For Quick Alerts
ALLOW NOTIFICATIONS  
For Daily Alerts
 

ಭಾರತ vs ದ. ಆಫ್ರಿಕಾ: ಜೂನ್ 5ಕ್ಕೆ ಒಗ್ಗೂಡಲಿದೆ ಟೀಮ್ ಇಂಡಿಯಾ, ಹರಿಣಗಳ ಪಡೆ ಆಗಮನಕ್ಕೆ ಕ್ಷಣಗಣನೆ

Ind vs SA t20I: Team India swuad Set To Assemble In Delhi For 1st match of t20 series On June 5

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಐದು ಪಂದ್ಯಗಳ ಟಿ20 ಸರಣಿಗೆ ದಿನಗಣನೆ ಆರಂಭವಾಗಿದೆ. ಕೆಎಲ್ ರಾಹುಲ್ ನೇತೃತ್ವದಲ್ಲಿ ಭಾರತೀಯ ತಂಡ ದಕ್ಷಿಣ ಆಫ್ರಿಕಾ ಪಡೆಯನ್ನು ಈ ಚುಟುಕು ಮಾದರಿಯ ಸರಣಿಯಲ್ಲಿ ಎದುರಿಸಲಿದೆ. ಈ ಸರಣಿಯಲ್ಲಿ ಭಾಗಿಯಾಗಲಿರುವ ಹರಿಣಗಳ ಪಡೆ ಜೂನ್ 2ರಂದು ಭಾರತಕ್ಕೆ ಆಗಮಿಸಲಿದೆ.

ಐದು ಪಂದ್ಯಗಳ ಟಿ20 ಸರಣಿಯಲ್ಲಿ ದಕ್ಷಿಣ ಆಫ್ರಿಕಾ ದಂಡವನ್ನು ಟೆಂಬಾ ಬವುಮಾ ಮುನ್ನಡೆಸಲಿದ್ದಾರೆ. ಮೊದಲ ಪಂದ್ಯ ದೆಹಲಿಯಲ್ಲಿ ನಡೆಯಲಿರುವ ಕಾರಣ ಜೂನ್ 2ರಂದು ದಕ್ಷಿಣ ಆಫ್ರಿಕಾ ತಂಡ ದೆಹಲಿಗೆ ಆಗಮಿಸಿ ಬಳಿಕ ಅಭ್ಯಾಸವನ್ನು ಆರಂಭಿಸಲಿದೆ. ದಕ್ಷಿಣ ಆಫ್ರಿಕಾದ ಕೆಲ ಆಟಗಾರರು ಐಪಿಎಲ್‌ನಲ್ಲಿ ಭಾಗವಹಿಸಿರುವ ಕಾರಣ ಈಗಾಗಲೇ ಭಾರತದಲ್ಲೇ ಇದ್ದು ತಂಡವನ್ನು ಸೇರಿಕೊಳ್ಳಲಿದ್ದಾರೆ. ದೆಹಲಿ ಜಿಲ್ಲಾ ಕ್ರಿಕೆಟ್ ಅಸೊಸೊಯೇಶನ್(ಡಿಡಿಸಿಎ) ಈ ಬಗ್ಗೆ ಅಧಿಕೃತ ಮಾಹಿತಿಯನ್ನು ನೀಡಿದೆ ಜೂನ್ 5ರಂದು ಭಾರತೀಯ ತಂಡ ದೆಹಲಿಗೆ ಆಗಮಿಸಲಿದೆ ಎಂದು ಬಿಸಿಸಿಐ ಮಾಹಿತಿ ನೀಡಿದೆ ಎಂದಿದೆ.

