ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

"ನಾನು ಭಿನ್ನವಾಗಿ ಮುನ್ನಡೆಸುತ್ತಿದ್ದೆ": ಕೆಎಲ್ ರಾಹುಲ್ ನಾಯಕತ್ವದ ಬಗ್ಗೆ ತುಟಿ ಬಿಚ್ಚಿದ ವಿರಾಟ್ ಕೊಹ್ಲಿ

Ind vs SA: Virat Kohli reserves special praise for his deputy KL Rahul said he trid his best

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯ ಆರಂಭವಾಗಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಟೆಸ್ಟ್ ತಂದ ಖಾಯಂ ನಾಯಕ ವಿರಾಟ್ ಕೊಹ್ಲಿ ಕಮ್‌ಬ್ಯಾಕ್ ಮಾಡಿದ್ದಾರೆ. ಬೆನ್ನುನೋವಿನ ಕಾರಣ ಜೊಹನ್ಸ್‌ಬರ್ಗ್‌ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದರು. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ನಾಯಕತ್ವದ ಹೊಣೆಗಾರಿಕೆ ಕೆಎಲ್ ರಾಹುಲ್ ಹೆಗಲೇರಿತ್ತು. ಆದರೆ ಈ ಪಂದ್ಯವನ್ನು ಭಾರತ 7 ವಿಕೆಟ್‌ಗಳ ಅಂತರದಿಂದ ಸೋತಿತ್ತು. ಹೀಗಾಗಿ ಕೆಎಲ್ ರಾಹುಲ್ ನಾಯಜತ್ವದ ಬಗ್ಗೆಯೂ ಸಾಕಷ್ಟು ಚರ್ಚೆಗಳು ನಡೆದಿದೆ. ಕೆಲ ಕ್ರಿಕೆಟ್ ವಿಶ್ಲೇಷಕರು ಕೆಎಲ್ ರಾಹುಲ್ ಬದಲಿಗೆ ಅಜಿಂಕ್ಯಾ ರಹಾನೆ ನಾಯಕನಾಗಿದ್ದರೆ ಉತ್ತಮವಿರುತ್ತಿತ್ತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಆದರೆ ಮೂರನೇ ಟೆಸ್ಟ್ ಪಂದ್ಯದ ಆರಂಭಕ್ಕೂ ಮುನ್ನ ಸ್ವತಃ ತಂಡದ ನಾಯಕ ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ. ನಾಯಕನಾಗಿ ಕೆಎಲ್ ರಾಹುಲ್ ಯಾವ ರೀತಿಯ ಪ್ರದರ್ಶನ ನೀಡಿದರು ಎಂಬ ಬಗ್ಗೆ ವಿರಾಟ್ ಕೊಹ್ಲಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್‌ಗೆ ಇಂದು ಹುಟ್ಟುಹಬ್ಬದ ಸಂಭ್ರಮ

