ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind vs SL 1st T20 : ಪಂದ್ಯ ಸೋತರೂ ಪರವಾಗಿಲ್ಲ! ಪಂದ್ಯ ಗೆದ್ದ ಬಳಿಕ ಹಾರ್ದಿಕ್ ಪಾಂಡ್ಯ ಅಚ್ಚರಿಯ ಹೇಳಿಕೆ

Ind vs SL 1st T20: Hardik Pandya Surprising Statement After Win First T20I

ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಮೊದಲನೇ ಪಂದ್ಯವನ್ನು ರೋಚಕವಾಗಿ ಗೆಲ್ಲುವ ಮೂಲಕ ಟೀಂ ಇಂಡಿಯಾ 2023 ಅಭಿಯಾನವನ್ನು ಆರಂಭಿಸಿದೆ.

ಮಂಗಳವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ 2 ರನ್‌ಗಳ ರೋಚಕ ಜಯ ಸಾಧಿಸಿತು. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 162 ರನ್ ಗಳಿಸಿತು. ದೀಪಕ್ ಹೂಡಾ 23 ಎಸೆತಗಳಲ್ಲಿ 41 ರನ್ ಗಳಿಸಿ ಮಿಂಚಿದರು.

ಈ ಮೊತ್ತವನ್ನು ಬೆನ್ನತ್ತಿದ ಶ್ರೀಲಂಕಾ 20 ಓವರ್ ಗಳಲ್ಲಿ 160 ರನ್‌ಗಳಿಗೆ ಆಲೌಟ್ ಆಗುವ 2 ರನ್‌ಗಳ ರೋಚಕ ಸೋಲು ಕಂಡಿತು. ಶಿವಂ ಮಾವಿ ಚೊಚ್ಚಲ ಪಂದ್ಯದಲ್ಲೇ 4 ವಿಕೆಟ್ ಪಡೆಯುವ ಮೂಲಕ ಮಿಂಚಿದರು. ಉಮ್ರಾನ್ ಮಲಿಕ್ ತಮ್ಮ ವೇಗದ ಬೌಲಿಂಗ್‌ನಿಂದ ಶ್ರೀಲಂಕಾ ಬ್ಯಾಟರ್ ಗಳನ್ನು ಕಟ್ಟಿಹಾಕಿದರು.

ಈ ಅರ್ಹತೆ ಹೊಂದಿದ್ದರೆ ಮಾತ್ರ ಪಾಕಿಸ್ತಾನ ಟಿ20 ತಂಡಕ್ಕೆ ಆಯ್ಕೆ: ಶಾಹಿದ್ ಅಫ್ರಿದಿ ಮಹತ್ವದ ನಿರ್ಧಾರಈ ಅರ್ಹತೆ ಹೊಂದಿದ್ದರೆ ಮಾತ್ರ ಪಾಕಿಸ್ತಾನ ಟಿ20 ತಂಡಕ್ಕೆ ಆಯ್ಕೆ: ಶಾಹಿದ್ ಅಫ್ರಿದಿ ಮಹತ್ವದ ನಿರ್ಧಾರ

23 ಎಸೆತಗಳಲ್ಲಿ 1 ಬೌಂಡರಿ 4 ಸಿಕ್ಸರ್ ಸಹಿತ ಅಜೇಯ 41 ರನ್‌ ಗಳಿಸಿ ಭಾರತ ಸವಾಲಿನ ಮೊತ್ತ ಕಲೆಹಾಕಲು ಸಹಾಯ ಮಾಡಿದ ದೀಪಕ್ ಹೂಡಾ ಪಂದ್ಯದ ಆಟಗಾರ ಪ್ರಶಸ್ತಿ ಪಡೆದುಕೊಂಡರು. ಈ ಗೆಲುವಿನ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.

ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ಹಾರ್ದಿಕ್ ಪಾಂಡ್ಯ ಪಂದ್ಯವನ್ನು ಸೋತಿದ್ದರೂ ಹೆಚ್ಚು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಹೇಳಿದರು.

ಸೋತಿದ್ದರೂ ತಲೆಕೆಡಿಸಿಕೊಳ್ಳಲ್ಲ

ಸೋತಿದ್ದರೂ ತಲೆಕೆಡಿಸಿಕೊಳ್ಳಲ್ಲ

ಪಂದ್ಯ ಮುಗಿದ ನಂತರ ಮಾತನಾಡಿದ ಟೀಂ ಇಂಡಿಯಾ ನಾಯಕ ಹಾರ್ದಿಕ್ ಪಾಂಡ್ಯ, "ಒಂದೆರಡು ಪಂದ್ಯಗಳನ್ನು ಸೋತರೂ ಪರವಾಗಿಲ್ಲ, ಒತ್ತಡದಲ್ಲಿ ಗೆಲುವು ಸಾಧಿಸುವಂತೆ ತಂಡವನ್ನು ಸಿದ್ಧಪಡಿಸಲು ಬಯಸುತ್ತೇನೆ. " ಎಂದು ಹೇಳಿದರು.

2024ರ ಟಿ20 ವಿಶ್ವಕಪ್‌ಗಾಗಿ ಭಾರತ ತಂಡವನ್ನು ಈಗಿನಿಂದಲೇ ಸಜ್ಜುಗೊಳಿಸುತ್ತಿದೆ. ಹಾರ್ದಿಕ್ ಪಾಂಡ್ಯ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಪಾಂಡ್ಯ ನಾಯಕತ್ವದಲ್ಲಿ ಭಾರತ ಯುವ ಪಡೆ ಶ್ರೀಲಂಕಾ ವಿರುದ್ಧದ ಸರಣಿ ಗೆಲ್ಲುವ ವಿಶ್ವಾಸದಲ್ಲಿದೆ.

ಒತ್ತಡದಲ್ಲಿ ಪ್ರದರ್ಶನ ನೀಡಬೇಕು

ಒತ್ತಡದಲ್ಲಿ ಪ್ರದರ್ಶನ ನೀಡಬೇಕು

ಎಲ್ಲಾ ಪಂದ್ಯಗಳಲ್ಲಿ ಸುಲಭವಾಗಿ ಜಯಿಸುವುದು ಸಾಧ್ಯವಿಲ್ಲ. ಆಟಗಾರರು ಈ ರೀತಿಯ ಒತ್ತಡದ ಪಂದ್ಯಗಳಲ್ಲಿ ಕೂಡ ಗೆಲ್ಲುವ ಸಾಮರ್ಥ್ಯ ಹೊಂದಿರಬೇಕು, ಒಂದೆರಡು ಪಂದ್ಯಗಳಲ್ಲಿ ಸೋತರೂ ಪರವಾಗಿಲ್ಲ. ಆದರೆ, ಇಂತಹ ಪಂದ್ಯಗಳನ್ನು ಗೆಲ್ಲಲು ತಂಡ ಸಿದ್ಧವಾಗಬೇಕು ಎಂದು ಪಾಂಡ್ಯ ಹೇಳಿದರು.

"ಇಂತಹ ಕಷ್ಟಕರ ಸಂದರ್ಭಗಳಲ್ಲಿ ಆಡುವುದು ನಮಗೆ ದೊಡ್ಡ ಪಂದ್ಯಗಳಲ್ಲಿ ಸಹಾಯ ಮಾಡುತ್ತದೆ, ದ್ವಿಪಕ್ಷೀಯ ಸರಣಿಗಳು ನಮಗೆ ಸಿದ್ಧವಾಗಲು ಉತ್ತಮ ಅವಕಾಶಗಳಾಗಿವೆ.ಇಲ್ಲಿ ಕೆಲವು ಪಂದ್ಯಗಳನ್ನು ಸೋತರೂ ಪರವಾಗಿಲ್ಲ, ದೊಡ್ಡ ಪಂದ್ಯಾವಳಿಗಳಿಗೆ ಸಿದ್ಧವಾಗುವುದು ಮುಖ್ಯವಾಗಿದೆ" ಎಂದು ಹೇಳಿದರು.

ಹಾರ್ದಿಕ್ ಪಾಂಡ್ಯ ಅಚ್ಚರಿಯ ನಿರ್ಧಾರ

ಹಾರ್ದಿಕ್ ಪಾಂಡ್ಯ ಅಚ್ಚರಿಯ ನಿರ್ಧಾರ

ಶ್ರೀಲಂಕಾ ತಂಡಕ್ಕೆ ಕೊನೆಯ ಓವರ್‌ನಲ್ಲಿ ಗೆಲುವಿಗಾಗಿ 13 ರನ್ ಅಗತ್ಯವಿತ್ತು, ಹಾರ್ದಿಕ್ ಪಾಂಡ್ಯಗೆ ಇನ್ನೂ ಒಂದು ಓವರ್ ಮಾಡುವುದು ಬಾಕಿ ಇತ್ತು, ಎಲ್ಲರೂ ಪಾಂಡ್ಯ ಬೌಲಿಂಗ್ ಮಾಡುತ್ತಾರೆ ಎಂದು ನಂಬಿದ್ದರು, ಆದರೆ ಪಾಂಡ್ಯ ಅಕ್ಷರ್ ಪಟೇಲ್‌ಗೆ ಕೊನೆಯ ಓವರ್ ಬೌಲಿಂಗ್ ಮಾಡಲು ಕೇಳಿದರು.

ನಾಯಕನ ನಂಬಿಕೆಯನ್ನು ಉಳಿಸಿಕೊಂಡ ಅಕ್ಷರ್ ಪಟೇಲ್‌ ಭಾರತಕ್ಕೆ 2 ರನ್‌ಗಳ ರೋಚಕ ಜಯ ತಂದುಕೊಟ್ಟರು.

Story first published: Wednesday, January 4, 2023, 8:02 [IST]
Other articles published on Jan 4, 2023
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X