ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಪಂತ್‌ ಬಗ್ಗೆ ಭರವಸೆಯ ಮಾತುಗಳನ್ನಾಡಿದ ಕೋಚ್ ದ್ರಾವಿಡ್ ದಿನೇಶ್ ಕಾರ್ತಿಕ್ ಬಗ್ಗೆ ಏನಂದ್ರು?

Ind vs SA: Team India coach Rahul Dravid praises Dinesh Kathik said He is banging the door

ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟಿ-20 ಸರಣಿ ಅಂತ್ಯವಾಗಿದೆ ಈ ಸರಣಿಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು 2-2 ಅಂತರದಿಂದ ಸಮಬಲ ವನ್ನು ಸಾಧಿಸಿದೆ. ಬೆಂಗಳೂರಿನಲ್ಲಿ ನಡೆದ ಸರಣಿಯ ಅಂತಿಮ ಪಂದ್ಯ ಮಳೆಯಿಂದಾಗಿ ರದ್ದಾದ ಕಾರಣ ಎರಡು ತಂಡಗಳು ಕೂಡ ಟ್ರೋಫಿಯನ್ನು ಹಂಚಿಕೊಂಡಿದೆ.

ಈ ಸರಣಿಯ ಮುಕ್ತಾಯದ ಬಳಿಕ ಮಾತನಾಡಿದ ಭಾರತ ತಂಡದ ಕೋಚ್ ರಾಹುಲ್ ದ್ರಾವಿಡ್ ಟೂರ್ನಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ ರಿಷಭ್ ಪಂತ್ ಅವರ ಪ್ರದರ್ಶನ ಕಳಪೆಯಾಗಿದ್ದರೂ ಅವರನ್ನು ಬೆಂಬಲಿಸಿ ಮಾತನಾಡಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್ ದ್ರಾವಿಡ್ ಹಿರಿಯ ಆಟಗಾರ ದಿನೇಶ್ ಕಾರ್ತಿಕ್ ಬಗ್ಗೆ ಕೂಡ ಮಾತನಾಡಿದ್ದಾರೆ. ಕೋಚ್ ದ್ರಾವಿಡ್ ದಿನೇಶ್ ಕಾರ್ತಿಕ್ ಬಗ್ಗೆ ಹೇಳಿದ್ದೇನು? ಮುಂದೆ ಓದಿ..

ಮುಂಬರುವ ಟಿ20 ವಿಶ್ವಕಪ್‌ನಲ್ಲಿ ರಿಷಭ್ ಪಂತ್‌ಗೆ ಅವಕಾಶ ಸಿಗುತ್ತಾ? ರಾಹುಲ್ ದ್ರಾವಿಡ್ ಉತ್ತರಮುಂಬರುವ ಟಿ20 ವಿಶ್ವಕಪ್‌ನಲ್ಲಿ ರಿಷಭ್ ಪಂತ್‌ಗೆ ಅವಕಾಶ ಸಿಗುತ್ತಾ? ರಾಹುಲ್ ದ್ರಾವಿಡ್ ಉತ್ತರ

