
ಟೆಸ್ಟ್ ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್‌ಸ್ವೀಪ್
ಅನಂತರ ಟೆಸ್ಟ್ ಪಂದ್ಯಗಳಲ್ಲಿ ಕೆಎಲ್ ನಾಯಕತ್ವದ ಪ್ರವಾಸಿ ಭಾರತ ತಂಡ ಬಾಂಗ್ಲಾದೇಶದ ವಿರುದ್ಧ ತಮ್ಮ ಅಜೇಯ ದಾಖಲೆಯನ್ನು ಮುಂದುವರೆಸಿತು ಮತ್ತು ಎರಡೂ ಪಂದ್ಯಗಳನ್ನು ಗೆದ್ದು ಸರಣಿಯನ್ನು 2-0 ಅಂತರದಲ್ಲಿ ಕ್ಲೀನ್‌ಸ್ವೀಪ್ ಮಾಡಿತು.
ಚಟ್ಟೋಗ್ರಾಮ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ 188 ರನ್‌ಗಳ ಆರಾಮದಾಯಕ ಜಯದ ನಂತರ, ಢಾಕಾದ ಮೀರ್‌ಪುರದಲ್ಲಿ ಭಾನುವಾರ (ಡಿಸೆಂಬರ್ 25) ಭಾರತವು ಮೂರು ವಿಕೆಟ್‌ಗಳ ರೋಚಕ ಗೆಲುವನ್ನು ದಾಖಲಿಸಿತು.
ನಾಲ್ಕನೇ ಇನ್ನಿಂಗ್ಸ್‌ನಲ್ಲಿ ಒಟ್ಟು 145 ರನ್‌ಗಳನ್ನು ಬೆನ್ನಟ್ಟಿದ ಭಾರತ, 30 ಓವರ್‌ಗಳಲ್ಲಿ 74 ರನ್‌ಗೆ 7 ವಿಕೆಟ್ ಕಳೆದುಕೊಂಡು ತೀವ್ರ ಸಂಕಷ್ಟಕ್ಕೆ ಸಿಲುಕಿತ್ತು. ಆದರೆ, ಶ್ರೇಯಸ್ ಅಯ್ಯರ್ ಮತ್ತು ರವಿಚಂದ್ರನ್ ಅಶ್ವಿನ್ ಇಬ್ಬರೂ ದೃಢವಾಗಿ ನಿಂತು 71 ರನ್‌ಗಳ ಅಜೇಯ ಜೊತೆಯಾಟವನ್ನು ನೀಡಿ ಭಾರತವನ್ನು ಗೆಲ್ಲಿಸಿದರು.

ಟೀಂ ಇಂಡಿಯಾದ ಟಿ20 ತಂಡಕ್ಕೆ ಹಾರ್ದಿಕ್ ಪಾಂಡ್ಯ ನಾಯಕ
ಸದ್ಯಕ್ಕೆ ವಜಾಗೊಂಡಿರುವ ಚೇತನ್ ಶರ್ಮಾ ನೇತೃತ್ವದ ಬಿಸಿಸಿಐನ ಆಯ್ಕೆ ಸಮಿತಿಯು ಮಂಗಳವಾರ (ಡಿಸೆಂಬರ್ 27) ಮೂರು ಟಿ20 ಮತ್ತು ಮೂರು ಏಕದಿನ ಪಂದ್ಯಗಳಿಗೆ ಭಾರತದ ಎರಡು ವಿಭಿನ್ನ ತಂಡಗಳನ್ನು ಆಯ್ಕೆ ಮಾಡಿದೆ.
ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಸೇರಿದಂತೆ ಹಿರಿಯ ಆಟಗಾರರು ಟಿ20 ತಂಡದಿಂದ ವಿಶ್ರಾಂತಿ ಪಡೆದಿರುವುದರಿಂದ, ಹಾರ್ದಿಕ್ ಪಾಂಡ್ಯ ಚುಟುಕು ಕ್ರಿಕೆಟ್‌ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ. ಮತ್ತೊಂದೆಡೆ, ರೋಹಿತ್ ಶರ್ಮಾ ಮುಂದಿನ ವರ್ಷ 50 ಓವರ್‌ಗಳ ವಿಶ್ವಕಪ್‌ಗೆ ಭಾರತದ ಸಿದ್ಧತೆಯನ್ನು ಮುಂದುವರಿಸಲಿದ್ದಾರೆ ಮತ್ತು ಶ್ರೀಲಂಕಾ ವಿರುದ್ಧದ ಏಕದಿನ ತಂಡವನ್ನು ಮುನ್ನಡೆಸಲು ಮರಳಲಿದ್ದಾರೆ.

