Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs SA: ಟಿ20 ವಿಶ್ವಕಪ್‌ನಲ್ಲಿ ಬೃಹತ್ ದಾಖಲೆ ನಿರ್ಮಿಸಲು ವಿರಾಟ್ ಕೊಹ್ಲಿಗೆ ಬೇಕು 28 ರನ್‌!

IND vs SA: Virat Kohli Needs 28 Runs To Create A Huge Record In T20 World Cup

ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ 2022ರ ಟಿ20 ವಿಶ್ವಕಪ್‌ನಲ್ಲಿ ಭಾನುವಾರ, ಅಕ್ಟೋಬರ್ 30ರಂದು ಭಾರತ ತಂಡವು ತನ್ನ ಗ್ರೂಪ್ 2 ಸೂಪರ್ 12 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸುವಾಗ ಮತ್ತೊಮ್ಮೆ ವಿರಾಟ್ ಕೊಹ್ಲಿಯ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿವೆ.

ಪಾಕಿಸ್ತಾನ ಮತ್ತು ನೆದರ್ಲ್ಯಾಂಡ್ಸ್ ತಂಡಗಳ ವಿರುದ್ಧ ಅಜೇಯ ಅರ್ಧಶತಕಗಳನ್ನು ಗಳಿಸಿರುವ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‌ನಲ್ಲಿ ಪಂದ್ಯಾವಳಿಯಲ್ಲಿ ಇದುವರೆಗೆ ಅದ್ಭುತ ಫಾರ್ಮ್‌ನಲ್ಲಿದ್ದಾರೆ.

ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಮೆಲ್ಬೋರ್ನ್ ಕ್ರಿಕೆಟ್ ಗ್ರೌಂಡ್‌ನಲ್ಲಿ ನಡೆದ ಆರಂಭಿಕ ಪಂದ್ಯದಲ್ಲಿ ಪಾಕಿಸ್ತಾನದ ವಿರುದ್ಧ ಔಟಾಗದೆ 82 ರನ್ ಗಳಿಸಿದರು ಮತ್ತು ಸಿಡ್ನಿ ಕ್ರಿಕೆಟ್ ಮೈದಾನದಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಅಜೇಯ 62 ರನ್ ಗಳಿಸಿದರು. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಭಾರತದ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಹಲವು ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ.

ಎಲ್ಲಾ ಟಿ20 ವಿಶ್ವಕಪ್‌ಗಳಲ್ಲಿ ಇದುವರೆಗೆ 989 ರನ್ ಗಳಿಸಿರುವ ಭಾರತದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಲು 28 ರನ್‌ಗಳ ಅಗತ್ಯವಿದೆ. ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ 1016 ರನ್ ಗಳಿಸಿ ಸದ್ಯ ಮೊದಲ ಸ್ಥಾನದಲ್ಲಿದ್ದಾರೆ.

IND vs SA: Virat Kohli Needs 28 Runs To Create A Huge Record In T20 World Cup

ವಿರಾಟ್ ಕೊಹ್ಲಿ ಅವರು ದಕ್ಷಿಣ ಆಫ್ರಿಕಾ ವಿರುದ್ಧ 11 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದರೆ, ಮಹೇಲಾ ಜಯವರ್ಧನೆ ನಂತರ ಟಿ20 ವಿಶ್ವಕಪ್‌ನಲ್ಲಿ 1,000 ಅಥವಾ ಅದಕ್ಕಿಂತ ಹೆಚ್ಚು ರನ್ ಗಳಿಸಿದ ವಿಶ್ವದ ಎರಡನೇ ಬ್ಯಾಟ್ಸ್‌ಮನ್ ಮತ್ತು ಭಾರತದ ಮೊದಲ ಬ್ಯಾಟರ್ ಎನಿಸಿಕೊಳ್ಳುತ್ತಾರೆ.

33 ವರ್ಷ ವಯಸ್ಸಿನ ವಿರಾಟ್ ಕೊಹ್ಲಿ ಅವರು ಇದುವರೆಗೆ 23 ಟಿ20 ವಿಶ್ವಕಪ್ ಪಂದ್ಯಗಳನ್ನು ಆಡಿದ್ದಾರೆ, 89.9ರ ಅತ್ಯದ್ಭುತ ಸರಾಸರಿಯಲ್ಲಿ 12 ಅರ್ಧ ಶತಕಗಳನ್ನು ಒಳಗೊಂಡಂತೆ 989 ರನ್ ಗಳಿಸಿದ್ದಾರೆ.

ಟಿ20 ವಿಶ್ವಕಪ್ 2022: ಈತನ ಫಾರ್ಮ್ ಭಾರತಕ್ಕೆ ಕಳವಳಕಾರಿಯಾಗಿದೆ; ಸುನಿಲ್ ಗವಾಸ್ಕರ್

ಕಳೆದ ತಿಂಗಳು ಅಫ್ಘಾನಿಸ್ತಾನ ವಿರುದ್ಧ ಏಷ್ಯಾ ಕಪ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ಮೊದಲ ಟಿ20 ಶತಕ ದಾಖಲಿಸಿದ್ದರು. ಆಸ್ಟ್ರೇಲಿಯಾದ ಶ್ರೇಷ್ಠ ಮಾಜಿ ಕ್ರಿಕೆಟಿಗ ಗ್ರೆಗ್ ಚಾಪೆಲ್ ಕೂಡ ವಿರಾಟ್ ಕೊಹ್ಲಿಯನ್ನು ಹೊಗಳಿದ್ದು, ಪಾಕಿಸ್ತಾನ ವಿರುದ್ಧದ ಅವರ ಇನ್ನಿಂಗ್ಸ್ ಅನ್ನು "ದೇವರ ಹಾಡು' ಎಂದು ಬಣ್ಣಿಸಿದ್ದಾರೆ.

Story first published: Sunday, October 30, 2022, 10:16 [IST]
Other articles published on Oct 30, 2022
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+