IND vs SL 2ನೇ ಏಕದಿನ: ಸ್ಮೃತಿ ಮಂಧಾನ, ಶಫಾಲಿ ಸ್ಫೋಟಕ ಬ್ಯಾಟಿಂಗ್; ಶ್ರೀಲಂಕಾ ವಿರುದ್ಧ 10 ವಿಕೆಟ್ ಜಯ

ಸೋಮವಾರ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಮಹಿಳೆಯರ ತಂಡದ ವಿರುದ್ಧ ಭಾರತ ಮಹಿಳೆಯರ ತಂಡ ಹತ್ತು ವಿಕೆಟ್‌ಗಳಿಂದ ಗೆದ್ದಿತು. ಆರಂಭಕ ಬ್ಯಾಟರ್‌ಗಳಾದ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಕ್ರಮವಾಗಿ 94 ಮತ್ತು 71 ರನ್ ಗಳಿಸಿದ್ದರಿಂದ, ಭಾರತ 174 ರನ್‌ಗಳನ್ನು ಚೇಸ್ ಮಾಡುವುದು ಸಮಸ್ಯೆಯಾಗಲಿಲ್ಲ.

IND vs ENG 5ನೇ ಟೆಸ್ಟ್: ಇಂಗ್ಲೆಂಡ್ ವಿರುದ್ಧ ಮತ್ತೊಂದು ದಾಖಲೆ ಬರೆದ ಜಸ್ಪ್ರೀತ್ ಬುಮ್ರಾ

ಬೌಲಿಂಗ್‌ನಲ್ಲಿ ರೇಣುಕಾ ಸಿಂಗ್ ಮಿಂಚಿದರೆ, ಬ್ಯಾಟಿಂಗ್‌ನಲ್ಲಿ ಸ್ಮೃತಿ ಮಂಧಾನ ಮತ್ತು ಶಫಾಲಿ ವರ್ಮಾ ಎದುರಾಳಿ ತಂಡದ ಮೇಲೆ ವೀರಾವೇಶದಿಂದ ಸವಾರಿ ಮಾಡಿದ ಕಾರಣ, ಭಾರತವು ಪಲ್ಲೆಕೆಲೆಯಲ್ಲಿ ಶ್ರೀಲಂಕಾ ವಿರುದ್ಧ 10 ವಿಕೆಟ್‌ಗಳ ಸಮಗ್ರ ಜಯವನ್ನು ದಾಖಲಿಸಿತು ಮತ್ತು ಏಕದಿನ ಸರಣಿಯಲ್ಲಿ 2-0 ಅಜೇಯ ಮುನ್ನಡೆ ಸಾಧಿಸಿತು.ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು 173 ರನ್‌ಗಳಿಗೆ ಕಟ್ಟಿಹಾಕಿದರು. ಭಾರತ ಪರ ರೇಣುಕಾ ಸಿಂಗ್ ನಾಲ್ಕು ವಿಕೆಟ್‌ಗ ಪಡೆದು ಮಿಂಚಿದರೆ, ದೀಪ್ತಿ ಶರ್ಮಾ ಮತ್ತು ಮೇಘನಾ ಸಿಂಗ್ ಎರಡು ವಿಕೆಟ್ ಪಡೆದರು. ಆತಿಥೇಯರ ಪರ ಅಮಾ ಕಾಂಚನಾ 47 ರನ್ ಗಳಿಸಿ ಗರಿಷ್ಠ ಸ್ಕೋರರ್ ಎನಿಸಿದರು.

ಸೋಮವಾರ ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡ ಹರ್ಮನ್‌ಪ್ರೀತ್ ಕೌರ್, ಭಾರತ ತನ್ನ ಆಡುವ 11ರ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ. ಮೊದಲ ಏಕದಿನ ಪಂದ್ಯವನ್ನು ನಾಲ್ಕು ವಿಕೆಟ್‌ಗಳಿಂದ ಗೆದ್ದಿರುವ ಭಾರತವು ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿತು.

Ind vs Eng ಕ್ರೀಡಾಂಗಣದಲ್ಲಿ ಏನಿದು ಆತಂಕಕಾರಿ ಸುದ್ದಿ | *Cricket | OneIndia Kannada

ಮೊದಲ ಏಕದಿನ ಪಂದ್ಯವನ್ನು ಆರಾಮವಾಗಿ ಗೆದ್ದ ನಂತರ ಭಾರತೀಯರು ಒತ್ತಡದಲ್ಲಿರುವ ಶ್ರೀಲಂಕಾ ತಂಡದ ವಿರುದ್ಧ ಪುನಃ ಉತ್ತಮ ಆಲ್‌ರೌಂಡರ್ ಪ್ರದರ್ಶನ ನೀಡಿದರು. ಹಿಂದಿನ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಜಯ ಗಳಿಸಿರುವುದು ಪ್ರವಾಸಿ ಭಾರತ ತಂಡದ ವಿಶ್ವಾಸವನ್ನು ಹೆಚ್ಚಿಸಿದೆ.

"ನಾನು ನನ್ನ ಸಾಮರ್ಥ್ಯದ ಮೇಲೆ ಕೆಲಸ ಮಾಡುತ್ತಿದ್ದೇನೆ ಮತ್ತು ನನ್ನ ವ್ಯತ್ಯಾಸಗಳ ಮೇಲೆ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ನನಗೆ ಸಹಾಯ ಮಾಡುವ ಹಾರ್ಡ್ ಲೆಂತ್‌ಗಳನ್ನು ನಾನು ಹಾಕುತ್ತಿದ್ದೇನೆ. ಮೋಡ ಕವಿದ ವಾತಾವರಣವನ್ನು ನೋಡಿ ನಾವು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದೇವೆ. ಪರಿಸ್ಥಿತಿಗಳು ನಮಗೆ ಸಹಾಯ ಮಾಡುತ್ತದೆ ಎಂದು ನಾವು ಭಾವಿಸಿದೆವು. ನನ್ನ ಸಾಮರ್ಥ್ಯಕ್ಕೆ ತಕ್ಕ ಬೌಲಿಂಗ್ ಮಾಡಿದ್ದೇನೆ," ಎಂದು ಪಂದ್ಯದ ನಂತರದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪಂದ್ಯ ಶ್ರೇಷ್ಠ ಆಟಗಾರ್ತಿ ರೇಣುಕಾ ಸಿಂಗ್ ಹೇಳಿದರು.

For Quick Alerts
ALLOW NOTIFICATIONS
For Daily Alerts
Story first published: Monday, July 4, 2022, 19:02 [IST]
Other articles published on Jul 4, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X