For Quick Alerts
ALLOW NOTIFICATIONS  
For Daily Alerts
 

IND vs SA: ಬಾಕ್ಸಿಂಗ್ ಡೇ ಪಂದ್ಯಕ್ಕಾಗಿ ದಕ್ಷಿಣ ಆಫ್ರಿಕಾ ವಿಮಾನವೇರಿದ ವಿರಾಟ್ ಕೊಹ್ಲಿ

ಮಂಗಳವಾರ, ಡಿಸೆಂಬರ್ 26ರಂದು ಆರಂಭವಾಗಲಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 10 ದಿನಗಳ ಮೊದಲು ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರೇನ್ ಬೋ ನಾಡಿಗೆ ತೆರಳಿದ್ದಾರೆ.

ಭಾರತ ಟೆಸ್ಟ್ ತಂಡವು ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯವನ್ನು ಆಡಲಿದೆ. ನಂತರ ಎರಡನೇ ಟೆಸ್ಟ್ ಪಂದ್ಯವನ್ನು ಜನವರಿ 3ರಂದು ಕೇಪ್‌ಟೌನ್‌ನಲ್ಲಿ ಆಡಲಿದೆ.

IND vs SA Test Series: Virat Kohli Flies to South Africa for Boxing Day Match

ವಿರಾಟ್ ಕೊಹ್ಲಿ ಕಂದು ಬಣ್ಣದ ಜಾಕೆಟ್ ಮತ್ತು ಡಫಲ್ ಬ್ಯಾಗ್‌ನೊಂದಿಗೆ ವಿಮಾನ ನಿಲ್ದಾಣಕ್ಕೆ ಎಂಟ್ರಿ ಕೊಟ್ಟರು ಮತ್ತು ನೋಡುಗರ ಚಿತ್ತವನ್ನು ಕದ್ದರು. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ನಿಲ್ದಾಣದ ಸಿಬ್ಬಂದಿಯೊಂದಿಗೆ ಸೆಲ್ಫಿಗೆ ಪೋಸ್ ನೀಡಿದರು.

35 ವರ್ಷದ ವಿರಾಟ್ ಕೊಹ್ಲಿ ಅವರಿಗೆ ನಾಯಕ ರೋಹಿತ್ ಶರ್ಮಾ ಜೊತೆಗೆ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಮತ್ತು ಏಕದಿನ ಸರಣಿಗೆ ವಿಶ್ರಾಂತಿ ನೀಡಲಾಗಿತ್ತು. 2023ರ ಏಕದಿನ ವಿಶ್ವಕಪ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಸೋಲಿನ ನಂತರ, ವಿರಾಟ್ ಕೊಹ್ಲಿ ತಮ್ಮ ಕುಟುಂಬದೊಂದಿಗೆ ಲಂಡನ್‌ನಲ್ಲಿ ಕಾಲ ಕಳೆದರು.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್‌ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅದ್ಭುತ ದಾಖಲೆ ಹೊಂದಿದ್ದಾರೆ. ಆಡಿದ 14 ಪಂದ್ಯಗಳಲ್ಲಿ ಅವರು 56.18ರ ಉತ್ತಮ ಸರಾಸರಿಯಲ್ಲಿ 1236 ರನ್ ಗಳಿಸಿದ್ದಾರೆ.

ವಿರಾಟ್ ಕೊಹ್ಲಿಯ ಅತ್ಯಧಿಕ ಟೆಸ್ಟ್ ಸ್ಕೋರ್ 254 ಕೂಡ ದಕ್ಷಿಣ ಆಫ್ರಿಕಾ ವಿರುದ್ಧವೇ ಬಂದಿದೆ ಎಂಬುದು ಗಮನಾರ್ಹ. ಅಲ್ಲೆದೆ, ಸಾರ್ವಕಾಲಿಕ ಶ್ರೇಷ್ಠ ಕ್ರಿಕೆಟಿಗ ವಿರಾಟ್ ಕೊಹ್ಲಿ ಮೂರು ಶತಕ ಮತ್ತು ನಾಲ್ಕು ಅರ್ಧಶತಕಗಳನ್ನು ಕೂಡ ಗಳಿಸಿದ್ದಾರೆ.

ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲಿ 7 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 51.35ರ ಸರಾಸರಿಯಲ್ಲಿ 719 ರನ್ ಗಳಿಸಿದ್ದಾರೆ. ಎರಡು ಶತಕಗಳು ಮತ್ತು ಮೂರು ಅರ್ಧಶತಕಗಳೊಂದಿಗೆ 153 ರನ್ ಅವರ ಗರಿಷ್ಠ ಸ್ಕೋರ್ ಆಗಿದೆ.

2023ರ ಏಕದಿನ ವಿಶ್ವಕಪ್‌ನಲ್ಲಿ ವಿರಾಟ್ ಕೊಹ್ಲಿ ಆಡಿದ 11 ಇನ್ನಿಂಗ್ಸ್‌ಗಳಲ್ಲಿ ಮೂರು ಶತಕ ಮತ್ತು 6 ಅರ್ಧಶತಕಗಳೊಂದಿಗೆ 765 ರನ್ ಗಳಿಸಿ ಸರಣಿಶ್ರೇಷ್ಠ ಆಟಗಾರನಾಗಿ ಆಯ್ಕೆಯಾದರು. ಟೀಮ್ ಇಂಡಿಯಾದ ಲೆಜೆಂಡ್ ಆಟಗಾರ ಏಕದಿನ ವಿಶ್ವಕಪ್‌ನಲ್ಲಿ ಅದ್ಭುತ ಫಾರ್ಮ್‌ನಲ್ಲಿದ್ದರು. ರೇನ್‌ಬೋ ರಾಷ್ಟ್ರದಲ್ಲಿಯೂ ವಿರಾಟ್ ಕೊಹ್ಲಿ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರಿಸಲು ಬಯಸುತ್ತಾರೆ.

ಇದೇ ವೇಳೆ, ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯನ್ನು 1-1 ಅಂತರದಿಂದ ಸಮಬಲಗೊಳಿಸಿದೆ. ಡಿಸೆಂಬರ್ 14ರಂದು ನಡೆದ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅಮೋಘ ಶತಕದೊಂದಿಗೆ ತಂಡವನ್ನು ಮುನ್ನಡೆಸಿದರು.

ಇದೀಗ, ಡಿಸೆಂಬರ್ 17ರಿಂದ ಪ್ರಾರಂಭವಾಗುವ 3 ಪಂದ್ಯಗಳ ಏಕದಿನ ಸರಣಿಗೆ ಕೆಎಲ್ ರಾಹುಲ್ ಭಾರತದ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.

ಭಾರತದ ಬ್ಯಾಟಿಂಗ್ ದಿಗ್ಗಜರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರ ವಾಪಸಾತಿಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಆದರೆ, ಅವರು ಹೆಚ್ಚು ಅಗತ್ಯವಿರುವ ವಿಶ್ರಾಂತಿಯ ನಂತರ ಕ್ರಿಕೆಟ್ ಸ್ಪರ್ಧೆಗೆ ಮರಳಲಿದ್ದಾರೆ.

Story first published: Friday, December 15, 2023, 15:11 [IST]
Other articles published on Dec 15, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+