ಕೆಎಲ್ ರಾಹುಲ್ ನಾಯಕತ್ವದ ಬಗ್ಗೆ ಕೊಹ್ಲಿ ಮಾತು

ಕೆಎಲ್ ರಾಹುಲ್ ನಾಯಕತ್ವದ ಬಗ್ಗೆ ಕೊಹ್ಲಿ ಮಾತು

ಟೀಮ್ ಇಂಡಿಯಾದ ಟೆಸ್ಟ್ ತಂಡದ ಖಾಯಂ ನಾಯಕ ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ನಾಯಕತ್ವವನ್ನು ಪ್ರಶಂಸಿಸಿದ್ದಾರೆ. ಕೆಎಲ್ ರಾಹುಲ್ ತಂಡವನ್ನು ಸಮತೋಲನವಾಗಿ ಮುನ್ನಡೆಸಿದ್ದಾರೆ ಎಂದು ಕೊಹ್ಲಿ ಶಬ್ಬಾಶ್‌ಗಿರಿ ನೀಡಿದ್ದಾರೆ. "ಆತ ತಂಡವನ್ನು ಸಮತೋಲಿತವಾಗಿ ಮುನ್ನಡೆಸಿದ್ದಾರೆ. ನಾನು ಕಂಡಂತೆ ಅವರ ಯೋಜನೆ ಮತ್ತು ಫೀಲ್ಡ್ ಪ್ಲೇಸ್‌ಮೆಂಟ್‌ಗಳಿಂದ ಅವರು ಎರಡನೇ ಇನ್ನಿಂಗ್ಸ್‌ನಲ್ಲಿ ವಿಕೆಟ್‌ಗಳನ್ನು ಪಡೆಯಲು ಮತ್ತು ಮೇಲುಗೈ ಸಾಧಿಸಲು ತಮ್ಮ ಅತ್ಯುತ್ತಮ ಪ್ರಯತ್ನವನ್ನು ಮಾಡಿದ್ದಾರೆ. ಆದರೆ ರನ್ ಬೆನ್ನಟ್ಟಲು ದಕ್ಷಿಣ ಆಫ್ರಿಕಾಗೆ ಉತ್ತಮ ಪರಿಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಇದಕ್ಕಿಂತ ಹೆಚ್ಚಾಗಿ ನಾಯಕ ಏನು ಮಾಡಬಹುದು ಎಂದು ನಾನು ಚಿಂತಿಸಲಾರೆ" ಎಂದು ವಿರಾಟ್ ಕೊಹ್ಲಿ ಕೆಎಕ್ ರಾಹುಲ್ ನಾಯಕತ್ವದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ನಾನು ಭಿನ್ನವಾಗಿ ಮುನ್ನಡೆಸುತ್ತಿದ್ದೆ

ನಾನು ಭಿನ್ನವಾಗಿ ಮುನ್ನಡೆಸುತ್ತಿದ್ದೆ

ಇನ್ನು ಜೊಹನ್ಸ್‌ಬರ್ಗ್‌ನ ವಾಂಡರರ್ಸ್ ಮೈದಾನದಲ್ಲಿ ನಡೆದ ಟೆಸ್ಟ್ ಸರಣಿಯ ಎರಡನೇ ಪಂದ್ಯದಲ್ಲಿ ತಾನು ನಾಯಕತ್ವ ವಹಿಸಿಕೊಂಡಿದ್ದರೆ ವಿಭಿನ್ನವಾಗಿ ಮುನ್ನಡೆಸುತ್ತಿದ್ದೆ ಎಂಬ ಅಂಶವನ್ನು ಕೂಡ ವಿರಾಟ್ ಕೊಹ್ಲಿ ಈ ಸಂದರ್ಭದಲ್ಲಿ ಹೇಳಿದ್ದಾರೆ. "ನಾಯಕತ್ವದಲ್ಲಿ ಪ್ರತಿಯೊಬ್ಬರು ಕೂಡ ವಿಭಿನ್ನವಾದ ಶೈಲಿಯನ್ನು ಹೊಂದಿರುತ್ತಾರೆ. ನಾನು ಕೂಡ ಸ್ವಲ್ಪ ಭಿನ್ನವಾಗಿ ಮಾಡಿರುತ್ತಿದ್ದೆ. ಆದರೆ ಉದ್ದೇಶ ಮಾತ್ರ ವಿಕೆಟ್ ಪಡೆಯುವುದು ಮಾತ್ರವೇ ಆಗಿರುತ್ತಿತ್ತು. ನನ್ನ ಪ್ರಕಾರ ರಾಹಿಲ್ ಸಮತೋಲಿತವಾಗಿ ಮುನ್ನಡೆಸಿದ್ದಾರೆ" ಎಂದು ವಿರಾಟ್ ಕೊಹ್ಲಿ ಕೆಎಲ್ ರಾಹುಲ್ ನಾಯಕತ್ವದ ಬಗ್ಗೆ ಮಾತನಾಡಿದ್ದಾರೆ.

ಮೊದಲ ಬಾರಿಗೆ ಟೆಸ್ಟ್ ತಂಡವನ್ನು ಮುನ್ನಡೆಸಿದ ರಾಹುಲ್

ಮೊದಲ ಬಾರಿಗೆ ಟೆಸ್ಟ್ ತಂಡವನ್ನು ಮುನ್ನಡೆಸಿದ ರಾಹುಲ್

ದಕ್ಷಿಣ ಆಪ್ರಿಕಾ ಟೆಸ್ಟ್ ಸರಣಿಗೆ ರೋಹಿತ್ ಶರ್ಮಾ ಫಿಟ್‌ನೆಸ್ ಕಾರಣದಿಂದ ಹೊರಗುಳಿದಿದ್ದಾರೆ. ಹೀಗಾಗಿ ಕೆಎಲ್ ರಾಹುಲ್ ಟೆಸ್ಟ್ ತಂಡದ ಉಪನಾಯಕನ ಜವಾಬ್ಧಾರಿ ವಹಿಸಿಕೊಂಡಿದ್ದಾರೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಲಭ್ಯವಾದ ಕಾರಣ ಕೆಎಲ್ ರಾಹುಲ್ ಭಾರತ ತಂಡವನ್ನು ಟೆಸ್ಟ್ ಮಾದರಿಯಲ್ಲಿ ಮೊಟ್ಟ ಮೊದಲ ಬಾರಿಗೆ ಮುನ್ನಡೆಸಿದ್ದಾರೆ. 29ರ ಹರೆಯದ ಕರ್ನಾಟಕ ಮೂಲಕ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತ ತಂಡವನ್ನು ಮುನ್ನಡೆಸಿದ 34ನೇ ಕ್ರಿಕೆಟರ್ ಎನಿಸಿದ್ದಾರೆ.

Pant out of 3rd Test? ಕುತೂಹಲ ಮೂಡಿಸಿದ ಸಾಹ ಟ್ವಿಟ್ಟರ್ ಪೋಸ್ಟ್:ಇವತ್ತು ಯಾರು ಇನ್ ಯಾರು ಔಟ್?|Oneindia Kannada
ಐಪಿಎಲ್‌ನಲ್ಲಿ ನಾಯಕತ್ವದ ಅನುಭವ

ಐಪಿಎಲ್‌ನಲ್ಲಿ ನಾಯಕತ್ವದ ಅನುಭವ

ಇನ್ನು ಕೆಎಲ್ ರಾಹುಲ್‌ ಇದಕ್ಕೂ ಮುನ್ನ ಐಪಿಎಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ ಅನುಭವ ಹೊಂದಿದ್ದಾರೆ. ಈ ಅವಧಿಯಲ್ಲಿ ತನ್ನಲ್ಲಿರುವ ನಾಯಕತ್ವದ ಗುಣವನ್ನು ವ್ಯಕ್ತಪಡಿಸಿರುವ ರಾಹುಲ್ ಬ್ಯಾಟಿಂಗ್‌ನಲ್ಲಿಯೂ ಉತ್ತಮವಾದ ಪ್ರದರ್ಶನ ನೀಡಲು ಸಫಲವಾಗಿದ್ದರು. 2020ರ ಆವೃತ್ತಿಯ ಐಪಿಎಲ್‌ನಲ್ಲಿ 14 ಪಂದ್ಯಗಳಲ್ಲಿ 55.83ರ ಸರಾಸರಿಯಲ್ಲಿ 670 ರನ್‌ಗಳಿಸಿ ಪ್ರತಿಷ್ಠಿತ ಆರೆಂಜ್ ಕ್ಯಾಪ್ ಪಡೆದುಕೊಂಡಿದ್ದಾರೆ.

Story first published: Tuesday, January 11, 2022, 16:07 [IST]
Other articles published on Jan 11, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X