ಶಿಖರ್ ಧವನ್ ಮತ್ತು ರಿಷಭ್ ಪಂತ್ ಕೈಬಿಡಲಾಗಿದೆ
ಆದಾಗ್ಯೂ, ಎರಡೂ ತಂಡಗಳ ಪ್ರಕಟಣೆಗಳಿಂದ ಕೆಲವು ಆಟಗಾರರಿಗೆ ಕೋಕ್ ನೀಡಲಾಗಿದೆ. ಪ್ರಮುಖವಾದವುಗಳಲ್ಲಿ ಸ್ಟಾರ್ ಎಡಗೈ ಆಟಗಾರರಾದ ಶಿಖರ್ ಧವನ್ ಮತ್ತು ರಿಷಭ್ ಪಂತ್ ಅವರನ್ನು ಏಕದಿನ ಪಂದ್ಯಗಳಿಂದ ಕೈಬಿಡಲಾಗಿದೆ.
ಕೆಎಲ್ ರಾಹುಲ್ ಅವರಿಗೆ ಮದುವೆ ರಜೆ ನೀಡಲಾಗಿದ್ದು, ಮೂರು ಟಿ20 ಪಂದ್ಯಗಳನ್ನು ಕಳೆದುಕೊಳ್ಳಲಿದ್ದಾರೆ. ಯುವ ವೇಗಿಗಳಾದ ಮುಖೇಶ್ ಕುಮಾರ್ ಮತ್ತು ಶಿವಂ ಮಾವಿ ಟಿ20 ಪಂದ್ಯಗಳಿಗೆ ಮೊದಲ ಬಾರಿ ಭಾರತ ತಂಡದಿಂದ ಕರೆ ಸ್ವೀಕರಿಸಿದ್ದಾರೆ.

ಟಿ20 ಸರಣಿಗೆ ಭಾರತ ಮತ್ತು ಶ್ರೀಲಂಕಾ ತಂಡಗಳು
ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ಪೂರ್ಣ ತಂಡ
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಶ್‌ದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.
ಭಾರತದ ವಿರುದ್ಧದ ಸರಣಿಗೆ ಶ್ರೀಲಂಕಾ ಪೂರ್ಣ ತಂಡ
ದಸುನ್ ಶನಕ (ನಾಯಕ), ಪಾತುಮ್ ನಿಸ್ಸಾಂಕ, ಅವಿಷ್ಕ ಫೆರ್ನಾಂಡೋ, ಸದೀರ ಸಮರವಿಕ್ರಮ, ಕುಸಾಲ್ ಮೆಂಡಿಸ್, ಭಾನುಕಾ ರಾಜಪಕ್ಸೆ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ವನಿಂದು ಹಸರಂಗಾ, ಅಶೆನ್ ಬಂಡಾರ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಚಾಮಿಕ ಕರುಣಾರತ್ನೆ, ದಿಲ್ಶಾನ್ ಮಧುಶಂಕ, ಕಸುನ್ ರಜಿತ, ನುವಾನಿಡು ಫೆರ್ನಾಂಡೋ, ದುನಿತ್ ವೆಲ್ಲಲಾಗೆ, ಪ್ರಮೋದ್ ಮದುಶನ್, ಲಹಿರು ಕುಮಾರ, ನುವಾನ್ ತುಷಾರ.


Click it and Unblock the Notifications
