IND vs SA: ಸಂಜು ಸ್ಯಾಮ್ಸನ್ ಹೆಸರಿನಲ್ಲಿ ಅನಗತ್ಯ ದಾಖಲೆ!
ಪ್ರಸ್ತುತ ಭಾರತ ತಂಡ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದೆ. ಉಭಯ ತಂಡಗಳ ನಡುವೆ ನಾಲ್ಕು ಪಂದ್ಯ ಟಿ20 ನಡೆಯುತ್ತದೆ. ಮೊದಲ ಪಂದ್ಯವನ್ನು ಭಾರತ ಗೆದ್ದರೆ, ಎರಡನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವಿನ ನಗೆ ಬೀಡುವ ಮೂಲಕ ನಾಲ್ಕು ಪಂದ್ಯಗಳ ಸರಣಿಯನ್ನು 1-1 ರಿಂದ ಸಮಬಲಗೊಳಿಸಿದೆ.
ಡರ್ಬನ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಅಮೋಘ ಶತಕ ಬಾರಿಸಿದ್ದ ಸಂಜು ಸ್ಯಾಮ್ಸನ್ ಎರಡನೇ ಪಂದ್ಯದಲ್ಲಿ ಮುಗ್ಗರಿಸಿದ್ದಾರೆ. ಗೆಬಹಾದಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದಿದ್ದ ಸಂಜು ಖಾತೆ ತೆರೆಯದೆ ವಿಕೆಟ್ ಕಳೆದುಕೊಂಡರು. ಇದರೊಂದಿಗೆ ಅವರು ಅನಗತ್ಯ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟಿ20 ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಡಕ್ ಔಟ್ ಆಗುವ ಮೂಲಕ 15 ವರ್ಷಗಳ ಹಳೆಯ ದಾಖಲೆ ಮುರಿದಿದ್ದಾರೆ. ಸ್ಯಾಮ್ಸನ್ ಈಗ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಒಂದು ವರ್ಷದಲ್ಲಿ ಅತಿ ಹೆಚ್ಚು ಬಾರಿ ಡಕ್ ಔಟ್ ಆದ ಭಾರತದ ಬ್ಯಾಟರ್ ಆಗಿದ್ದಾರೆ.
ಇದಕ್ಕೂ ಮೊದಲು ಈ ಅನಗತ್ಯ ದಾಖಲೆ ಯೂಸುಫ್ ಪಠಾಣ್ ಹೆಸರಲ್ಲಿತ್ತು. 2009ರಲ್ಲಿ ಯೂಸುಫ್ ಪಠಾಣ್ ಮೂರು ಬಾರಿ ಡಕ್ ಔಟಾಗಿದ್ದರು. ಇದೀಗ 2024ರಲ್ಲಿ ಸಂಜು ನಾಲ್ಕು ಬಾರಿ ಡಕ್ ಔಟಾಗುವ ಮೂಲಕ ಹೊಸ ದಾಖಲೆ ಸೃಷ್ಟಿಸಿದ್ದಾರೆ.
ಇದಲ್ಲದೆ, ಸಂಜು ಟಿ20 ಕ್ರಿಕೆಟ್‌ನಲ್ಲಿ ಮತ್ತೊಂದು ರೆಕಾರ್ಡ್ ಮಾಡಿದ್ದಾರೆ. ಶತಕ ಸಿಡಿಸಿದ ಮರು ಪಂದ್ಯದಲ್ಲೇ ಶೂನ್ಯಕ್ಕೆ ಔಟಾದ 4ನೇ ಬ್ಯಾಟರ್ ಎಂಬ ಕೆಟ್ಟ ದಾಖಲೆಯನ್ನು ಹೊಂದಿದ್ದಾರೆ. ಈ ಮೊದಲು ಋತುರಾಜ್ ಗಾಯಕ್ವಾಡ್, ರೋಹಿತ್ ಶರ್ಮಾ ಹಾಗೂ ಅಭಿಷೇಕ್ ಶರ್ಮಾ ಶತಕ ಸಿಡಿಸಿದ ಬಳಿಕ ಶೂನ್ಯ ಔಟಾಗಿದ್ದಾರೆ. ಇದೀಗ ಈ ಅನಗತ್ಯ ದಾಖಲೆ ಪಟ್ಟಿಯಲ್ಲೂ ಸಂಜು ಸ್ಥಾನ ಪಡೆದಿದ್ದಾರೆ.
ಒಂದು ವರ್ಷದಲ್ಲಿ ಅತಿ ಹೆಚ್ಚು ಬಾರಿ ಡಕ್ ಔಟಾದ ಆಟಗಾರರು
*ಸಂಜು ಸ್ಯಾಮ್ಸನ್ - 4 ಬಾರಿ (ವರ್ಷ 2024)
*ಯೂಸುಫ್ ಪಠಾಣ್ - 3 ಬಾರಿ (ವರ್ಷ 2009)
*ರೋಹಿತ್ ಶರ್ಮಾ - 3 ಬಾರಿ (ವರ್ಷ 2018)
*ರೋಹಿತ್ ಶರ್ಮಾ - 3 ಬಾರಿ (ವರ್ಷ 2022)
*ವಿರಾಟ್ ಕೊಹ್ಲಿ - 3 ಬಾರಿ (ವರ್ಷ 2024)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications