ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ ಪ್ರಥಮ ಟಿ20: ಲಕ್ನೋ ಪಿಚ್ ರಿಪೋರ್ಟ್, ಹವಾಮಾನ ವರದಿ, ಅಂಕಿಅಂಶಗಳು

Ind vs SL 1st T20I: Lucknow Atal Bihari Vajpayee Stadium Pitch Report, Weather report and T20 Stats

ಭಾರತ ಹಾಗೂ ಶ್ರೀಲಂಕಾ ನಡುವಿನ ಟಿ20 ಸರಣಿಗೆ ಈಗ ಕ್ಷಣಗಣನೆ ಆರಂಭವಾಗಿದೆ. ಒಂದೆಡೆ ಭಾರತ ವೆಸ್ಟ್ ಇಂಡೀಸ್ ವಿರುದ್ಧದ ಟಿ0 ಸರಣಿಯನ್ನು ವೈಟ್‌ವಾಶ್ ಮಾಡಿದ ಉತ್ಸಾಹದಲ್ಲಿದ್ದರೆ ಮತ್ತೊಂದೆಡೆ ಆಸ್ಟ್ರೇಲಿಯಾ ಪ್ರವಾಸ ಕೈಗೊಂಡಿದ್ದ ಶ್ರೀಲಂಕಾ 1-4 ಅಂತರದಿಂದ ಸರಣಿ ಸೋತು ಭಾರತ ಪ್ರವಾಸಕ್ಕೆ ಸಜ್ಜಾಗಿದೆ. ಈ ಎರಡು ತಂಡಗಳು ಕೂಡ ಮುಂದಿನ ಗುರುವಾರದಿಂದ ಟಿ20 ಸರಣಿಯಲ್ಲಿ ಮೂಖಾಮುಖಿಯಾಗಲಿದ್ದು ಮೊದಲ ಪಂದ್ಯಕ್ಕಾಗಿ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂ ಸಜ್ಜಾಗಿದೆ.

ಮೊದಲ ಪಂದ್ಯ ಲಕ್ನೋದಲ್ಲಿ ನಡೆದ ಬಳಿಕ ಮುಂದಿನ ಎರಡು ಪಂದ್ಯಗಳು ಧರ್ಮಶಾಲಾದಲ್ಲಿ ಆಯೋಜನೆಯಾಗಲಿದೆ. ಆದರೆ ಮೊದಲ ಮೊದಲ ಪಂದ್ಯವನ್ನು ಆಯೋಜಿಸುತ್ತಿರುವ ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದ ಪಿಚ್ ರಿಪೋರ್ಟ್, ಹವಾಮಾನ ವರದಿ ಹಾಗೂ ಕೆಲ ಕುತೂಹಲಕಾರಿ ಅಂಕಿಅಂಶಗಳನ್ನು ನೋಡೋಣ.

ವೃದ್ದಿಮಾನ್ ಸಾಹಾಗೆ ಪತ್ರಕರ್ತನಿಂದ ಬೆದರಿಕೆ: BCCI ತುರ್ತಾಗಿ ತನಿಖೆ ನಡೆಸಬೇಕು ಎಂದ ರವಿಶಾಸ್ತ್ರಿವೃದ್ದಿಮಾನ್ ಸಾಹಾಗೆ ಪತ್ರಕರ್ತನಿಂದ ಬೆದರಿಕೆ: BCCI ತುರ್ತಾಗಿ ತನಿಖೆ ನಡೆಸಬೇಕು ಎಂದ ರವಿಶಾಸ್ತ್ರಿ

ಲಕ್ನೋ ಹವಾಮಾನ ವರದಿ: ಉತ್ತರ ಭಾರತದ ಪ್ರಮುಖ ನಗರವಾಗಿರುವ ಲಕ್ನೋದಲ್ಲಿ ನಡೆಯಲಿರುವ ಮೊದಲ ಪಂದ್ಯದ ಸಂಜೆ 7 ಗಂಟೆಗೆ ಆರಂಭವಾಗಲಿದೆ. ಪಂದ್ಯದ ಸಂದರ್ಭದಲ್ಲಿ ವಾತಾವರಣದ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗುವ ಸಂಭವವಿದೆ. ವಾತಾವರನದ ಆರ್ದ್ರತೆ 75 ಶೇಕಡಾದಷ್ಟು ಇರಲಿದ್ದು ಮಳೆಯಾಗುವ ಸಾಧ್ಯತೆ ಇಲ್ಲ. ಆದರೆ ಹಗಲು ವಾತಾವರಣ ಮೋಡದಿಂದ ಕೂಡಿರಲಿದೆ.

ಲಕ್ನೋ ಪಿಚ್: ಲಕ್ನೋದ ಅಟಲ್ ಬಿಹಾರು ವಾಜಪೇಯಿ ಕ್ರೀಡಾಂಗಣ ಸಾಮಾನ್ಯವಾಗಿ ಬ್ಯಾಟರ್‌ಗಳಿಗೆ ಹೆಚ್ಚು ಅನುಕೂಲವಾಗಿರುತ್ತದೆ. ಹೆಚ್ಚಿನ ಸಂದರ್ಭದಲ್ಲಿ ಇಲ್ಲಿ ಆಡಿರುವ ತಂಡಗಳು 160ಕ್ಕಿಂತ ಹೆಚ್ಚು ರನ್‌ಗಳನ್ನು ಗಳಿಸಿದೆ. ಈ ಪಿಚ್‌ನ ಸ್ವರೂಪ ಇದೇ ರೀತಿ ಇರುವ ಸಾಧ್ಯತೆಯಿದೆ ಎನ್ನಲಾಗಿದೆ.

ಲಕ್ನೋ ಸ್ಟೇಡಿಯಂನ ಟಿ20I ದಾಖಲೆ:
1) ಲಕ್ನೋ ಕ್ರೀಡಾಂಗಣ ಈವರೆಗೆ 4 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಯೋಜನೆ ಮಾಡಿದ್ದು ಈ ನಾಲ್ಕು ಪಂದ್ಯದಲ್ಲಿಯೂ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆಲುವು ಸಾಧಿಸಿದೆ
2) ಈ ತಾಣದಲ್ಲಿ ಭಾರತ 2 ವಿಕೆಟ್‌ಗೆ 195 ರನ್‌ಗಳಿಸಿದ್ದು ಹೈಯೆಸ್ಟ್ ಸ್ಕೋರ್ ಎನಿಸಿದೆ. ಅಫ್ಘಾನಿಸ್ತಾನ 7 ವಿಕೆಟ್‌ ಕಳೆದುಕೊಂಡು 147 ರನ್‌ ಗಳಿಸಿರುವುದು ಕನಿಷ್ಠ ಮೊತ್ತವಾಗಿದೆ.
3. ಲಕ್ನೋದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿನ ಸರಾಸರಿ ಸ್ಕೋರ್ 166 ಆಗಿದೆ.
4. ಭಾರತದ ನಾಯಕ ರೋಹಿತ್ ಶರ್ಮಾ ವೆಸ್ಟ್ ಇಂಡೀಸ್ ವಿರುದ್ಧ ಔಟಾಗದೆ 111 ರನ್ ಗಳಿಸಿ ಈ ತಾಣದಲ್ಲಿ ಶತಕ ಬಾರಿಸಿದ ದಾಖಲೆ ಹೊಂದಿದ್ದಾರೆ. ಆ ಪಂದ್ಯವನ್ನು ಭಾರತ 71 ರನ್‌ಗಳಿಂದ ಗೆದ್ದಿತ್ತು. ರೋಹಿತ್ ಆಗ ಭಾರತದ ಹಂಗಾಮಿ ನಾಯಕರಾಗಿದ್ದರು. ಈಗ ಅವರು ಪೂರ್ಣಾವಧಿ ನಾಯಕರಾಗಿದ್ದಾರೆ.
5. ಈ ತಾಣದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಅಫ್ಘಾನಿಸ್ತಾನದ ಕರೀಮ್ ಜೆನ್ನಟ್ 11ಕ್ಕೆ 5 ವಿಕೆಟ್ ಕಬಳಿಸಿರುವುದು ಬೆಸ್ಟ್ ಬೌಲಿಂಗ್ ಫಿಗರ್ ಎನಿಸಿದೆ.
6. ಭಾರತ ಇಲ್ಲಿ ಕೇವಲ ಒಂದು ಪಂದ್ಯವನ್ನು ಮಾತ್ರ ಆಡಿದ್ದು ವೆಸ್ಟ್ ಇಂಡೀಸ್ ವಿರುದ್ಧ ಆಡಿರುವ ಆ ಪಂದ್ಯವನ್ನು ಗೆದ್ದುಕೊಂಡಿದೆ.

6 ವರ್ಷಗಳ ಬಳಿಕ ಟಿ20 ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದ ಭಾರತ6 ವರ್ಷಗಳ ಬಳಿಕ ಟಿ20 ಕ್ರಿಕೆಟ್‌ನಲ್ಲಿ ನಂಬರ್ 1 ತಂಡವಾಗಿ ಹೊರಹೊಮ್ಮಿದ ಭಾರತ

ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಹೆಡ್ ಟು ಹೆಡ್ ಅಂಕಿಅಂಶ: ಭಾರತ ಹಾಗೂ ಶ್ರೀಲಂಕಾ ತಂಡಗಳು ಟಿ20 ಕ್ರಿಕೆಟ್ ಮಾದರಿಯಲ್ಲಿ ಈವರೆಗೆ 21 ಬಾರಿ ಮುಖಾಮುಖಿಯಾಗಿದೆ. ಇದರಲ್ಲಿ ಭಾರತ 14 ಗೆಲುವು ಸಾಧಿಸಿದ್ದರೆ ಶ್ರೀಲಂಕಾ 6 ಬಾರಿ ಗೆದ್ದಿದೆ. ಒಂದು ಪಂದ್ಯ ಫೋಲಿತಾಂಶವಿಲ್ಲದೆ ರದ್ದಾಗಿದೆ.

ಶ್ರೀಲಂಕಾ ಸ್ಕ್ವಾಡ್: ದಸುನ್ ಶನಕಾ (ನಾಯಕ), ಪಾತುಮ್ ನಿಸ್ಸಾಂಕ, ಕುಸಾಲ್ ಮೆಂಡಿಸ್, ಚರಿತ್ ಅಸಲಂಕ (ಉಪನಾಯಕ), ದಿನೇಶ್ ಚಾಂಡಿಮಾಲ್, ದನುಷ್ಕ ಗುಣತಿಲಕ, ಕಮಿಲ್ ಮಿಶ್ರಾ, ಜನಿತ್ ಲಿಯಾನಗೆ, ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಲಹಿರು ಎಫ್ ಕುಮಾರ, ಲಹಿರು ಎಫ್ ಕುಮಾರ, ಮಹೇಶ್ ತೀಕ್ಷಣ, ಜೆಫ್ರಿ ವಾಂಡರ್ಸೆ, ಪ್ರವೀಣ್ ಜಯವಿಕ್ರಮ, ಆಶಿಯನ್ ಡೇನಿಯಲ್

ಭಾರತ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ದೀಪಕ್ ಚಾಹರ್, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಮೊಹಮ್ಮದ್ ಸಿರಾಜ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಯುಜುವೇಂದ್ರ ಚಾಹಲ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅವೇಶ್ ಖಾನ್

ಐಪಿಎಲ್ ಯಾವಾಗ ಶುರು ಆಗತ್ತೆ ಗೊತ್ತಾ! | Oneindia Kannada

Story first published: Tuesday, February 22, 2022, 10:06 [IST]
Other articles published on Feb 22, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X