ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ದ. ಆಫ್ರಿಕಾ: ಮೂರನೇ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಶುಭ ಸುದ್ದಿ!

Ind vs SA: Team India skipper Virat Kohli back to nets as India begin preparation for Cape Town Test
South Africa ಹಾಗು India ನಡುವಿನ ಮೂರನೇ ಪಂದ್ಯಕ್ಕೆ Kohli ಸಿದ್ಧ! | Oneindia Kannada

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಪಂದ್ಯದ ಮೊದಲ ಎರಡು ಟೆಸ್ಟ್ ಪಂದ್ಯಗಳು ಮುಕ್ತಾಯವಾಗಿದ್ದು ಸರಣಿಯ ನಿರ್ಣಾಯಕ ಪಂದ್ಯ ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್ ಕ್ರೀಡಾಂಗಣದಲ್ಲಿ ಮಂಗಳವಾರದಿಂದ ಆರಂಭವಾಗಲಿದೆ. ಈ ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ಎರಡು ತಂಡಗಳು ಕೂಡ ತಲಾ ಒಂದೊಂದು ಗೆಲುವು ಸಾಧಿಸಿದ್ದು ಅಂತಿಮ ಸರಣಿಯಲ್ಲಿ ಗೆದ್ದ ತಂಡ ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ. ಹೀಗಾಗಿ ಇದು ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.

ಸೆಂಚುರಿಯನ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ 113 ರನ್‌ಗಳ ಅಂತರದಿಂದ ಗೆಲುವು ಸಾಧಿಸಿದ್ದರೆ ಎರಡನೇ ಪಂದ್ಯದಲ್ಲಿ ದಕ್ಷಿಣ ಆಪ್ರಿಕಾ ಭಾರತ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿತ್ತು. ಈ ಮೂಲಕ ಆತಿಥೇಯ ತಂಡ ಸರಣಿಯನ್ನು ಸಮಬಲಗೊಳಿಸುವಲ್ಲಿ ಯಶಸ್ವಿಯಾಗಿದೆ. ಇನ್ನು ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ನೆಲದಲ್ಲಿ ಈವರೆಗೆ ಸರಣಿ ಗೆಲ್ಲಲು ವಿಫಲವಾಗಿದ್ದು ಈ ಬಾರಿ ಈ ದಾಖಲೆ ಮುರಿಯುವ ಅತ್ಯುತ್ತಮ ಅವಕಾಶವಿದೆ. ಹೀಗಾಗಿ ಅಂತಿಮ ಪಂದ್ಯದಲ್ಲಿ ಈ ಅವಕಾಶವನ್ನು ಭಾರತೀಯ ತಮಡ ಹೇಗೆ ಸದುಪಯೋಗಪಡಿಸಿಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.

ಟೀಮ್ ಇಂಡಿಯಾಗೆ ಶುಭ ಸುದ್ದಿ: ಇನ್ನು ನಿರ್ಣಾಯಕ ಪಂದ್ಯಕ್ಕೆ ಮುನ್ನ ಟೀಮ್ ಇಂಡಿಯಾ ಪಾಲಿಗೆ ಶುಭಸುದ್ದಿಯೊಂದಿ ಬಂದಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಬೆನ್ನು ನೋವಿನ ಕಾರಣದಿಂದಾಗಿ ಕೊನೇಯ ಕ್ಷಣದಲ್ಲಿ ವಿರಾಟ್ ಕೊಹ್ಲಿ ಆಡುವ ಬಳಗದಿಂದ ಹಿಂದುಳಿದಿದ್ದರು. ಹೀಗಾಗಿ ಕೆಎಲ್ ರಾಹುಲ್ ತಂಡವನ್ನು ಮುನ್ನಡೆಸಿದ್ದರು. ಆದರೆ ಇದೀಗ ಮೂರನೇ ತಂಡದಲ್ಲಿ ಆಡಲು ವಿರಾಟ್ ಕೊಹ್ಲಿ ಸಜ್ಜಾಗಿದ್ದಾರೆ. ಕೊಹ್ಲಿ ಮೂರನೇ ಪಂದ್ಯದಲ್ಲಿ ಕಣಕ್ಕಿಳಿಯಲು ಅಭ್ಯಾಸವನ್ನು ಕೂಡ ನಡೆಸಿದ್ದಾರೆ. ಇದು ತಂಡದ ಆತ್ಮ ವಿಶ್ವಾಸವನ್ನು ಸಹಜವಾಗಿಯೇ ಹೆಚ್ಚಿಸಲಿದೆ.

ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾನುವಾರ ನೆಟ್ಸ್‌ನಲ್ಲಿ ಅಭ್ಯಾಸವನ್ನು ನಡೆಸಿದ್ದಾರೆ. ಅಭ್ಯಾಸದ ಸಂದರ್ಭದಲ್ಲಿ ಕೊಹ್ಲಿ ತಮ್ಮ ನೆಚ್ಚಿನ ಕವರ್‌ಡ್ರೈವ್‌ಗಳನ್ನು ಬಾರಿಸಿ ಮಿಂಚಿದರು. ಬಿಸಿಸಿಐ ತನ್ನ ಅಧಿಕೃತ ಟ್ವಿಟ್ಟರ್‌ಖಾತೆಯಲ್ಲಿ ಇದರ ಕೆಲ ಫೋಟೋಗಳನ್ನು ಹಂಚಿಕೊಂಡಿದೆ.

ಇನ್ನು ಎರಡನೇ ಪಂದ್ಯದ ಅಂತ್ಯದ ಬಳಿಕ ತಂಡದ ಕೋಚ್ ರಾಹುಲ್ ದ್ರಾವಿಡ್ ಪ್ರತಿಕ್ರಿಯೆ ನೀಡಿದ್ದು ಮೂರನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಭಾಗಿಯಾಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ್ದರು. "ವಿರಾಟ್ ಕೊಹಲಿ ಮೂರನೇ ಪಂದ್ಯಕ್ಕೆ ಮುನ್ನ ಎಲ್ಲಾ ರೀತಿಯಿಂದಲೂ ಸಿದ್ಧವಾಗಲಿದ್ದಾರೆ. ಅವರು ಮುಂದಿನ ಪಂದ್ಯದಲ್ಲಿ ಖಂಡಿತವಾಗಿಯೂ ಅವರು ಆಡಲಿದ್ದು ಉತ್ತಮ ಪ್ರದರ್ಶನ ನೀಡಲಿದ್ದಾರೆ. ಅವರಿಗೆ ಸಿದ್ಧರಾಗಲು ಕೆಲ ಸಮಯಗಳು ಕೂಡ ದೊರೆಯಲಿದೆ ಎಂದು ರಾಹುಲ್ ದ್ರಾವಿಡ್ ಹೇಳಿದ್ದಾರೆ

Story first published: Monday, January 10, 2022, 15:30 [IST]
Other articles published on Jan 10, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X