ಅಗ್ರ ಕ್ರಮಾಂಕದಲ್ಲಿ ರಿಷಬ್ ಪಂತ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್ ಪಾಂಡ್ಯ ಮತ್ತು ದಿನೇಶ್ ಕಾರ್ತಿಕ್ ತಂಡಕ್ಕೆ ದೊಡ್ಡ ಮೊತ್ತ ಗಳಿಸಲು ನೆರವಾಗುವುದರಲ್ಲಿ ಸಂಶಯವಿಲ್ಲ. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಅತ್ಯಂತ ಕೆಟ್ಟ ದಾಖಲೆ ಹೊಂದಿದೆ. ಅದನ್ನು ಮತ್ತೆ ಅಳಿಸಲು ಇದಕ್ಕಿಂತ ಉತ್ತಮ ಅವಕಾಶ ಸಿಗಲಾರದು.
ದಕ್ಷಿಣ ಆಫ್ರಿಕಾ ಕೂಡ ಸರಣಿ ಗೆಲುವಿನೊಂದಿಗೆ ಆಕ್ರಮಣಕಾರಿಯಾಗಿದೆ. ಕಳೆದ ಐದು ಟಿ20 ಪಂದ್ಯಗಳಲ್ಲಿ ಒಂದರಲ್ಲಿ ಮಾತ್ರ ತಂಡ ಗೆದ್ದಿದೆ. ಕೊನೆಯ ನಾಲ್ಕರಲ್ಲಿ ಭಾರತ ಗೆದ್ದಿದೆ. ಕಳೆದ ಇತಿಹಾಸವನ್ನ ಗಮನಿಸಿದ್ರೆ, ಹರಿಣಗಳ ತಂಡವೇ ಮೇಲುಗೈ ಸಾಧಿಸಿದೆ. ಉಭಯ ತಂಡಗಳು ಇದುವರೆಗೆ 15 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತದ ಆರು ಪಂದ್ಯಗಳನ್ನು ಗೆದ್ದಿದೆ ಮತ್ತು ಭಾರತ ಒಂಭತ್ತು ಪಂದ್ಯಗಳನ್ನ ಜಯಿಸಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್
ದಕ್ಷಿಣ ಆಫ್ರಿಕಾ
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಏಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಅನ್ರಿಕ್ ನೊರ್ಕಿಯಾ, ತಬ್ರೈಜ್ ಶಮ್ಸಿ
ಟೀಂ ಇಂಡಿಯಾ
ರುತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (ನಾಯಕ ಮತ್ತು ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಯುಜವೇಂದ್ರ ಚಹಾಲ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications