ಕೇಶವ್ ಮಹಾರಾಜ್‌ಗೆ ವಿಶೇಷ ಉಡುಗೊರೆ ನೀಡಿದ ವಿರಾಟ್ ಕೊಹ್ಲಿ; 'ದಿ ವಾಲ್' ಎಂದ ಆಫ್ರಿಕಾ ಸ್ಪಿನ್ನರ್
ಗುರುವಾರ, ಜನವರಿ 4ರಂದು ಕೇಪ್ ಟೌನ್‌ನ ನ್ಯೂಲ್ಯಾಂಡ್ಸ್‌ನಲ್ಲಿ ಮುಕ್ತಾಯಗೊಂಡ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ತಂಡದ ವಿರುದ್ಧ ಪ್ರವಾಸಿ ತಂಡವು 7 ವಿಕೆಟ್‌ಗಳ ಐತಿಹಾಸಿಕ ಗೆಲುವು ಸಾಧಿಸಿತು.
ಇನ್ನು ಪಂದ್ಯದ ನಂತರ, ಭಾರತದ ಸೂಪರ್ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಅವರು ತಮ್ಮ ಹಸ್ತಾಕ್ಷರವುಳ್ಳ ಜೆರ್ಸಿಯನ್ನು ದಕ್ಷಿಣ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರಾಜ್‌ಗೆ ವಿಶೇಷ ಉಡುಗೊರೆಯಾಗಿ ನೀಡಿದರು.
ಕೇಶವ್ ಮಹಾರಾಜ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ, ಭಾರತ ತಂಡದ ಮಾಜಿ ನಾಯಕನ "18 ನಂಬರ್' ಜೆರ್ಸಿಯನ್ನು ಸ್ವೀಕರಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

'One for the Wall, ಧನ್ಯವಾದಗಳು ವಿರಾಟ್ ಕೊಹ್ಲಿ' ಎಂದು ಹರಿಣ ತಂಡದ ಸ್ಪಿನ್ನರ್ ಕೇಶವ್ ಮಹಾರಾಜ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಚಿತ್ರವನ್ನು ಹಂಚಿಕೊಂಡು ಬರೆದುಕೊಂಡಿದ್ದಾರೆ.
ಗುರುವಾರದಂದು ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನವನ್ನು ಕೊನೆಗೊಳಿಸಿದ ಡೀನ್ ಎಲ್ಗರ್ ಅವರಿಗೆ ರೋಹಿತ್ ಶರ್ಮಾ ಅವರು ಭಾರತೀಯ ಅಟಗಾರರ ಸಹಿ ಮಾಡಿದ ಜೆರ್ಸಿಯನ್ನು ಉಡುಗೊರೆಯಾಗಿ ನೀಡಿದ ನಂತರ, ವಿರಾಟ್ ಕೊಹ್ಲಿ ಕೂಡ ಕೇಶವ್ ಮಹಾರಾಜ್‌ಗೆ ವಿಶೇಷ ಉಡುಗೊರೆ ನೀಡಿದರು.

ಎರಡನೇ ಟೆಸ್ಟ್ ಪಂದ್ಯದ ಕುರಿತು ಹೇಳುವುದಾದರೆ, ದಕ್ಷಿಣ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು ಮತ್ತು 23.2 ಓವರ್‌ಗಳಲ್ಲಿ ಕೇವಲ 55 ರನ್‌ಗಳಿಗೆ ಆಲೌಟ್ ಆಯಿತು. ಕೈಲ್ ವೆರ್ರೆನ್ (15) ಮತ್ತು ಡೇವಿಡ್ ಬೆಡಿಂಗ್‌ಹ್ಯಾಮ್ (12) ಎರಡಂಕಿ ದಾಟಿದ ಇಬ್ಬರು ಆಟಗಾರರು.
ಭಾರತದ ಪರ ಮೊಹಮ್ಮದ್ ಸಿರಾಜ್ ಅವರ 15 ರನ್‌ಗೆ 6 ವಿಕೆಟ್ ಕಬಳಿಸಿ ದಕ್ಷಿಣ ಆಫ್ರಿಕಾದ ಅಗ್ರ ಮತ್ತು ಮಧ್ಯಮ ಕ್ರಮಾಂಕವನ್ನು ನಾಶಪಡಿಸಿದರು. ಉಳಿದಂತೆ ಜಸ್ಪ್ರೀತ್ ಬುಮ್ರಾ ಮತ್ತು ಮುಖೇಶ್ ಕುಮಾರ್ ತಲಾ 2 ವಿಕೆಟ್ ಪಡೆದರು.
