For Quick Alerts
ALLOW NOTIFICATIONS  
For Daily Alerts
 

IND vs SA Test: ಎರಡನೇ ಟೆಸ್ಟ್‌ಗೆ ತಂಡ ಸೇರಿಸಿಕೊಳ್ಳಲಿರುವ ರವೀಂದ್ರ ಜಡೇಜಾ

ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲು ಕಂಡಿದೆ. ಈ ಸೋಲಿನ ಹೊರತಾಗಿಯೂ ರೋಹಿತ್‌ ಬಳಗಕ್ಕೆ ಗುಡ್ ನ್ಯೂಸ್‌ ಒಂದು ಸಿಕ್ಕಿದೆ. ಟೀಮ್ ಇಂಡಿಯಾದ ಆಲ್‌ರೌಂಡರ್ ಫಿಟ್ ಆಗಿದ್ದು, ತಂಡಕ್ಕೆ ಆನೆ ಬಲ ತುಂಬಲಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಕೇಪ್ ಟೌನ್‌ನಲ್ಲಿ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಭಾರತಕ್ಕೆ ಶುಭ ಸುದ್ದಿಯೊಂದು ಬಂದಿದೆ. ರವೀಂದ್ರ ಜಡೇಜಾ ಟೀಂ ಇಂಡಿಯಾಗೆ ಮರಳಬಹುದು.

IND vs SA Test: Ravindra Jadeja Will Join the Team for the Second Test

ಬೆನ್ನುನೋವಿನ ಸಮಸ್ಯೆಯಿಂದ ಅವರು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಸೆಂಚುರಿಯನ್‌ನಲ್ಲಿ ನಡೆದ ಪಂದ್ಯದಲ್ಲಿ ಭಾರತ ಹೀನಾಯ ಸೋಲನ್ನು ಎದುರಿಸಬೇಕಾಯಿತು. ಮೊದಲ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಇನಿಂಗ್ಸ್ ಮತ್ತು 32 ರನ್‌ಗಳಿಂದ ಗೆದ್ದಿತ್ತು. ಜಡೇಜಾ ವಾಪಸಾದರೆ ಪ್ಲೇಯಿಂಗ್ ಇಲೆವೆನ್‌ನಲ್ಲಿ ಬದಲಾವಣೆಯಾಗಲಿದೆ.

ಜಡೇಜಾ ಅವರ ಬೆನ್ನಿಗೆ ಗಾಯವಾಗಿತ್ತು. ಹೀಗಾಗಿ ಅವರು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್‌ನಲ್ಲಿ ಆಡಲು ಸಾಧ್ಯವಾಗಲಿಲ್ಲ. ಟೈಮ್ಸ್ ಆಫ್ ಇಂಡಿಯಾದ ಸುದ್ದಿಯ ಪ್ರಕಾರ, ಜಡೇಜಾ ಎರಡನೇ ಟೆಸ್ಟ್‌ಗಾಗಿ ಟೀಮ್ ಇಂಡಿಯಾಕ್ಕೆ ಮರಳಬಹುದು ಎಂದು ತಿಳಿದು ಬಂದಿದೆ. ಜನವರಿ 3ರಿಂದ ಕೇಪ್ ಟೌನ್ ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಅವರು ಪಾಲ್ಗೊಳ್ಳಬಹುದು.

IND vs SA Test: Ravindra Jadeja Will Join the Team for the Second Test

ಜಡೇಜಾ ಇತ್ತೀಚೆಗೆ ಟೀಮ್ ಇಂಡಿಯಾ ಕ್ಯಾಂಪ್‌ನಲ್ಲಿ ಅಭ್ಯಾಸ ಭಾಗವಹಿಸಿದ್ದರು. ಈ ಸಮಯದಲ್ಲಿ ಅವರು ಮೈದಾನದಲ್ಲಿ ಸಾಕಷ್ಟು ಬೆವರು ಹರಿಸಿದ್ದರು. ಜಡೇಜಾ ಫಿಟ್ನೆಸ್‌ಗಾಗಿ ಹಲವು ಕಸರತ್ತುಗಳನ್ನು ಮಾಡುತ್ತಿದ್ದಾರೆ. ಈ ಅವಧಿಯಲ್ಲಿ ಅವರು ಯಾವುದೇ ರೀತಿಯ ಸಮಸ್ಯೆಯನ್ನು ಎದುರಿಸಲಿಲ್ಲ ಎಂಬುದು ಮುಖ್ಯವಾದ ವಿಷಯ. ಟೀಮ್ ಇಂಡಿಯಾದ ಆರೋಗ್ಯ ಮತ್ತು ಕಂಡೀಷನಿಂಗ್ ಕೋಚ್ ಜಡೇಜಾ ಅವರ ಅಭ್ಯಾಸವನ್ನು ಬಹಳ ಹತ್ತಿರದಿಂದ ಗಮನಿಸಿದ್ದಾರೆ.

ಈ ವರ್ಷ ಟೀಮ್ ಇಂಡಿಯಾ ಪರ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಜಡೇಜಾ. ಅವರು ಪ್ರಸಕ್ತ ವರ್ಷ ಭರ್ಜರಿ ಬೌಲಿಂಗ್ ಮಾಡಿದ್ದಾರೆ. ಜಡೇಜಾ 67 ಟೆಸ್ಟ್ ಪಂದ್ಯಗಳಲ್ಲಿ 275 ವಿಕೆಟ್ ಪಡೆದಿದ್ದಾರೆ. ಒಂದು ಇನಿಂಗ್ಸ್‌ನಲ್ಲಿ 42 ರನ್‌ಗಳಿಗೆ 7 ವಿಕೆಟ್‌ಗಳನ್ನು ಕಬಳಿಸಿದ್ದು ಅವರ ಅತ್ಯುತ್ತಮ ಪ್ರದರ್ಶನವಾಗಿದೆ. ಜಡೇಜಾ ಏಕದಿನ ಮಾದರಿಯಲ್ಲೂ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರು 197 ಪಂದ್ಯಗಳಲ್ಲಿ 220 ವಿಕೆಟ್ ಪಡೆದಿದ್ದಾರೆ.

Story first published: Friday, December 29, 2023, 16:13 [IST]
Other articles published on Dec 29, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+