ಮೂರು ವರ್ಷಗಳ ಬಳಿಕ ಭಾರತ ತಂಡದಲ್ಲಿ ಸ್ಥಾನ

ಮೂರು ವರ್ಷಗಳ ಬಳಿಕ ಭಾರತ ತಂಡದಲ್ಲಿ ಸ್ಥಾನ

ಮೂರು ವರ್ಷಗಳ ಬಳಿಕ ಭಾರತ ಕ್ರಿಕೆಟ್ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುವ ದಿನೇಶ್ ಕಾರ್ತಿಕ್ ಈ ಬಾರಿಯ ಐಪಿಎಲ್ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅದ್ಭುತವಾದ ಪ್ರದರ್ಶನವನ್ನು ನೀಡಿದ್ದಾರೆ. ಹೀಗಾಗಿ ಈ ಬಾರಿಯ ವರ್ಷಾಂತ್ಯದಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ-ಟ್ವೆಂಟಿ ವಿಶ್ವಕಪ್ ಗೆ ದಿನೇಶ್ ಕಾರ್ತಿಕ್ ಅವರನ್ನು ಆಯ್ಕೆ ಮಾಡಬೇಕು ಅನ್ನುವ ಅಭಿಪ್ರಾಯಗಳು ಜೋರಾಗಿ ವ್ಯಕ್ತವಾಗುತ್ತಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಬಳಿಕ ಭಾರತದ ರಾಹುಲ್ ದ್ರಾವಿಡ್ ಕೂಡ ದಿನೇಶ್ ಕಾರ್ತಿಕ್ ಬಗ್ಗೆ ವಿಶೇಷ ಪ್ರಶಂಸೆ ಮಾತುಗಳನ್ನಾಡಿದ್ದಾರೆ. ರಾಜಕೋಟ್ ನಲ್ಲಿ ನಡೆದಿದ್ದ ಸರಣಿಯ ನಾಲ್ಕನೇ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ 27 ಎಸೆತಗಳಲ್ಲಿ 50 ರನ್ ಬಾರಿಸಿ ತಮ್ಮ ಸಾಮರ್ಥ್ಯವನ್ನು ಪ್ರದರ್ಶಿಸಿದರು.

ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ

ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡಿದ್ದಾರೆ

ಅದರಲ್ಲೂ ಫಿನಿಶರ್ ಆಗಿ ದಿನೇಶ್ ಕಾರ್ತಿಕ್ ತಮ್ಮ ಜವಾಬ್ದಾರಿಯನ್ನು ಅದ್ಭುತವಾಗಿ ನಿರ್ವಹಿಸಿದ್ದರು. ಈ ಜವಾಬ್ದಾರಿಯುತ ಪ್ರದರ್ಶನಕ್ಕೆ ಕೋಚ್ ರಾಹುಲ್ ದ್ರಾವಿಡ್ ತಲೆದೂಗಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ರಾಹುಲ್ ದ್ರಾವಿಡ್ ದಿನೇಶ್ ಕಾರ್ತಿಕ್ ಅವರನ್ನು ಅವರಲ್ಲಿರುವ ವಿಶೇಷ ಕೌಶಲ್ಯದ ಕಾರಣದಿಂದಾಗಿ ಟೀಮ್ ಇಂಡಿಯಾಕ್ಕೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ." ಅವರಲ್ಲಿರುವ ವಿಶೇಷ ಕೌಶಲ್ಯದ ಕಾರಣದಿಂದಾಗಿಯೇ ಅವರನ್ನು ತಂಡಕ್ಕೆ ಸೇರಿಕೊಳ್ಳಲಾಗಿದೆ. ಕಳೆದ ಎರಡ್ಮೂರು ವರ್ಷಗಳಿಂದ ಅವರು ಅದನ್ನು ಅದ್ಭುತವಾಗಿ ನಿರ್ವಹಿಸುತ್ತಿದ್ದಾರೆ. ಅವರ ಆಯ್ಕೆಯನ್ನು ಸಮರ್ಥಿಸಿಕೊಂಡಿರುವುದು ಸಂತಸ ಮೂಡಿಸಿದೆ" ಎಂದಿದ್ದಾರೆ ಕೋಚ್ ರಾಹುಲ್ ದ್ರಾವಿಡ್.

ಡೆತ್ ಓವರ್‌ನಲ್ಲಿ ಅದ್ಭುತ ಪ್ರದರ್ಶನ

ಡೆತ್ ಓವರ್‌ನಲ್ಲಿ ಅದ್ಭುತ ಪ್ರದರ್ಶನ

"ರಾಜ್‌ಕೋಟ್‌ನಲ್ಲಿ ಇದು ಅದ್ಭುತ ರೀತಿಯಲ್ಲಿ ತಂಡಕ್ಕೆ ಉಪಯೋಗಕ್ಕೆ ಬಂದಿದೆ. ಅಲ್ಲಿ ನಮಗೆ ಗೌರವಯುತ ರನ್ ಗಳಿಸಲು ಕೊನೆಯ 5 ಓವರ್‌ಗಳಲ್ಲಿ ದೊಡ್ಡ ಪ್ರದರ್ಶನದ ಅಗತ್ಯವಿತ್ತು. ಕಾರ್ತಿಕ್ ಮತ್ತು ಹಾರ್ದಿಕ್ ಪಾಂಡ್ಯ ನೀಡಿದ ಜವಾಬ್ಧಾರಿಯುತ ಪ್ರದರ್ಶನ ತಂಡ ಉತ್ತಮ ಮೊತ್ತ ಗಳಿಸಲು ಸಾಧ್ಯವಾಯಿತು. ಕಾರ್ತಿಕ್ ಮತ್ತು ಪಾಂಡ್ಯ ಇಬ್ಬರೂ ಡೆತ್ ಓವರ್‌ಗಳಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಬಲ್ಲರು. ಕೊನೆಯ 5-6 ಓವರ್‌ಗಳಲ್ಲಿ ಅವರು ಯಾವುದೇ ತಂಡದ ವಿರುದ್ಧವೂ ಅದ್ಭುತವಾದ ಪ್ರದರ್ಶನ ನೀಡಬಲ್ಲರು" ಎಂದಿದ್ದಾರೆ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್.

ಅವಕಾಶಗಳನ್ನ ಕಳೆದುಕೊಂಡ ರಿಷಬ್ ಪಂತ್ !! | *Cricket | OneIndia Kannada
ಬಲವಾಗಿ ಬಾಗಿಲು ಬಡಿಯುತ್ತಿದ್ದಾರೆ ಡಿಕೆ

ಬಲವಾಗಿ ಬಾಗಿಲು ಬಡಿಯುತ್ತಿದ್ದಾರೆ ಡಿಕೆ

"ದಿನೇಶ್ ಕಾರ್ತಿಕ್ ಈ ರೀತಿ ಅದ್ಭುತವಾಗಿ ಪ್ರದರ್ಶನ ನೀಡುವುದನ್ನು ನೋಡಲು ಹರ್ಷವಾಗುತ್ತಿದೆ. ಈ ಮೂಲಕ ಅವರು ಮತ್ತೊಂದು ಆಯ್ಕೆಯನ್ನು ಮುಂದಿಡುತ್ತಿದ್ದಾರೆ. ನಾನು ಹುಡುಗರಿಗೆ ನಾವು ಬಾಗಿಲನ್ನು ಜೋರಾಗಿ ಬಡಿಯಬೇಕೆಂದು ಹೇಳುತ್ತೇನೆ. ತಟ್ಟಿದರೆ ಸಾಕಾಗುವುದಿಲ್ಲ ಎಂದು. ರಾಜ್ ಕೋಟ್‌ನಲ್ಲಿ ದಿನೇಶ್ ಕಾರ್ತಿಕ್ ಅವರ ಪ್ರದರ್ಶನ ಆ ರೀತಿಯಾಗಿತ್ತು. ದಿನೇಶ್ ಕಾರ್ತಿಕ್ ನಿರಂತರವಾಗಿ ಬಲವಾಗಿ ಬಾಗಿಲು ಬಡಿಯುತ್ತಿದ್ದಾರೆ" ಎಂದು ದಿನೇಶ್ ಕಾರ್ತಿಕ್ ಬಗ್ಗೆ ಕೋಚ್ ರಾಹುಲ್ ಡ್ರಾವಿಡ್ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.

Story first published: Monday, June 20, 2022, 16:06 [IST]
Other articles published on Jun 20, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X