5 ಐಪಿಎಲ್ ಟ್ರೋಫಿ ಗೆದ್ದ ನಂತರ ತನ್ನ ಮುಂದಿನ ಗುರಿ ಏನೆಂದು ರಿವೀಲ್ ಮಾಡಿದ ಹಾರ್ದಿಕ್ ಪಾಂಡ್ಯ
ಇನ್ನು ಕೆಎಲ್ ರಾಹುಲ್ ನೇತೃತ್ವದ ಟೀಮ್ ಇಂಡಿಯಾ ಜೂನ್ 5ರಂದು ದೆಹಲಿಯಲ್ಲಿ ಒಟ್ಟಾಗಲಿದೆ. ಭಾರತೀಯ ಕ್ರಿಕೆಟ್‌ನ ಆಟಗಾರರೆಲ್ಲರೂ ಐಪಿಎಲ್‌ನ್ಲಲಿ ಭಾಗಿಯಾಗಿರುವ ಕಾರಣದಿಂದಾಗಿ ಪ್ರಸ್ತುತ ಕುಟುಂಬದೊಂದಿಗೆ ಕಾಲ ಕಳೆಯಲು ಬಿಡುವು ದೊರೆತಿದ್ದು ಜೂನ್ ನಾಲ್ಕರವರೆಗೆ ಈ ವಿರಾಮ ದೊರೆಯಲಿದೆ. ನಂತರ ರಾಷ್ಟ್ರೀಯ ಜವಾಬ್ಧಾರಿಯನ್ನು ವಹಿಸಿಕೊಳ್ಳಲಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಭಾರತಕ್ಕೆ ಅತ್ಯಂತ ಪ್ರಮುಖವಾಗಿದೆ. ಯಾಕೆಂದರೆ ಈ ಸರಣಿಯಲ್ಲಿ ಭಾರತ ಟಿ20 ವಿಶ್ವದಾಖಲೆಯೊಂದನ್ನು ಬರೆಯುವ ಅವಕಾಶವಿದೆ. ಭಾರತ ಈಗ ಸತತ 12 ಟಿ20 ಪಂದ್ಯಗಳನ್ನು ಗೆದ್ದುಕೊಂಡಿದ್ದು ಸತತ ಪಂದ್ಯಗಳಲ್ಲಿ ಗೆಲುವು ಸಾಧಿಸಿದ ಪಟ್ಟಿಯಲ್ಲಿ ಅಫ್ಘಾನಿಸ್ತಾನದ ಸಾಧನೆಯನ್ನು ಸರಿಗಟ್ಟಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದರೆ ಈ ದಾಖಲೆಯನ್ನು ಭಾರತ ಮುರಿಯಲಿದೆ.

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಈ ಟಿ20 ಸರಣಿ ಜೂನ್ 9ರಿಂದ ಆರಂಭವಾಗಲಿದೆ. ಭಾರತ ಈ ಸರಣಿಯ ಆತಿಥ್ಯವಹಿಸಿಕೊಳ್ಳುತ್ತಿದ್ದು ಐದು ತಾಣಗಳಲ್ಲಿ ಈ ಸರಣಿ ಆಯೋಜನೆಯಾಗಲಿದೆ. ಸಂಜೆ 7 ಗಂಟೆಗೆ ಈ ಪಂದ್ಯಗಳು ಆರಂಭವಾಗಲಿದೆ. ದೆಹಲಿ, ಕಟಕ್, ವೈಜಾಗ್, ರಾಜ್‌ಕೋಟ್ ಹಾಘೂ ಬೆಂಗಳುರಿನಲ್ಲಿ ಪಂದ್ಯಗಳು ನಡೆಯಲಿದೆ.

ಭಾರತ: ಕೆಎಲ್ ರಾಹುಲ್ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಉಪ ನಾಯಕ/ ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ವೆಂಕಟೇಶ್ ಅಯ್ಯರ್, ಯುಜುವೇಂದ್ರ ಚಾಹಲ್, ಕುಲ್‌ದೀಪ್ ಯಾದವ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಭುವನೇಶ್ವರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್‌ಗಿಡಿ, ಅನ್ರಿಚ್ ನಾರ್ಟ್ಜೆ, ವೇಯ್ನ್ ಪಾರ್ನೆಲ್, ಡ್ವೈನ್ ಪ್ರಿಟೋರಿಯಸ್, ಕಗಿಸೊ ರಬಾಡ, ಟಬ್ರೈಜ್ ಶಂಸಿ, ಟ್ರಿಸ್ಟನ್ ಸ್ಟಬ್ಸ್, ವ್ಯಾನ್ ಡೆರ್ ಡಸ್ಸೆನ್, ಮಾರ್ಕೊ ಜಾನ್ಸೆನ್

Story first published: Tuesday, May 31, 2022, 14:34 [IST]
Other articles published on May 31, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+