ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind Vs SL 1st ODI: ಪ್ಲೇಯಿಂಗ್ XI ಆಯ್ಕೆಯೇ ದ್ರಾವಿಡ್, ರೋಹಿತ್ ಶರ್ಮಾಗೆ ತಲೆನೋವು

Ind Vs SL 1st ODI: Playing XI Selection Is Biggest Challenge For Rohit Sharma And Rahul Dravid For 1st ODI

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಗೆದ್ದಿರುವ ಟೀಂ ಇಂಡಿಯಾ, ಏಕದಿನ ಸರಣಿಗಾಗಿ ಸಜ್ಜಾಗುತ್ತಿದೆ. ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೂಲಕ ಭಾರತ 2023ರ ಏಕದಿನ ವಿಶ್ವಕಪ್‌ಗೆ ಸಿದ್ಧತೆ ಆರಂಭಿಸಲಿದೆ.

ಏಕದಿನ ಸರಣಿಯ ಮೊದಲನೇ ಪಂದ್ಯ ಜನವರಿ 10 ರಂದು ಮಂಗಳವಾರ ಗುವಾಹಟಿಯ ಬರ್ಸಾಪರಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಭಾರತ ಏಕದಿನ ತಂಡಕ್ಕೆ ಹಿರಿಯ ಆಟಗಾರರು ಮರಳಿದ್ದು, ಭಾರತ ಬಲಿಷ್ಠವಾಗಿದೆ.

ಸೂರ್ಯಕುಮಾರ್ ಚಿಕ್ಕವನಿದ್ದಾಗ ನನ್ನ ಬ್ಯಾಟಿಂಗ್ ನೋಡಿಲ್ಲ ಎಂದ ರಾಹುಲ್ ದ್ರಾವಿಡ್ಸೂರ್ಯಕುಮಾರ್ ಚಿಕ್ಕವನಿದ್ದಾಗ ನನ್ನ ಬ್ಯಾಟಿಂಗ್ ನೋಡಿಲ್ಲ ಎಂದ ರಾಹುಲ್ ದ್ರಾವಿಡ್

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವ ಯುವ ಪಡೆಯ ಕೆಲವು ಸದಸ್ಯರು ಏಕದಿನ ತಂಡದಲ್ಲೂ ಅವಕಾಶ ಪಡೆದಿದ್ದಾರೆ. ಭಾರತದ ಆಡುವ ಬಳಗದಲ್ಲಿ ಸ್ಥಾನ ಪಡೆಯಲು ಸಾಕಷ್ಟು ಪೈಪೋಟಿ ನಡೆಯುತ್ತಿದೆ.

ಮೊದಲನೇ ಏಕದಿನ ಪಂದ್ಯಕ್ಕಾಗಿ ಭಾರತ ತಂಡದ ಆಡುವ ಬಳಗವನ್ನು ಆಯ್ಕೆ ಮಾಡುವುದು ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್‌ಗೆ ತಲೆನೋವಾಗಿ ಪರಿಣಮಿಸಿದೆ.

ಅದರಲ್ಲೂ ಹಿರಿಯ ಆಟಗಾರರು ಮರಳಿ ಬಂದಿರುವುದರಿಂದ ಹಲವು ಯುವ ಕ್ರಿಕೆಟಿಗರು, ಅವರಿಗೆ ಸ್ಥಾನ ಬಿಟ್ಟುಕೊಡಲಿದ್ದಾರೆ. ಅದರೂ ಕೆಲವು ಸ್ಥಾನಗಳಿಗೆ ಮಾತ್ರ ಇನ್ನೂ ಪೈಪೋಟಿ ಇದ್ದು, ಯಾರಿಗೆ ಮಣೆ ಹಾಕುತ್ತಾರೆ ಎನ್ನುವ ಕುತೂಹಲವಿದೆ.

ನಾಲ್ಕನೇ ಕ್ರಮಾಂಕದಲ್ಲಿ ಆಡೋದ್ಯಾರು?

ನಾಲ್ಕನೇ ಕ್ರಮಾಂಕದಲ್ಲಿ ಆಡೋದ್ಯಾರು?

ವಿರಾಟ್ ಕೊಹ್ಲಿ ತಂಡದಲ್ಲಿ ಇರುವುದರಿಂದ ಮೂರನೇ ಕ್ರಮಾಂಕದಲ್ಲಿ ಆಡಲಿದ್ದಾರೆ, ಆದರೆ ನಾಲ್ಕನೇ ಕ್ರಮಾಂಕದಲ್ಲಿ ಆಡಲು ಸೂರ್ಯಕುಮಾರ್ ಯಾದವ್ ಮತ್ತು ಶ್ರೇಯಸ್ ಅಯ್ಯರ್ ನಡುವೆ ಪೈಪೋಟಿ ನಡೆಯಲಿದೆ.

ಶ್ರೀಲಂಕಾ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿರುವ ಸೂರ್ಯಕುಮಾರ್ ಯಾದವ್ ಏಕದಿನ ಮಾದರಿಯಲ್ಲಿ ಉತ್ತಮ ದಾಖಲೆ ಹೊಂದಿಲ್ಲ, ಹೊಸ ವರ್ಷಕ್ಕೆ ಮುನ್ನ ಅವರು ಈ ಬಾರಿ ಏಕದಿನ ಮಾದರಿಯಲ್ಲಿ ಉತ್ತಮ ಪ್ರದರ್ಶನ ನೀಡುವುದಾಗಿ ಹೇಳಿಕೊಂಡಿದ್ದರು

ಶ್ರೇಯಸ್ ಅಯ್ಯರ್ ಕೂಡ ಏಕದಿನ ಮತ್ತು ಟೆಸ್ಟ್ ಮಾದರಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. 2022ರಲ್ಲಿ ಏಕದಿನ ಮಾದರಿಯಲ್ಲಿ ಭಾರತ ತಂಡಕ್ಕಾಗಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. 15 ಇನ್ನಿಂಗ್ಸ್ ಆಡಿದ ಅವರು 724 ರನ್ ಗಳಿಸಿ ಮಿಂಚಿದ್ದಾರೆ. ಶ್ರೀಲಂಕಾ ವಿರುದ್ಧ ಮೊದಲನೇ ಏಕದಿನ ಪಂದ್ಯದಕ್ಕೆ ನಾಲ್ಕನೇ ಕ್ರಮಾಂಕದಲ್ಲಿ ಯಾರು ಆಡುತ್ತಾರೆ ಎನ್ನುವುದನ್ನು ನೋಡಬೇಕಿದೆ.

IND vs SL: ಈ ಮಾಜಿ ಆಟಗಾರನಿಂದಾಗಿ ನನ್ನ ಜೀವನದಲ್ಲಿ ದೊಡ್ಡ ಬದಲಾವಣೆಯಾಯಿತು; ಹಾರ್ದಿಕ್ ಪಾಂಡ್ಯ

ಶುಭಮನ್ ಗಿಲ್ ಅಥವಾ ಇಶಾನ್ ಕಿಶನ್

ಶುಭಮನ್ ಗಿಲ್ ಅಥವಾ ಇಶಾನ್ ಕಿಶನ್

ಏಕದಿನ ತಂಡಕ್ಕೆ ರೋಹಿತ್ ಶರ್ಮಾ ವಾಪಸಾಗಿರುವುದರಿಂದ ಅವರ ಜೊತೆ ಇನ್ನಿಂಗ್ಸ್ ಆರಂಭಿಸಲು ಶುಭಮನ್ ಗಿಲ್ ಮತ್ತು ಇಶಾನ್ ಕಿಶನ್ ನಡುವೆ ಪೈಪೋಟಿ ನಡೆಯಲಿದೆ.

ಬಾಂಗ್ಲಾದೇಶದ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಇಶಾನ್ ಕಿಶನ್ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಶುಭಮನ್ ಗಿಲ್ ಇದುವರೆಗೂ 15 ಏಕದಿನ ಪಂದ್ಯಗಳನ್ನಾಡಿದ್ದು, 55ಕ್ಕಿಂತ ಹೆಚ್ಚಿನ ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಸ್ಥಿರ ಪ್ರದರ್ಶನ ನೀಡಿರುವ ಕಾರಣ ಶುಭಮನ್ ಗಿಲ್ ಮೊದಲ ಆಯ್ಕೆಯಾಗಲಿದ್ದಾರೆ. ಕೆಎಲ್ ರಾಹುಲ್ ವಿಕೆಟ್ ಕೀಪಿಂಗ್ ಮಾಡುವುದರಿಂದ ಇಶಾನ್ ಕಿಶನ್ ಬೆಂಚ್‌ ಕಾಯಬೇಕಾಗಬಹುದು. ಒಂದು ವೇಳೆ ಎಡಗೈ ಬ್ಯಾಟರ್ ಅಗತ್ಯವಿದೆ ಎಂದರೆ ಇಶಾನ್ ಕಿಶನ್ ಆಯ್ಕೆಯಾಗಲಿದ್ದಾರೆ.

ಮರಳಿದ ಬುಮ್ರಾ, ಜಾಗ ಬಿಡೋರ್‍ಯಾರು?

ಮರಳಿದ ಬುಮ್ರಾ, ಜಾಗ ಬಿಡೋರ್‍ಯಾರು?

ಏಕದಿನ ಸರಣಿಗೆ ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್ ತಂಡಕ್ಕೆ ಮರಳಿದ್ದಾರೆ. ಈ ಮೂವರು ತಂಡದಲ್ಲಿ ಆಯ್ಕೆಯಾಗುವುದು ಖಚಿತವಾಗಿದೆ, ಅರ್ಷದೀಪ್ ಸಿಂಗ್ ಮತ್ತು ಉಮ್ರಾನ್ ಮಲಿಕ್ ಒಂದು ಸ್ಥಾನಕ್ಕಾಗಿ ಪೈಪೋಟಿ ನಡೆಸಲಿದ್ದಾರೆ.

ಸ್ಪಿನ್ ವಿಭಾಗದಲ್ಲಿ ಕೂಡ ಹಲವು ಆಯ್ಕೆಗಳಿದ್ದು, ವಾಷಿಂಗ್ಟನ್ ಸುಂದರ್, ಯುಜುವೇಂದ್ರ ಚಹಾಲ್, ಕುಲದೀಪ್ ಯಾದವ್ ಮತ್ತು ಅಕ್ಷರ್ ಪಟೇಲ್ ನಡುವೆ ತಂಡಕ್ಕೆ ಆಯ್ಕೆಯಾಗೋದು ಯಾರು ಎನ್ನುವ ಕುತೂಹಲವಿದೆ.

ಏಕದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್ , ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಶದೀಪ್ ಸಿಂಗ್.

Story first published: Monday, January 9, 2023, 5:35 [IST]
Other articles published on Jan 9, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X