IND vs SA TEST: ಇಶಾಂತ್ ದಾಖಲೆಯ ಮೇಲೆ ಜಸ್ಪ್ರಿತ್ ಬುಮ್ರಾ ಕಣ್ಣು
ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26ರಿಂದ ಆರಂಭವಾಗಲಿದೆ. ಈ ಪಂದ್ಯದಲ್ಲಿ ವೇಗಿ ಜಸ್ಪ್ರಿತ್ ಬುಮ್ರಾ ಟೀಮ್ ಇಂಡಿಯಾ ಪರ ಕಣಕ್ಕೆ ಇಳಿಯಲಿದ್ದಾರೆ. ಈ ಮೂಲಕ ಬುಮ್ರಾ ವಿಶೇಷ ದಾಖಲೆಯನ್ನು ಬರೆಯುವ ಹೊಸ್ತಿಲಿನಲ್ಲಿ ನಿಂತಿದ್ದಾರೆ.
ದಕ್ಷಿಣ ಆಫ್ರಿಕಾದ ಪಿಚ್‌ಗಳು ಬುಮ್ರಾ ಅವರ ಬೌಲಿಂಗ್ ಶೈಲಿಗೆ ಹೇಳಿದ ಮಾಡಿಸಿದಂತೆ ಇರುತ್ತವೆ. ಇವರ ಮಾರಕ ದಾಳಿಯ ನೆರವಿನಿಂದ ಟೀಮ್ ಇಂಡಿಯಾ ಸಾಕಷ್ಟು ಪಂದ್ಯಗಳಲ್ಲಿ ಜಯ ಸಾಧಿಸಿದೆ. ಬುಮ್ರಾಗೆ ಮತ್ತೊಮ್ಮೆ ತಮ್ಮ ಮ್ಯಾಜಿಕ್ ತೋರಿಸುವ ಅವಕಾಶವಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದರೆ ಇಶಾಂತ್ ಶರ್ಮಾ ದಾಖಲೆಯನ್ನು ಮುರಿಯಬಹುದು.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ನಲ್ಲಿ ಅನಿಲ್ ಕುಂಬ್ಳೆ ಭಾರತದ ಪರ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಈ ವಿಚಾರದಲ್ಲಿ ಬುಮ್ರಾ ಸದ್ಯ 10ನೇ ಸ್ಥಾನದಲ್ಲಿದ್ದಾರೆ. ಬುಮ್ರಾ 6 ಪಂದ್ಯಗಳಲ್ಲಿ 26 ವಿಕೆಟ್ ಪಡೆದಿದ್ದಾರೆ. ಇಶಾಂತ್ ಶರ್ಮಾ ಮತ್ತು ಎಸ್ ಶ್ರೀಶಾಂತ್ ಅವರನ್ನು ಬುಮ್ರಾ ಹಿಂದಿಕ್ಕಬಹುದು. ಇಶಾಂತ್ 15 ಪಂದ್ಯಗಳಲ್ಲಿ 31 ವಿಕೆಟ್ ಪಡೆದಿದ್ದಾರೆ. ಶ್ರೀಶಾಂತ್ 9 ಪಂದ್ಯಗಳಲ್ಲಿ 31 ವಿಕೆಟ್ ಪಡೆದಿದ್ದಾರೆ.
ಟೀಂ ಇಂಡಿಯಾ ಪರ ಅನಿಲ್ ಕುಂಬ್ಳೆ ದಕ್ಷಿಣ ಆಫ್ರಿಕಾ ವಿರುದ್ಧ ಅತಿ ಹೆಚ್ಚು ವಿಕೆಟ್ ಪಡೆದಿದ್ದಾರೆ. ಅವರು 21 ಪಂದ್ಯಗಳಲ್ಲಿ 84 ವಿಕೆಟ್ ಪಡೆದಿದ್ದಾರೆ. ಜಾವಗಲ್ ಶ್ರೀನಾಥ್ ಎರಡನೇ ಸ್ಥಾನದಲ್ಲಿದ್ದಾರೆ. ಅವರು 13 ಪಂದ್ಯಗಳಲ್ಲಿ 64 ವಿಕೆಟ್ ಪಡೆದಿದ್ದಾರೆ. ಹರ್ಭಜನ್ ಸಿಂಗ್ ಮೂರನೇ ಸ್ಥಾನದಲ್ಲಿದ್ದಾರೆ. ಭಜ್ಜಿ 11 ಪಂದ್ಯಗಳಲ್ಲಿ 60 ವಿಕೆಟ್ ಪಡೆದಿದ್ದಾರೆ. ರವಿಚಂದ್ರನ್ ಅಶ್ವಿನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಅಶ್ವಿನ್ 13 ಪಂದ್ಯಗಳಲ್ಲಿ 56 ವಿಕೆಟ್ ಪಡೆದಿದ್ದಾರೆ.
ಭಾರತ ತಂಡವು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಟೀಮ್ ಇಂಡಿಯಾ ಮೊದಲು ಟಿ20 ಸರಣಿ ಆಡಿತು. ಈ ಸರಣಿಯು 1-1 ಸಮಬಲದಲ್ಲಿ ಕೊನೆಗೊಂಡಿತು. ಇದಾದ ಬಳಿಕ ಟೀಂ ಇಂಡಿಯಾ ಏಕದಿನ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ. ಈಗ ಟೆಸ್ಟ್ ಸರಣಿ ನಡೆಯಲಿದೆ. ಟೆಸ್ಟ್ ಸರಣಿಗೆ ಭಾರತ ಪ್ರಸಿದ್ಧ ಕೃಷ್ಣ, ಮುಖೇಶ್ ಕುಮಾರ್ ಮತ್ತು ಶಾರ್ದೂಲ್ ಠಾಕೂರ್ ಅವರಿಗೆ ಅವಕಾಶ ನೀಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications