ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

#ThankYouRahane: ಟ್ವಿಟ್ಟರ್‌ನಲ್ಲಿ ಭಾರತದ ಅನುಭವಿ ಕ್ರಿಕೆಟಿಗನಿಗೆ ಧನ್ಯವಾದ ಸಲ್ಲಿಸಿದ ನೆಟ್ಟಿಗರು

Ind vs SA: Thank you Rahane trends on Twitter after Ajinkya Rahane failed again in test cricket

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಅಂತಿಮ ಪಂದ್ಯ ನಡೆಯುತ್ತಿದ್ದು ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಕಳಪೆ ಆರಂಭವನ್ನು ಪಡೆದು ಸಂಕಷ್ಟದಲ್ಲಿದೆ. ಈ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಆರಂಭವಾದ ಕೆಲವೇ ಹೊತ್ತಿನಲ್ಲಿ ಟೀಮ್ ಇಂಡಿಯಾ ಮತ್ತೆರಡು ವಿಕೆಟ್ ಕಳೆದುಕೊಂಡಿತು. ಅನುಭವಿ ಆಟಗಾರರಾದ ಚೇತೇಶ್ವರ್ ಪುಜಾರ ಹಾಗೂ ಅಜಿಂಕ್ಯಾ ರಹಾನೆ ಕಳಪೆ ಆಟವಾಗಿ ಫೆವಿಲಿಯನ್ ಸೇರಿದ್ದಾರೆ. ಈ ಆಟಗಾರರ ಪ್ರದರ್ಶನದಿಂದ ಟೀಮ್ ಇಂಡಿಯಾ ಅಭಿಮಾನಿಗಳು ಅಕ್ಷರಶಃ ಬೇಸತ್ತಿದ್ದಾರೆ.

ಅದರಲ್ಲೂ ಅನುಭವಿ ಆಟಗಾರ ಅಜಿಂಕ್ಯಾ ರಹಾನೆ ಈ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 9 ರನ್‌ಗಳಿಸಿ ಔಟಾಗಿದ್ದರೆ ಎರಡನೇ ಇನ್ನಿಂಗ್ಸ್‌ನಲ್ಲಿ 1 ರನ್‌ಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್ ಸೇರಿಕೊಂಡಿದ್ದಾರೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಭಾರತೀಯ ಕ್ರಿಕೆಟ್ ತಮಡದ ಅಭಿಮಾನಿಗಳು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್‌ನಲ್ಲಿ #ThankYouRahane ಟ್ರೆಂಡಿಂಗ್‌ನಲ್ಲಿದೆ.

ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ IPL 15ನೇ ಸೀಸನ್‌? ಪ್ಲ್ಯಾನ್ ಬಿ ರೆಡಿ ಮಾಡಿಕೊಂಡಿರುವ BCCIದಕ್ಷಿಣ ಆಫ್ರಿಕಾದಲ್ಲಿ ನಡೆಯಲಿದೆ IPL 15ನೇ ಸೀಸನ್‌? ಪ್ಲ್ಯಾನ್ ಬಿ ರೆಡಿ ಮಾಡಿಕೊಂಡಿರುವ BCCI

ಎರಡನೇ ಇನ್ನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಎರಡನೇ ದಿನದಾಟ ಮುಕ್ತಾಯವಾಗುವ ವೇಳೆಗೆ ಆರಂಭಿಕರಿಬ್ಬರ ವಿಕೆಟ್ ಕಳೆದುಕೊಂಡು ಸಂಕಷ್ಟವನ್ನು ಅನುಭವಿಸಿತ್ತು. ಚೇತೇಶ್ವರ್ ಪೂಜಾರ ಹಾಗೂ ನಾಯಕ ಕೊಹ್ಲಿ ಕ್ರೀಸ್‌ನಲ್ಲಿದ್ದು ಮೂರನೇ ದಿನದಾಟ ಆರಂಬಿಸಿದ್ದರು. ಆದರೆ ಮೂರನೇ ದಿನದಾಟ ಆರಂಭವಾದ ಕೆಲ ಹೊತ್ತಿನಲ್ಲಿಯೇ ಚೇತೇಶ್ವರ್ ಪೂಜಾರ ಮಾರ್ಕೋ ಜಾನ್ಸನ್‌ಗೆ ವಿಕೆಟ್ ಒಪ್ಪಿಸಿ ಹೊರನಡೆದರು. ಈ ಸಂದರ್ಭದಲ್ಲಿ ರಹಾನೆ ಬ್ಯಾಟ್‌ನಿಂದ ಕೇವಲ 9 ರನ್ ಮಾತ್ರವೇ ಸಿಡಿದಿತ್ತು. ಅದಾದ ಬಳಿಕ ಕಣಕ್ಕಿಳಿದ ಅಜಿಂಕ್ಯಾ ರಹಾನೆ ಮೇಲೆ ತಂಡವನ್ನು ಕುಸಿತದಿಂದ ಪಾರು ಮಾಡುವ ಜವಾಬ್ಧಾರಿಯಿತ್ತು. ಆದರೆ ರಹಾನೆ ಮತ್ತೊಮ್ಮೆ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನಿಲ್ಲಲು ವಿಫಲವಾಗಿ ಫೆವಿಲಿಯನ್ ಸೇರಿಕೊಂಡರು. ಕಗಿಸೋ ರಬಡಾ ಎಸೆದಲ್ಲಿ ರಹಾನೆ ಡೀನ್ ಎಲ್ಗರ್‌ಗೆ ಕ್ಯಾಚ್ ನೀಡಿದರು.

ರಹಾನೆ ಪದೇ ಪದೇ ಹೀಗೆ ವೈಫಲ್ಯವನ್ನು ಅನುಭವಿಸುತ್ತಿರುವ ಕಾರಣ ಟ್ವಿಟ್ಟರ್‌ನಲ್ಲಿ ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಅಜಿಂಕ್ಯಾ ರಹಾನೆ ತಮ್ಮ ಅಂತಿಮ ಪಂದ್ಯವನ್ನು ಆಡಿದ್ದಾರೆ ಎಂದು ಪ್ರತಿಕ್ರಿಯೆಗಳನ್ನು ಅಭಿಮಾನಿಗಳು ನೀಡುತ್ತಿದ್ದಾರೆ.

ಭಾರತದ ಹೊರಗೆ ನಡೆಯಲಿಲ್ಲ ಮಯಾಂಕ್ ಆಟ : 14 ಇನ್ನಿಂಗ್ಸ್‌ನಲ್ಲಿ ಗಳಿಸಿರುವುದು 1 ಅರ್ಧಶತಕಭಾರತದ ಹೊರಗೆ ನಡೆಯಲಿಲ್ಲ ಮಯಾಂಕ್ ಆಟ : 14 ಇನ್ನಿಂಗ್ಸ್‌ನಲ್ಲಿ ಗಳಿಸಿರುವುದು 1 ಅರ್ಧಶತಕ

