
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದು ರೋಹಿತ್ ಶರ್ಮಾ ಜೊತಗೆ ಅದ್ಬುತ ಒತೆಯಾಟದಲ್ಲಿ ಭಾಗಿಯಾದ ಶುಬ್ಮನ್ ಗಿಲ್ ತಮ್ಮ ಪ್ರದರ್ಶನದ ಬಗ್ಗೆ ಸಂತಸ ಹಂಚಿಕೊಂಡಿದ್ದಾರೆ. ಮೊದಲ ಏಕದಿನ ಪಂದ್ಯದಲ್ಲಿ ಗಿಲ್ 70 ರನ್‌ಗಳ ಕೊಡುಗೆ ನೀಡಿದ್ದು ಮೊದಲ ವಿಕೆಟ್‌ಗೆ ನಾಯಕ ರೋಹಿತ್ ಶರ್ಮಾ ಜೊತೆಗೆ ಭರ್ಜರಿ 143 ರನ್‌ಗಳ ಜೊತೆಯಾಟದಲ್ಲಿ ಭಾಗಿಯಾದರು. ಬ್ಯಾಟಿಂಗ್ ಪ್ರದರ್ಶನದ ಬಗ್ಗೆ ಮಾತನಾಡಿದ ಶುಬ್ಮನ್ ಗಿಲ್ ನಾಯಕನಿಂದ ದೊರೆತ ಬೆಂಬಲ ಅದ್ಭುತವಾಗಿತ್ತು ಎಂದಿದ್ದಾರೆ.
ನಾಯಕ ರೋಹಿತ್ ಶರ್ಮಾ ಅವರಿಂದ ದೊರೆತ ಬೆಂಬಲ ಅದ್ಭುತವಾಗಿತ್ತು. ನಾಯಕನಿಂದಲೇ ಈ ರೀತಿ ದೊರೆತ ಬೆಂಬಲ ನಿಜಕ್ಕೂ ಉತ್ತಮ ಅನುಭವ ಉಂಟು ಮಾಡಿದೆ ಎಂದಿದ್ದಾರೆ ಶುಬ್ಮನ್ ಗಿಲ್. ಇದೇ ಸಂದರ್ಭದಲ್ಲಿ ಅವರು ಕೋಚ್ ರಾಹುಲ್ ದ್ರಾವಿಡ್ ಅವರು ಕೂಡ ತನ್ನ ಸ್ವಾಭಾವಿಕ ಆಟವನ್ನು ಆಡುವಂತೆ ಸಲಹೆ ನೀಡಿದ್ದರು ಎಂದಿದ್ದಾರೆ ಗಿಲ್.
ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಮಾಜಿ ನಾಯಕ ವಿರಾಟ್ ಕೊಹ್ಲಿ ಅಮೋಘ ಶತಕ ಸಿಡಿಸಿದ್ದರೆ ರೋಹಿತ್ ಶರ್ಮಾ ಹಾಗೂ ಶುಬ್ಮನ್ ಗಿಲ್ ಅರ್ಧ ಶತಕ ಸಿಡಿಸಿ ಮಿಂಚಿದ್ದರು. ಬಳಿಕ ಬೌಲಿಂಗ್‌ನಲ್ಲಿ ಉಮ್ರಾನ್ ಮಲಿಕ್ ಮೂರು ವಿಕೆಟ್ ಕಬಳಿಸಿದರು. ಶ್ರೀಲಂಕಾ ನಾಯಕ ದಸುನ್ ಶತಕ ಅದ್ಭುತ ಪ್ರದರ್ಶನ ನೀಡಿ ಶತಕ ಸಿಡಿಸಿದರಾದರೂ ಭಾರತ 67 ರನ್‌ಗಳ ಅಂತರದ ಗೆಲುವು ಸಾಧಿಸಿದ್ದು ಏಕದಿನ ಸರಣಿಯಲ್ಲಿ ಮುನ್ನಡೆ ಸಾಧಿಸಿದೆ.
ಇನ್ನು ಈ ಪಂದ್ಯದಲ್ಲಿ ಇಶಾನ್ ಕಿಶನ್ ಬದಲಿಗೆ ಶುಬ್ಮನ್ ಗಿಲ್‌ಗೆ ಆರಂಭಿಕನಾಗಿ ಆಡುವ ಅವಕಾಶ ದೊರೆಯಲಿದೆ ಎಂಬುದನ್ನು ನಾಯಕ ರೋಹಿತ್ ಶರ್ಮಾ ಮೊದಲೇ ಬಹಿರಂಗಪಡಿಸಿದ್ದರು. ಬಹಳ ಸಮಯದಿಂದ ಗಿಲ್ ಸ್ಥಿರ ಪ್ರದರ್ಶನ ನಿಡಿಕೊಂಡು ಬರುತ್ತಿರುವ ಕಾರಣ ಆತನಿಗೆ ಅವಕಾಶ ನೀಡುವುದು ನ್ಯಾಯ ಎಂದಿದ್ದರು. ಆದರೆ ಕಳೆದ ಹಿಂದಿನ ಪಂದ್ಯದಲ್ಲಿ ದ್ವಿಶತಕ ಸಿಡಿಸಿದ್ದ ಇಶಾನ್ ಕಿಶಣ್‌ಗೆ ಅವಕಾಶ ದೊರೆಯದ ಬಗ್ಗ ಸಾಕಷ್ಟು ಟೀಕೆಗಳು ಕೂಡ ವ್ಯಕ್ತವಾಗಿತ್ತು.
:ತಂಡದ ನಾಯಕನೇ ಇಮಗೆ ಬೆಂಬಲ ನೀಡುವಾಗ ಬಹಳ ವಿಶೇಷ ಅನುಭವವಾಗುತ್ತದೆ. ಅಭ್ಯಾಸದಲ್ಲಿ ಕೂಡ ನಾನು ಸಂವಾದವನ್ನು ನಡೆಸಿದ್ದೆ. ಕೋಚ್ ರಾಹುಲ್ ದ್ರಾವಿಡ್ ಅವರು ಕೂಡ ನನ್ನ ಸ್ವಾಭಾವಿಕ ಆಟವನ್ನು ಆಡುವಂತೆ ಸಲಹೆ ನೀಡಿದ್ದರು. ಈ ಹಿಂದೆ ಏಕದಿನ ಮಾದರಿಯಲ್ಲಿ ಏನು ಮಾಡಿದ್ದೆನೋ ಅದನ್ನೇ ಮುಂದುವರಿಸಿದೆ ಎಂದಿದ್ದಾರೆ ಶುಬ್ಮನ್ ಗಿಲ್.
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
ಬೆಂಚ್: ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಇಶಾನ್ ಕಿಶನ್, ಅರ್ಷದೀಪ್ ಸಿಂಗ್
ಶ್ರೀಲಂಕಾ ಆಡುವ ಬಳಗ: ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಧನಂಜಯ ಡಿ ಸಿಲ್ವ, ಚರಿತ್ ಅಸಲಂಕ, ದಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶಾನ್ ಮಧುಶಂಕ
ಬೆಂಚ್: ಮಹೇಶ್ ತೀಕ್ಷಣ, ಲಹಿರು ಕುಮಾರ, ಅಶೇನ್ ಬಂಡಾರ, ನುವಾನಿಡು ಫೆರ್ನಾಂಡೋ, ಪ್ರಮೋದ್ ಮದುಶನ್, ಜೆಫ್ರಿ ವಂಡರ್ಸೆ, ಸದೀರ ಸಮರವಿಕ್ರಮ