ಇನ್ನು ತಮ್ಮ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ 153 ರನ್‌ಗಳಿಗೆ ಸರ್ವಪತನ ಕಂಡಿತು. ವಿರಾಟ್ ಕೊಹ್ಲಿ 59 ಎಸೆತಗಳಲ್ಲಿ 46 ರನ್ ಗಳಿಸಿದರೆ, ರೋಹಿತ್ ಶರ್ಮಾ 39 ರನ್ ಮತ್ತು ಶುಭ್ಮನ್ ಗಿಲ್ 36 ರನ್ ಗಳಿಸಿದರು.
ದಕ್ಷಿಣ ಆಫ್ರಿಕಾ ತಂಡದ ಪರ ಲುಂಗಿ ಎನ್‌ಗಿಡಿ, ಕಗಿಸೊ ರಬಾಡ ಮತ್ತು ನಾಂದ್ರೆ ಬರ್ಗರ್ ತಲಾ ಮೂರು ವಿಕೆಟ್ ಪಡೆದು ಮಿಂಚಿದರು.
ನಂತರ, ಎರಡನೇ ಇನ್ನಿಂಗ್ಸ್‌ನಲ್ಲಿ ದಕ್ಷಿಣ ಆಫ್ರಿಕಾ 36.5 ಓವರ್‌ಗಳಲ್ಲಿ 176 ರನ್‌ಗಳಿಗೆ ಮತ್ತೆ ಗಂಟುಮೂಟೆ ಕಟ್ಟಿತು. ಏಡೆನ್ ಮಾರ್ಕ್ರಾಮ್ ಹೋರಾಟದ ಶತಕವನ್ನು ಗಳಿಸಿದರೂ, 103 ಎಸೆತಗಳಲ್ಲಿ 17 ಬೌಂಡರಿ ಮತ್ತು 2 ಸಿಕ್ಸರ್‌ಗಳೊಂದಿಗೆ 106 ರನ್ ಗಳಿಸಿದರು.
ಜಸ್ಪ್ರೀತ್ ಬುಮ್ರಾ 61 ರನ್ ನೀಡಿ 6 ವಿಕೆಟ್ ಕಬಳಿಸಿದರೆ, ಮುಖೇಶ್ ಕುಮಾರ್ 2 ವಿಕೆಟ್, ಮೊಹಮ್ಮದ್ ಸಿರಾಜ್ ಮತ್ತು ಪ್ರಸಿದ್ಧ್ ಕೃಷ್ಣ ತಲಾ ಒಂದೊಂದು ವಿಕೆಟ್ ತಮ್ಮದಾಗಿಸಿಕೊಂಡರು.
ನಂತರ, 79 ರನ್‌ಗಳ ಗುರಿ ಬೆನ್ನಟ್ಟಿದ ಭಾರತಕ್ಕೆ ಆರಂಭಿಕರಾದ ಯಶಸ್ವಿ ಜೈಸ್ವಾಲ್ (28) ಮತ್ತು ನಾಯಕ ರೋಹಿತ್ ಶರ್ಮಾ (16) ರನ್‌ಗಳ ನೆರವಿನಿಂದ ಭಾರತ 12 ಓವರ್‌ಗಳಲ್ಲಿ ಏಳು ವಿಕೆಟ್‌ಗಳು ಬಾಕಿ ಇರುವಂತೆಯೇ ಗೆಲುವಿನ ಗಡಿ ತಲುಪಿತು.
ಮೊಹಮ್ಮದ್ ಸಿರಾಜ್ 'ಪ್ಲೇಯರ್ ಆಫ್ ದಿ ಮ್ಯಾಚ್' ಪ್ರಶಸ್ತಿಯನ್ನು ಗೆದ್ದರು ಮತ್ತು ಉಭಯ ತಂಡಗಳು 1-1 ಅಂತರದಲ್ಲಿ ಟ್ರೋಫಿಯನ್ನು ಹಂಚಿಕೊಂಡವು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications