IND vs SA: 5ನೇ ಟಿ20ಯಲ್ಲಿ ಕಣಕ್ಕಿಳಿಯಲಿರುವ ಭಾರತ ತಂಡ; ಈ ಆಟಗಾರರು ಬೆಂಚ್ ಕಾಯುವುದು ಖಚಿತ!

ಭಾರತ ಪ್ರವಾಸವನ್ನು ಕೈಗೊಂಡಿದ್ದ ದಕ್ಷಿಣ ಆಫ್ರಿಕಾ 5 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ ಟೀಮ್ ಇಂಡಿಯಾ ವಿರುದ್ಧ ಸೆಣಸಾಟ ನಡೆಸಿದ್ದು, ಇಂದು ( ಜೂನ್ 19 ) ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಅಂತಿಮ ಟಿ ಟ್ವೆಂಟಿ ಪಂದ್ಯದ ಮೂಲಕ ತನ್ನ ಪಯಣವನ್ನು ಅಂತ್ಯಗೊಳಿಸಲಿದೆ.
BAN vs WI: ನಾಲ್ಕನೇ ದಿನಕ್ಕೆ ಮುಗಿಯಲಿದೆ ಮೊದಲ ಟೆಸ್ಟ್; ಗೆಲುವಿನ ಸನಿಹದಲ್ಲಿ ವಿಂಡೀಸ್
ಜೂನ್ 9ರಂದು ಡೆಲ್ಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಆರಂಭವಾಗಿದ್ದ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ಜಯ ಸಾಧಿಸಿ ಸರಣಿಯಲ್ಲಿ 2-0 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿತ್ತು. ಆದರೆ ನಂತರ ನಡೆದ 3 ಮತ್ತು 4ನೇ ಪಂದ್ಯಗಳಲ್ಲಿ ಗೆದ್ದ ಟೀಮ್ ಇಂಡಿಯಾ ಸರಣಿಯಲ್ಲಿ ಸಮಬಲವನ್ನು ಸಾಧಿಸಿದೆ. ಹೀಗಾಗಿ ಇಂದು ನಡೆಯಲಿರುವ ಅಂತಿಮ ಟಿ ಟ್ವೆಂಟಿ ಪಂದ್ಯ ನಿರ್ಣಾಯಕ ಪಂದ್ಯವಾಗಿ ಪರಿಣಮಿಸಿದ್ದು, ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿಯಲ್ಲಿ ವಿಜೇತ ತಂಡವಾಗಿ ಹೊರಹೊಮ್ಮಲಿದೆ.
ಹೀಗಾಗಿ ಎರಡೂ ತಂಡಗಳಿಗೂ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಗೆದ್ದರೆ ತವರು ನೆಲದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಟಿ ಟ್ವೆಂಟಿ ಸರಣಿಯಲ್ಲಿ ಮೊದಲ ಬಾರಿಗೆ ಸೋಲಿಸಿದ ನೂತನ ದಾಖಲೆ ಬರೆಯಲಿದೆ ಹಾಗೂ ದಕ್ಷಿಣ ಆಫ್ರಿಕಾ ಗೆದ್ದರೆ ತನ್ನ ಈ ವಿಶಿಷ್ಟ ದಾಖಲೆಯನ್ನು ಮುಂದುವರಿಸಲಿದೆ. ಹೀಗೆ ಇಂದಿನ ಪಂದ್ಯ ಸಾಕಷ್ಟು ಕುತೂಹಲವನ್ನು ಕೆರಳಿಸಿದ್ದು, ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆಡುವ ಬಳಗ ಯಾವ ರೀತಿ ಇರಲಿದೆ ಎಂಬ ಪ್ರಶ್ನೆ ಎದ್ದಿದ್ದು, ತಂಡದ ಸಂಭಾವ್ಯ ಆಡುವ ಬಳಗ ಈ ಕೆಳಕಂಡಂತೆ ಇರಲಿದೆ ಎನ್ನಬಹುದು.

ಕಣಕ್ಕಿಳಿಯಲಿರುವ ಭಾರತದ ಸಂಭಾವ್ಯ ಆಡುವ ಬಳಗ
ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ ( ವಿಕೆಟ್ ಕೀಪರ್, ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಯುಜ್ವೇಂದ್ರ ಚಾಹಲ್

ಇಲ್ಲ ಯಾವುದೇ ಬದಲಾವಣೆ
ಆಟಗಾರರು ಕಳಪೆ ಪ್ರದರ್ಶನ ನೀಡಿದರೂ ಸಹ ತಂಡದ ಕೋಚ್ ರಾಹುಲ್ ದ್ರಾವಿಡ್ ಅದೇ ಆಟಗಾರರಿಗೆ ಪದೇಪದೇ ಅವಕಾಶವನ್ನು ನೀಡಿ ಕಳಪೆ ಪ್ರದರ್ಶನ ನೀಡಿದ್ದ ಆಟಗಾರರು ನಂತರದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿ ಕಮ್ ಬ್ಯಾಕ್ ಮಾಡಿದ್ದಾರೆ. ಹೀಗಾಗಿ ರಾಹುಲ್ ದ್ರಾವಿಡ್ ಅಂತಿಮ ಟಿ ಟ್ವೆಂಟಿ ಪಂದ್ಯಕ್ಕಾಗಿ ತಂಡದಲ್ಲಿ ಬದಲಾವಣೆ ತರುವ ಕೆಲಸಕ್ಕೆ ಕೈಹಾಕುವುದಿಲ್ಲ ಎನ್ನಬಹುದು. ಅದರಲ್ಲಿಯೂ ನಾಲ್ಕನೇ ಪಂದ್ಯ ಮುಕ್ತಾಯದ ನಂತರ ತಂಡದ ಆಟಗಾರ ಅವೇಶ್ ಖಾನ್ ಮಾತನಾಡಿ ತಂಡದ ಆಡುವ ಬಳಗದಲ್ಲಿ ಯಾವುದೇ ಪಂದ್ಯದಲ್ಲಿಯೂ ಬದಲಾವಣೆಗಳಾಗಿಲ್ಲ, ಹೀಗಾಗಿಯೇ ಆಟಗಾರರಿಗೆ ಹೆಚ್ಚು ಅವಕಾಶ ಲಭಿಸಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಯಿತು, ಈ ಅವಕಾಶ ನೀಡಿದ ರಾಹುಲ್ ದ್ರಾವಿಡ್ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದರು. ಹೀಗಾಗಿ ಮಹತ್ವದ ಪಂದ್ಯವಾಗಿರುವ ಇಂದು ಆಡುವ ಬಳಗದಲ್ಲಿ ಬದಲಾವಣೆ ಖಂಡಿತ ಇರುವುದಿಲ್ಲ ಎನ್ನಬಹುದು.

ಈ ಆಟಗಾರರು ಬೆಂಚ್ ಕಾಯುವುದು ಖಚಿತ
ಇನ್ನು ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಆಡುವ ಬಳಗದಲ್ಲಿ ಯಾವುದೇ ಬದಲಾವಣೆಗಳು ಆಗದೇ ಇರಲಿದ್ದು, ಇದೇ ಮೊದಲ ಬಾರಿಗೆ ಅಂತರರಾಷ್ಟ್ರೀಯ ಕ್ರಿಕೆಟ್ ಆಡಲು ಆಯ್ಕೆಯಾಗಿದ್ದ ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಈ ಪಂದ್ಯದಲ್ಲಿಯೂ ಅವಕಾಶ ಸಿಗದೇ ಬೆಂಚ್ ಕಾಯಬೇಕಾದ ಪರಿಸ್ಥಿತಿ ಎದುರಾಗುವುದು ಖಚಿತ ಎನ್ನಲಾಗುತ್ತಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications