ಭಾರತ vs ಶ್ರೀಲಂಕಾ ಟಿ20 ಸರಣಿ: ವಾಂಖೆಡೆ ಕ್ರೀಡಾಂಗಣದಲ್ಲಿ ಭಾರತದ ಆಟಗಾರರ ಅಭ್ಯಾಸ

ಶ್ರೀಲಂಕಾ ವಿರುದ್ಧದ ಟಿ20 ಸರಣಿಯ ಆರಂಭಕ್ಕೂ ಮುನ್ನಾದಿನ ರಾತ್ರಿ ಟೀಮ್ ಇಂಡಿಯಾ ಆಟಗಾರರು ವಾಂಖೆಡೆ ಕ್ರೀಡಾಂಗಣದಲ್ಲಿ ಪೂರ್ಣ ಪ್ರಮಾಣದ ಅಭ್ಯಾಸದಲ್ಲಿ ಭಾಗಿಯಾಗಿದ್ದಾರೆ. ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ತಂಡದ ಸದಸ್ಯರು ಸರಣಿಯ ಆರಂಭಕ್ಕೂ ಮುನ್ನ ಅಂತಿಮ ಹಂತದ ಸಿದ್ಧತೆ ನಡೆಸಿದರು. ಮೂರು ಪಂದ್ಯಗಳ ಟಿ20 ಮೂರು ಪಂದ್ಯಗಳ ಟಿ20 ಸರಿಯಲ್ಲಿ ಮೊದಲ ಪಂದ್ಯ ಮಂಗಳವಾರ ಸಂಜೆ 7 ಗಂಟೆಗೆ ಆರಂಭವಾಗಲಿದೆ.
ಭಾನುವಾರ ಟೀಮ್ ಇಂಡಿಯಾದ ಎಲ್ಲಾ ಆಟಗಾರರು ಮುಂಬೈನಲ್ಲಿ ಜೊತೆಯಾಗಿದ್ದರು. ಭಾನುವಾರ ಅಭ್ಯಾಸಕ್ಕೆ ಆಯ್ಕೆ ನೀಡಲಾಗಿದ್ದುಯ ಕೆಲ ಆಟಗಾರರು ಅಭ್ಯಾಸದಲ್ಲಿ ಭಾಗಿಯಾಗಿದ್ದರು. ಸೋಮವಾರ ಆಟಗಾರರು ಪೂರ್ಣಪ್ರಮಾಣದಲ್ಲಿ ಅಭ್ಯಾಸದಲ್ಲಿ ನಿರತವಾಗಿದ್ದಾರೆ.
ಇನ್ನು ನಾಯಕ ಹಾರ್ದಿಕ್ ಪಾಂಡ್ಯ, ಉಪನಾಯಕ ಸೂರ್ಯಕುಮಾರ್ ಜೊತೆಗೆ ಸಂಜು ಸ್ಯಾಮ್ಸನ್ ಹಾಗೂ ಇಶಾನ್ ಕಿಶನ್ ಕೂಡ ಈ ಸರಣಿಯಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಇನ್ನು ರತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್ ಮತ್ತು ರಾಹುಲ್ ತ್ರಿಪಾಠಿ ಕೂಡ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದಲೂ ಬಾಚಿಕೊಳ್ಳಲು ಹವಣಿಸುತ್ತಿದ್ದಾರೆ. ಇನ್ನು ವೇಗದ ಬೌಲಿಂಗ್ ವಿಭಾಗದಲ್ಲಿ ಅರ್ಶ್‌ದೀಪ್ ಸಿಂಗ್, ಹರ್ಷಲ್ ಪಟೇಲ್ ಹಾಗೂ ಉಮ್ರಾನ್ ಮಲಿಕ್ ಲಂಕಾ ವಿರುದ್ಧ ದಾಳಿಗೆ ಸಜ್ಜಾಗಿದ್ದು ಮುಕೇಶ್ ಕುಮಾರ್ ಹಾಗೂ ಶಿವಂ ಮಾವಿ ಕೂಡ ಅವಕಾಶಕ್ಕಾಗಿ ಕಾತರಿಸುತ್ತಿದ್ದಾರೆ.
ಇತ್ತಂಡಗಳ ಸಂಭಾವ್ಯ ಆಡುವ ಬಳಗ
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್ (ವಿಕೆಟ್ ಕೀಪರ್), ಅವಿಷ್ಕಾ ಫೆರ್ನಾಂಡೋ, ಚರಿತ್ ಅಸಲಂಕಾ, ಭಾನುಕಾ ರಾಜಪಕ್ಸೆ, ದಾಸುನ್ ಶನಕ (ನಾಯಕ), ವನಿಂದು ಹಸರಂಗ, ಚಾಮಿಕ ಕರುಣರತ್ನ, ಮಹೇಶ್ ತೀಕ್ಷಣ, ಲಹಿರು ಕುಮಾರ, ದಿಲ್ಶನ್ ಮಧುಶಂಕ
ಭಾರತ: ಶುಬ್ಮನ್ ಗಿಲ್, ಇಶಾನ್ ಕಿಶನ್, ಋತುರಾಜ್ ಗಾಯಕ್ವಾಡ್, ಸೂರ್ಯಕುಮಾರ್ ಯಾದವ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್/ಅಕ್ಸರ್ ಪಟೇಲ್, ಯುಜ್ವೇಂದ್ರ ಚಾಹಲ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್, ಉಮ್ರಾನ್ ಮಲಿಕ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications