ಭಾರತ vs ದ. ಆಫ್ರಿಕಾ: ರಾಹುಲ್ ದ್ರಾವಿಡ್ ದಾಖಲೆ ಹಿಂದಿಕ್ಕಿದ ವಿರಾಟ್ ಕೊಹ್ಲಿ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಅಂತಿಮ ಹಾಗೂ ಮೂರನೇ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಹಾಗಿದ್ದರೂ ಭಾರತ ಬ್ಯಾಟಿಂಗ್‌ನಲ್ಲಿ ಭಾರೀ ಹಿನ್ನೆಡೆ ಅನುಭವಿಸಿದೆ. ಟೀಮ್ ಇಂಡಿಯಾ ಪರವಾಗಿ ಮೊದಲ ಇನ್ನಿಂಗ್ಸ್‌ನಲ್ಲಿ ನಾಯಕ ವಿರಾಟ್ ಕೊಹ್ಲಿ ಏಕಾಂಗಿ ಹೋರಾಟವನ್ನು ನಡೆಸಿದ್ದಾರೆ. ಈ ಸಂದರ್ಭದಲ್ಲಿ ಟೀಮ್ ಇಂಡಿಯಾದ ಹಾಲಿ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರನ್ನು ವಿರಾಟ್ ಕೊಹ್ಲಿ ಎಲೈಟ್ ಪಟ್ಟಿಯೊಂದರಲ್ಲಿ ಹಿಂದಿಕ್ಕಿದ್ದಾರೆ.
ಭಾರತ ಹಾಗೂ ದಕ್ಷಿಣ ಆಪ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅತ್ಯಂತ ತಾಳ್ಮೆಯಿಂದ ಇನ್ನಿಂಗ್ಸ್ ಕಟ್ಟಿದ್ದಾರೆ. ಆರಂಭದಿಂದಲೇ ಎಚ್ಚರಿಕೆಯ ಬ್ಯಾಟಿಂಗ್ ನಡೆಸಿದ ಕೊಹ್ಲಿ ಒಂದು ತುದಿಯಲ್ಲಿ ಭಾರತೀಯ ಬ್ಯಾಟರ್‌ಗಳು ಪೆವಿಲಿಯನ್ ಪೆರೇಡ್ ನಡೆಸುತ್ತಿದ್ದರೂ ಮತ್ತೊಂದು ತುದಿಯಲ್ಲಿ ಗಟ್ಟಿಯಾಗಿ ನೆಲೆಯೂರಿದ್ದಾರೆ. ಈ ಮೂಲಕ ದಕ್ಷಿಣ ಆಫ್ರಿಕಾದ ಬೌಲರ್‌ಗಳ ದಾಳಿಯನ್ನು ವಿರಾಟ್ ಕೊಹ್ಲಿ ದಿಟ್ಟವಾಗಿ ಎದುರಿಸಿದ್ದು 79 ರನ್‌ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಕೋಚ್ ರಾಹುಲ್ ದ್ರಾವಿಡ್ ಅವರನ್ನು ವಿಶೇಷ ದಾಖಲೆಯ ಪಟ್ಟಿಯಲ್ಲಿ ಹಿಂದಿಕ್ಕಿದ್ದಾರೆ. ದಕ್ಷಿಣ ಆಫ್ರಿಕಾ ನೆಲದಲ್ಲಿ ಭಾರತೀಯ ಬ್ಯಾಟರ್‌ಗಳ ಪೈಕಿ ಅತಿ ಹೆಚ್ಚು ರನ್‌ಗಳಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ರಾಹುಲ್ ದ್ರಾವಿಡ್ ಅವರನ್ನು ಹಿಂದಿಕ್ಕಿದ್ದಾರೆ. ರಾಹುಲ್ ದ್ರಾವಿಡ್ 624 ರನ್‌ಗಳನ್ನು ದಕ್ಷಿಣ ಆಪ್ರಿಕಾ ನೆಲದಲ್ಲಿ ಗಳಿಸಿದ್ದರು. ನ್ಯೂಲ್ಯಾಂಡ್ಸ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೊಹ್ಲಿ 13 ರನ್‌ಗಳಿಸಿದ್ದಾಗ ಈ ಸಾಧನೆ ಮಾಡಿದ್ದಾರೆ ಕೊಹ್ಲಿ. ಈ ಮೂಲಕ ದಕ್ಷಿಣ ಆಫ್ರಿಕಾದಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೊಹ್ಲಿ ಎರಡನೇ ಸ್ಥಾನಕ್ಕೇರಿದ್ದಾರೆ.
ದಕ್ಷಿಣ ಆಪ್ರಿಕಾ ನೆಲದಲ್ಲಿ ಆಡಿದ ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್‌ಗಳಿಸಿದ ಭಾರತೀಯ ಆಟಗಾರರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಸಚಿನ್ ತೆಂಡೂಲ್ಕರ್ ಇದ್ದಾರೆ. 15 ಪಂದ್ಯಗಳನ್ನು ಆಡಿರುವ ಸಚಿನ್ ತೆಂಡೂಲ್ಕರ್ 5 ಶತಕಗಳ ಸಹಿತ 1161 ರನ್ ಬಾರಿಸಿದ್ದಾರೆ. ಎರಡನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 7 ಪಂದ್ಯಗಳನ್ನು ಆಡಿದ್ದು 2 ಶತಕಗಳೊಂದಿಗೆ 690 ರನ್‌ಗಳಿಸಿದ್ದಾರೆ. ಮೂರನೇ ಸ್ಥಾನದಲ್ಲಿ ರಾಹುಲ್ ದ್ರಾವಿಡ್ 11 ಪಂದ್ಯಗಳನ್ನು ಆಡಿದ್ದು 624 ರನ್‌ಗಳಿಸಿದ್ದಾರೆ.
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. 201 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ 79 ರನ್‌ಗಳ ಕೊಡುಗೆ ನೀಡಿದರು. ಆದರೆ ಬಹು ಕಾಲದಿಂದ ನಿರೀಕ್ಷಿಸುತ್ತಿರುವ ಶತಕ ಗಳಿಸುವ ಅವಕಾಶವನ್ನು ವಿರಾಟ್ ಕೊಹ್ಲಿ ಮತ್ತೊಮ್ಮೆ ಕಳೆದುಕೊಂಡರು. ಕಗಿಸೋ ರಬಡಾ ಎಸೆತದಲ್ಲಿ ವಿಕೆಟ್ ಕೀಪರ್ ವರ್ರೆಯ್ನೆಗೆ ಕ್ಯಾಚ್ ನೀಡಿ ವಿರಾಟ್ ಕೊಹ್ಲಿ ಫೆವಿಲಿಯನ್ ಸೇರಿಕೊಂಡರು.
ಇನ್ನು ಈ ಪಂದ್ಯದಲ್ಲಿ ವಿರಾಟ್ ಕೊಹ್ಲಿಯನ್ನು ಹೊರತುಪಡಿಸಿ ಚೇತೇಶ್ವರ್ ಪೂಜಾರ ಗಳಿಸಿದ 43 ರನ್ ಅತ್ಯುತ್ತಮ ಕೊಡುಗೆಯೆನಿಸಿದೆ.ಆರಂಭಿಕರಾದ ಕೆಎಲ್ ರಾಹುಲ್ ಹಾಗೂ ಮಯಾಂಕ್ ಅಗರ್ವಾಲ್ ಈ ಪಂದ್ಯದಲ್ಲಿ ಮಿಂಚಲು ವಿಫಲವಾಗಿದ್ದಾರೆ. ಇನ್ನು ಅನುಭವಿ ಅಜಿಂಕ್ಯಾ ರಹಾನೆ ಮತ್ತೊಮ್ಮೆ ವೈಫಲ್ಯವನ್ನು ಅನುಭವಿಸಿದ್ದಾರೆ. ರಿಷಭ್ ಪಂತ್ ಕೂಡ 27 ರನ್‌ಗಳ ಕೊಡುಗೆಯನ್ನು ಮಾತ್ರವೇ ನೀಡುವಲ್ಲಿ ಸಫಲವಾದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications