IND vs SA TEST:ಮೊದಲ ಟೆಸ್ಟ್‌ನಲ್ಲಿ ರೋಹಿತ್ ಜೊತೆ ಇನ್ನೊಬ್ಬ ಓಪನರ್ ಯಾರು?
ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್‌ಗೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಏಕದಿನ ಸರಣಿಯನ್ನು ವಶಕ್ಕೆ ಪಡೆದಿರುವ ಟೀಮ್ ಇಂಡಿಯಾ ಮತ್ತೊಂದು ಗೆಲುವಿನ ಕನಸು ಕಾಣುತ್ತಿದೆ. ಭಾರತ ಒಮ್ಮೆಯೂ ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿಲ್ಲ. ಈ ಬಾರಿ ಟೀಮ್ ಇಂಡಿಯಾ ಟೆಸ್ಟ್ ಸರಣಿ ಗೆಲುವಿನ ಆಸೆ ಈಡೇರಿಸಲು ಕಣಕ್ಕೆ ಇಳಿಯಲಿದೆ.
ಬಾಕ್ಸಿಂಗ್ ಡೇ ಟೆಸ್ಟ್ ಮೇಲೆ ರೋಹಿತ್ ಶರ್ಮಾ ಕಣ್ಣು ನೆಟ್ಟಿದ್ದಾರೆ. ಏಕದಿನ ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಮೈದಾನಕ್ಕೆ ಇಳಿಯುತ್ತಿರುವ ರೋಹಿತ್ ಶರ್ಮಾ, ಗೆಲುವಿನ ಹಂಬಲವನ್ನು ಹೊಂದಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಟೆಸ್ಟ್ ಗೆಲುವಿನ ಸಾಧನೆ ಮಾಡಿ, ತನ್ನ ನಾಯಕತ್ವವನ್ನು ಸಾಬೀತು ಮಾಡಲು ರೋಹಿತ್‌ಗೆ ಬೆಸ್ಟ್ ಚಾನ್ಸ್.

ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26 ರಿಂದ 30 ರವರೆಗೆ ಸೆಂಚುರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆಯಲಿದೆ. ರೋಹಿತ್ ಶರ್ಮಾ ಜೊತೆಗೆ ವಿರಾಟ್ ಕೊಹ್ಲಿ, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಸ್ಟಾರ್ ಆಟಗಾರರು ಟೆಸ್ಟ್ ಸರಣಿಯಲ್ಲಿಆಡಲಿದ್ದಾರೆ. ಈ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೇಗಿರಬಹುದು ಎಂಬ ಚರ್ಚೆಗಳು ಆರಂಭವಾಗಿವೆ.
ಓಪನರ್ ಯಾರು?
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಯಾರು ಓಪನ್ ಮಾಡಲಿದ್ದಾರೆ? ಎಂಬುದೇ ತಂಡದ ಮುಂದಿರುವ ದೊಡ್ಡ ಪ್ರಶ್ನೆ. ನಾಯಕ ರೋಹಿತ್ ಶರ್ಮಾ ಜೊತೆಗೆ, ತಂಡದಲ್ಲಿ ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್ ಮತ್ತು ಅಭಿಮನ್ಯು ಈಶ್ವರನ್ ಇದ್ದಾರೆ. ಇದಲ್ಲದೇ ತಂಡದಲ್ಲಿ ಕೆಎಸ್ ಭರತ್ ಮತ್ತು ಕೆಎಲ್ ರಾಹುಲ್ ವಿಕೆಟ್ ಕೀಪರ್ ಗಳಾಗಿದ್ದಾರೆ. ಈ ಇಬ್ಬರಲ್ಲಿ ಒಬ್ಬರು ಮಾತ್ರ ಆಡುವ ಹನ್ನೊಂದರಲ್ಲಿ ಕಾಣಿಸುತ್ತಾರೆ. ಆದರೆ, ರಾಹುಲ್ ಇದುವರೆಗೂ ಟೆಸ್ಟ್ ಕ್ರಿಕೆಟ್ ನಲ್ಲಿ ವಿಕೆಟ್ ಕೀಪಿಂಗ್ ಮಾಡಿಲ್ಲ.

ಹೀಗಾಗಿ ಆಡುವ ಬಳಗದಲ್ಲಿ ಇಬ್ಬರಿಗೂ ಸ್ಥಾನ ಸಿಗುವ ಸಾಧ್ಯತೆ ಇದೆ. ಇನ್ನು ರೋಹಿತ್ ಜೊತೆ ಇನ್ನಿಂಗ್ಸ್ ಆರಂಭಿಸುವರು ಯಾರು ಎಂಬ ಪ್ರಶ್ನೆ ಮ್ಯಾನೇಜ್ಮೆಂಟ್‌ಗೆ ಕಾಡುತ್ತಿದೆ.
ಯಶಸ್ವಿ ಜೈಸ್ವಾಲ್ ಮತ್ತು ರೋಹಿತ್ ಶರ್ಮಾ ಇನ್ನಿಂಗ್ಸ್ ಆರಂಭಿಸ ಬಹುದು. ಇದಾದ ಬಳಿಕ ಶುಭಮನ್ ಗಿಲ್ ಮೂರನೇ ಕ್ರಮಾಂಕದಲ್ಲಿ ಆಡಬಹುದು. ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ನಾಲ್ಕು ಮತ್ತು ಐದನೇ ಕ್ರಮಾಂಕದಲ್ಲಿ ಆಡುವುದು ಖಚಿತವಾಗಿದೆ.

ಕೆಎಲ್ ರಾಹುಲ್ ಅವರನ್ನು ಆರನೇ ಕ್ರಮಾಂಕದಲ್ಲಿ ನೋಡಬಹುದು. ಇದಾದ ನಂತರ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಆಡಬಹುದು. ಆದರೆ ವೇಗದ ಬೌಲಿಂಗ್‌ನಲ್ಲಿ ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ ಮತ್ತು ಶಾರ್ದೂಲ್ ಠಾಕೂರ್ ಅವರನ್ನು ಕಾಣಬಹುದಾಗಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ - ಮೊದಲ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಹನ್ನೊಂದರಲ್ಲಿ ಆಡುವ ಸಾಧ್ಯತೆಯಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications