IND vs SA: ಇತಿಹಾಸ ಸೃಷ್ಟಿಸುವ ಹೊಸ್ತಿಲಲ್ಲಿ ಟೀಮ್ ಇಂಡಿಯಾ
ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿ ಆಡುತ್ತಿದೆ. ಈಗಾಗಲೇ ಉಭಯ ತಂಡಗಳ ನಡುವೆ ನಾಲ್ಕು ಪಂದ್ಯಗಳ ಟಿ20 ಸರಣಿ ನಡೆಯುತ್ತಿದೆ. ಭಾರತ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಕೊನೆಯ ಮತ್ತು ನಾಲ್ಕನೇ ಪಂದ್ಯ ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತ ಸೋತರೂ ಸರಣಿ ಸೋಲುವ ಭಯವಿಲ್ಲ. ಏಕೆಂದರೆ ಫಲಿತಾಂಶ ಡ್ರಾದಲ್ಲಿ ಕೊನೆಗೊಳ್ಳಲಿದೆ. ಆದರೆ ಈ ಪಂದ್ಯದಲ್ಲಿ ಭಾರತ ಗೆದ್ದರೆ ಇತಿಹಾಸ ಸೃಷ್ಟಿಸಲಿದೆ.
ದಕ್ಷಿಣ ಆಫ್ರಿಕಾ ವಿರುದ್ಧ ನಾಲ್ಕನೇ ಟಿ20 ಪಂದ್ಯವನ್ನು ಭಾರತ ಗೆದ್ದರೆ ಸರಣಿಯನ್ನು 3-1 ಅಂತರದಿಂದ ವಶಪಡಿಸಿಕೊಳ್ಳಲಿದೆ. ಇದರೊಂದಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಸರಣಿಯಲ್ಲಿ ಭಾರತ ಮೂರು ಪಂದ್ಯಗಳನ್ನು ಗೆದ್ದಿರುವುದು ಇದೇ ಮೊದಲು. ಉಭಯ ತಂಡಗಳು ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಯನ್ನು ಆಡುತ್ತಿರುವುದು ಎರಡನೇ ಬಾರಿಗೆ ಮಾತ್ರ. ಇದಕ್ಕೂ ಮೊದಲು, 2022 ರಲ್ಲಿ ಒಮ್ಮೆ ಐದು ಪಂದ್ಯಗಳ ಟಿ20 ಸರಣಿ ನಡೆದಿತ್ತು. ಈ ಸಂದರ್ಭದಲ್ಲಿ ಸರಣಿ 2-2 ರಲ್ಲಿ ಕೊನೆಗೊಂಡಿತು. ಅದರೆ ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು.

ಭಾರತಕ್ಕೆ ಎರಡು ಜಯ
ದಕ್ಷಿಣ ಆಫ್ರಿಕಾ ವಿರುದ್ಧ ಮೊದಲ ಮತ್ತು ಮೂರನೇ ಟಿ20 ಪಂದ್ಯಗಳಲ್ಲಿ ಟೀಮ್ ಇಂಡಿಯಾದ ಸ್ಟಾರ್ ವಿಕೆಟ್‌ಕೀಪರ್ ಸಂಜು ಸ್ಯಾಮ್ಸನ್ (107 ರನ್) ಮತ್ತು ಯುವ ಬ್ಯಾಟರ್ ತಿಲಕ್ ವರ್ಮಾ (107 ರನ್) ಭರ್ಜರಿ ಶತಕಗಳನ್ನು ಬಾರಿಸಿ ಮಿಂಚಿದ್ದಾರೆ. ಈ ಇಬ್ಬರ ಶತಕದ ನೆರವಿನಿಂದ ನೆರವಿನಿಂದ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಮೊದಲ ಮತ್ತು ಮೂರನೇ ಟಿ20 ಪಂದ್ಯಗಳನ್ನು ಗೆದ್ದಿದೆ. ಎರಡನೇ ಪಂದ್ಯದಲ್ಲಿ ಟ್ರಿಸ್ಟಾನ್ ಸ್ಟಬ್ಸ್ ಅವರ ಅದ್ಭುತ ಇನ್ನಿಂಗ್ಸ್‌ನಿಂದ ದಕ್ಷಿಣ ಆಫ್ರಿಕಾ ತಂಡ ಭಾರತವನ್ನು 3 ವಿಕೆಟ್‌ಗಳಿಂದ ಸೋಲಿಸಿತು. ಆದರೆ, ಈ ಪಂದ್ಯದಲ್ಲಿ ವರುಣ್ ಚಕ್ರವರ್ತಿ ತಮ್ಮ ಸ್ಪಿನ್ ಮ್ಯಾಜಿಕ್ ತೋರಿಸಿ 5 ವಿಕೆಟ್ ಪಡೆದು ದಾಖಲೆ ಸೃಷ್ಟಿಸಿದ್ದರು.
ಹೆಡ್ ಟು ಹೆಡ್ ರೆಕಾರ್ಡ್
ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಉಭಯ ತಂಡಗಳ ಹೆಡ್ ಟು ಹೆಡ್ ರೆಕಾರ್ಡ್ ನೋಡಿದರೆ ಭಾರತವೇ ಮೇಲುಗೈ ಸಾಧಿಸಿದೆ. ಇಲ್ಲಿಯವರೆಗೆ ನಡೆದಿರುವ 30 ಪಂದ್ಯಗಳಲ್ಲಿ ಟೀಮ್ ಇಂಡಿಯಾ 17 ಬಾರಿ ಗೆದ್ದಿದ್ದರೆ, ದಕ್ಷಿಣ ಆಫ್ರಿಕಾ 12 ಬಾರಿ ಮಾತ್ರ ಗೆದ್ದಿದೆ. ಒಂದು ಪಂದ್ಯದಲ್ಲಿ ಫಲಿತಾಂಶ ಬಂದಿಲ್ಲ.
ಭಾರತ ಸಂಭಾವ್ಯ ಪ್ಲೇಯಿಂಗ್-11
ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಅಕ್ಸರ್ ಪಟೇಲ್, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್, ವಿಜಯ್ ಕುಮಾರ್ ವೈಶಾಕ್, ರವಿ ಬಿಷ್ಣೋಯ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications