IND vs SA: ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟಾಪ್ 5 ಟೀಮ್ ಇಂಡಿಯಾ ಆಟಗಾರರು
ಭಾರತ, ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದೆ. ಈ ಪ್ರವಾಸದಲ್ಲಿ ಟೀಮ್ ಇಂಡಿಯಾ ಟಿ20 ಸರಣಿಯನ್ನು ಸಮಬಲ ಸಾಧಿಸಿದೆ. ಏಕದಿನ ಸರಣಿಯಲ್ಲಿ ರಾಹುಲ್ ಪಡೆ 2-0ಯಿಂದ ಗೆದ್ದು ಬೀಗಿದೆ. ಈಗ ಎಲ್ಲರ ಚಿತ್ತ ಟೆಸ್ಟ್ ಸರಣಿಯತ್ತ ನೆಟ್ಟಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯು ಡಿಸೆಂಬರ್ 26 ರಿಂದ ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ರನ್ ಗಳಿಸಿ ಭಾರತೀಯ ಆಟಗಾರರು ಯಾರು ಎಂಬ ಪ್ರಶ್ನೆ ಮೂಡದೆ ಇರದು.

ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಅವರು ದಕ್ಷಿಣ ಆಫ್ರಿಕಾದಲ್ಲಿ ಏಳು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 51.35 ಸರಾಸರಿಯಲ್ಲಿ 719 ರನ್ ಗಳಿಸಿದ್ದಾರೆ. ಇಲ್ಲಿ ಎರಡು ಶತಕ ಬಾರಿಸಿದ್ದಾರೆ.
ಭಾರತದ ಪರ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್. ಅವರು ಇಲ್ಲಿ 15 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ ಮತ್ತು 46.44 ರ ಬ್ಯಾಟಿಂಗ್ ಸರಾಸರಿಯಲ್ಲಿ 1161 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಸಚಿನ್ ಕೂಡ ಐದು ಶತಕಗಳನ್ನು ಗಳಿಸಿದ್ದಾರೆ.

ಪ್ರಸ್ತುತ ಟೀಂ ಇಂಡಿಯಾದ ಕೋಚ್ ರಾಹುಲ್ ದ್ರಾವಿಡ್ ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ಟೆಸ್ಟ್ ರನ್ ಗಳಿಸಿದ ಭಾರತೀಯರ ಪೈಕಿ ಮೂರನೇ ಸ್ಥಾನದಲ್ಲಿದ್ದಾರೆ. ಅವರು 11 ಪಂದ್ಯಗಳಲ್ಲಿ 624 ರನ್ ಗಳಿಸಿದ್ದಾರೆ. ದ್ರಾವಿಡ್ ಇಲ್ಲಿ ಶತಕ ದಾಖಲಿಸಿದ್ದಾರೆ.
ವಿವಿಎಸ್ ಲಕ್ಷ್ಮಣ್ ದಕ್ಷಿಣ ಆಫ್ರಿಕಾದಲ್ಲಿ 10 ಟೆಸ್ಟ್ ಪಂದ್ಯಗಳಲ್ಲಿ 40.42 ಸರಾಸರಿಯಲ್ಲಿ 566 ರನ್ ಗಳಿಸಿದ್ದಾರೆ. ಈ ಪಟ್ಟಿಯಲ್ಲಿ ಅವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಇಲ್ಲಿ ಟಾಪ್-5ರಲ್ಲಿ ಚೇತೇಶ್ವರ ಪೂಜಾರ ಕೂಡ ಸೇರಿಕೊಂಡಿದ್ದಾರೆ. ಅವರು ದಕ್ಷಿಣ ಆಫ್ರಿಕಾದಲ್ಲಿ 10 ಟೆಸ್ಟ್ ಪಂದ್ಯಗಳಲ್ಲಿ 535 ರನ್ ಗಳಿಸಿದ್ದಾರೆ. ಇಲ್ಲೂ ಶತಕ ಬಾರಿಸಿದ್ದಾರೆ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications