ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ ಪ್ರಥಮ ಟಿ20: ಪಂದ್ಯದ ಆರಂಭ, ನೇರಪ್ರಸಾರ ಹಾಗೂ ಸಂಭಾವ್ಯ ಪ್ಲೇಯಿಂಗ್ XI

Ind vs SL 1st T20I: Live Streaming and Live Telecast details, Possible Playing 11 info

ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಗೆ ಕ್ಷಣಗಣನೆ ಆರಂಭವಾಗಿದೆ. ಒಂದೆಡೆ ಭಾರತ ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯನ್ನು ವೈಟ್‌ವಾಶ್ ಮಾಡಿದ ಉತ್ಸಾಹದಲ್ಲಿದ್ದರೆ ಮತ್ತೊಂದೆಡೆ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಶ್ರೀಲಂಕಾ 1-4 ಅಂತರದಿಂದ ಸರಣಿ ಸೋತು ಹಿನ್ನಡೆ ಅನುಭವಿಸಿತ್ತು. ಆದರೆ ಈ ಸರಣಿಯಲ್ಲಿನ ಅಂತಿಮ ಪಂದ್ಯದ ಗೆಲುವು ಲಂಕಾ ಪಡೆಗೆ ಉತ್ಸಾಹ ಹೆಚ್ಚಿಸಿದೆ. ಭಾರತ ಹಾಗೂ ಶ್ರೀಲಂಕಾ ಎರಡು ತಂಡಗಳು ಕೂಡ ಈಗಾಗಲೇ ಲಕ್ನೋಗೆ ಬಂದಿಳಿದಿದ್ದು ಅಂತಿಮ ಹಂತದ ಸಿದ್ಧತೆ ನಡೆಸುತ್ತಿದೆ.

ಇನ್ನು ಭಾರತ ಹಾಗೂ ಶ್ರೀಲಂಕಾ ಎರಡು ತಂಡಗಳು ಕೂಡ ಈ ಸರಣಿಯಲ್ಲಿ ಕೆಲ ಪ್ರಮುಖ ಆಟಗಾರರ ಸೇವೆಯಿಂದ ವಂಚಿತವಾಗಲಿದೆ. ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್‌ಗೆ ಟಿ20 ಸರಣಿಯಿಂದ ವಿಶ್ರಾಂತಿ ನೀಡಿದ್ದರೆ ದೀಪಕ್ ಚಾಹರ್, ಸೂರ್ಯಕುಮಾರ್ ಯಾದವ್ ಗಾಯದ ಕಾರಣದಿಂದ ಸರಣಿಯಿಂದ ಹೊರಬಿದ್ದಿದ್ದಾರೆ. ಕೆಎಲ್ ರಾಹುಲ್ ಕೂಡ ಈ ಸರಣಿಗೆ ಅಲಭ್ಯವಾಗಿದ್ದಾರೆ. ಇತ್ತ ಶ್ರೀಲಂಕಾ ತಂಡದ ಪ್ರಮುಖ ಆಟಗಾರ ವನಿಂದು ಹಸರಂಗ ಕೋವಿಡ್‌ನಿಂದ ಸಂಪೂರ್ಣ ಚೇತರಿಕೆ ಕಾಣದ ಕಾರಣ ಸಂಪೂರ್ಣ ಟಿ20 ಸರಣಿಗೆ ಅಲಭ್ಯವಾಗಲಿದ್ದಾರೆ ಎನ್ನಲಾಗಿದೆ.

ಇದೆಲ್ಲದರ ಮಧ್ಯೆ ಭಾರತ ಹಾಗೂ ಶ್ರೀಲಂಕಾ ತಂಡಗಳು ಗುರುವಾರ ನಡೆಯಲಿರುವ ಮೊದಲ ಪಂದ್ಯಕ್ಕೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗಿದೆ. ಹಾಗಾದರೆ ಈ ಪಂದ್ಯದ ಕೆಲ ಪ್ರಮುಖ ಮಾಹಿತಿಗಳನ್ನು ಈ ವರದಿಯಲ್ಲಿ ನೋಡೋಣ. ಮುಂದೆ ಓದಿ..

ಪಂದ್ಯದ ಮಾಹಿತಿ

ಪಂದ್ಯದ ಮಾಹಿತಿ

ದಿನಾಂಕ ಮತ್ತು ಸಮಯ: ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಫೆಬ್ರವರಿ 24 ಗುರುವಾರದಂದು ನಡೆಯಲಿದೆ. ಸಮಯ ಭಾರತೀಯ ಕಾಲಮಾನ ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು 6:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರಪ್ರಸಾರ ಹಾಗೂ ಲೈವ್‌ಸ್ಟ್ರೀಮಿಂಗ್: ಇನ್ನು ಈ ಪಂದ್ಯದ ನೇರಪ್ರಸಾರವನ್ನು ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್ ಮಾಡಲಿದೆ. ಅಲ್ಲದೆ ಡಿಸ್ನಿ+ಹಾಟ್‌ಸ್ಟಾರ್‌ ಚಂದಾದಾರರು ಕೂಡ ಈ ಪಂದ್ಯವನ್ನು ಸ್ಟ್ರೀಮಿಂಗ್ ಮೂಲಕ ವೀಕ್ಷಿಸಲು ಅವಕಾಶವಿದೆ.

ತಂಡಗಳ ಮಾಹಿತಿ

ತಂಡಗಳ ಮಾಹಿತಿ

ಭಾರತ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್
ಶ್ರೀಲಂಕಾ ಸ್ಕ್ವಾಡ್: ದಸುನ್ ಶನಕಾ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಚರಿತ್ ಅಸಲಂಕ (ಉಪನಾಯಕ), ದಿನೇಶ್ ಚಾಂಡಿಮಾಲ್, ದನುಷ್ಕ ಗುಣತಿಲಕ, ಕಮಿಲ್ ಮಿಶ್ರಾ, ಜನಿತ್ ಲಿಯಾನಗೆ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಲಹಿರು ಎಫ್ ಕುಮಾರ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಆಶಿಯನ್ ಡೇನಿಯಲ್

ಆಸ್ಟ್ರೇಲಿಯಾ ಲೀಗ್ ಆಡೋಕೆ ನಾವ್ ರೆಡಿ ! ರೈನಾ ಭಾವುಕ ವೀಡಿಯೋ ವೈರಲ್ !! | Oneindia Kannada
ಸಂಭಾವ್ಯ ಪ್ಲೇಯಿಂಗ್ XI

ಸಂಭಾವ್ಯ ಪ್ಲೇಯಿಂಗ್ XI

ಭಾರತ: ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (WK), ಶೈರಿಯಾಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ, ಯುಜ್ವೇಂದ್ರ ಚಾಹಲ್.
ಶ್ರೀಲಂಕಾ ಪ್ಲೇಯಿಂಗ್ XI: ಪಾತುಮ್ ನಿಸಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಕಮಿಲ್ ಮಿಶ್ರಾ, ಚರಿತ್ ಅಸಲಂಕಾ, ಜನಿತ್ ಲಿಯಾನಗೆ, ದಸುನ್ ಶನಕ (ನಾಯಕ), ದುಷ್ಮಂತ ಚಮೀರ, ಪ್ರವೀಣ್ ಜಯವಿಕ್ರಮ, ಮಹೇಶ್ ತೀಕ್ಷಣ, ಲಹಿರು ಕುಮಾರ.

Story first published: Wednesday, February 23, 2022, 14:25 [IST]
Other articles published on Feb 23, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X