ಅಜಿಂಕ್ಯಾ ರಹಾನೆ ತಮ್ಮ ವೃತ್ತಿ ಜೀವನದಲ್ಲಿ ಅತ್ಯಂತ ಕಳಪೆ ಫಾರ್ಮ್‌ನಲ್ಲಿದ್ದಾರೆ. ಅದರಲ್ಲೀ 2020 ಹಾಗೂ 2021ರ ಅವಧಿಯಲ್ಲಿ ರಹಾನೆ ಪ್ರದರ್ಶನ ಆಘಾತಕಾರಿಯಾಗಿದೆ. ಈ ಎರಡು ಕ್ಯಾಲೆಂಡರ್ ವರ್ಷದಲ್ಲಿ ರಹಾನೆ ಕ್ರಮವಾಗಿ 38.85 ಹಾಗೂ 19.57ರ ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ. 2019ರ ಅಕ್ಟೋಬರ್ ಬಳಿಕ ರಹಾನೆ ಕೇವಲ ಒಂದು ಶತಕವನ್ನು ಮಾತ್ರವೇ ಗಳಿಸಿದ್ದಾರೆ. ಪದೇ ಪದೇ ಅವರ ವೈಫಲ್ಯದಿಂದ ಅಂತಾರಾಷ್ಟ್ರೀಯ ಟೆಸ್ಟ್ ವೃತ್ತಿ ಜೀವನದ ಒಟ್ಟಾರೆ ಸರಾಸರಿ 40ಕ್ಕಿಂತಲೂ ಕೆಳಕ್ಕಿಳಿದಿದೆ.

ಇನ್ನು ಮೊದಲ ಇನ್ನಿಂಗ್ಸ್‌ನಲ್ಲಿ 13 ರನ್‌ಗಳ ಅಲ್ಪ ಮುನ್ನಡೆ ಪಡೆದಿರುವ ಟೀಮ್ ಇಂಡಿಯಾ ಎರಡನೇ ಇನ್ನಿಂಗ್ಸ್‌ನಲ್ಲಿಯೂ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿದೆ. ಆರಂಭಿಕ ಆಟಗಾರರ ವೈಫಲ್ಯದ ಬಳಿಕ ಅನುಭವಿ ಆಟಗಾರರಾದ ಪೂಜಾರ ಹಾಗೂ ರಹಾನೆ ಕೂಡ ಶೀಘ್ರವಾಗಿ ವಿಕೆಟ್ ಒಪ್ಪಿಸಿರುವುದು ತಂಡಕ್ಕೆ ದೊಡ್ಡ ಆಘಾತ ನೀಡಿದೆ. ನಾಯಕ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಕುಸಿತದಿಂದ ತಂಡವನ್ನು ಪಾರು ಮಾಡುವ ಪ್ರಯತ್ನ ನಡೆಸಿದ್ದಾರೆ.

ಧಕ್ಷಿಣ ಆಪ್ರಿಕಾ ಆಡುವ ಬಳಗ: ಡೀನ್ ಎಲ್ಗರ್ (ನಾಯಕ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡುಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ವಾಕ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ
ಬೆಂಚ್: ಪ್ರೆನೆಲನ್ ಸುಬ್ರಾಯೆನ್, ಬ್ಯೂರಾನ್ ಹೆಂಡ್ರಿಕ್ಸ್, ಸಿಸಂಡಾ ಮಗಾಲಾ, ಜಾರ್ಜ್ ಲಿಂಡೆ, ವಿಯಾನ್ ಮುಲ್ಡರ್, ಸರೆಲ್ ಎರ್ವೀ, ರಯಾನ್ ರಿಕೆಲ್ಟನ್, ಗ್ಲೆಂಟನ್ ಸ್ಟೌರ್ಮನ್

ಕೇಪ್ ಟೌನ್ ಟೆಸ್ಟ್ ನಲ್ಲಿ ವಿಶಿಷ್ಟ ಶತಕ ಸಿಡಿಸಿದ Virat Kohli | Oneindia Kannada

ಟೀಮ್ ಇಂಡಿಯಾ ಆಡುವ ಬಳಗ: ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್
ಬೆಂಚ್: ಜಯಂತ್ ಯಾದವ್, ಪ್ರಿಯಾಂಕ್ ಪಾಂಚಾಲ್, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಮೊಹಮ್ಮದ್ ಸಿರಾಜ್, ವೃದ್ಧಿಮಾನ್ ಸಹಾ, ಇಶಾಂತ್ ಶರ್ಮಾ

Story first published: Thursday, January 13, 2022, 17:04 [IST]
Other articles published on Jan 13, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X