ಭಾರತ vs ಶ್ರೀಲಂಕಾ: 2ನೇ ಪಂದ್ಯದ ಸಂಭಾವ್ಯ ಆಡುವ ಬಳಗ ಹಾಗೂ ನೇರಪ್ರಸಾರದ ಮಾಹಿತಿ

ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದ್ದು ಸರಣಿಯಲ್ಲಿ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಟೀಮ್ ಇಂಡಿಯಾದ ಭರ್ಜರಿ ಬ್ಯಾಟಿಂಗ್‌ನ ಕಾರಣದಿಂದಾಗಿ ಎರಡನೇ ಪಂದ್ಯದಲ್ಲಿ ಭಾರತ ದೊಡ್ಡ ಅಂತರದಿಂದ ಗೆಲುವು ಸಾಧ್ಯವಾಯಿತು. ಇದೀಗ ಭಾರತ ಹಾಗೂ ಶ್ರೀಲಂಕಾ ತಂಡಗಳು ಎರಡನೇ ಪಂದ್ಯಕ್ಕೆ ಸಜ್ಜಾಗಿದ್ದು ಸರಣಿ ಕುತೂಹಲ ಮೂಡಿಸಿದೆ.
ಭಾರತ ಹಾಗೂ ಶ್ರೀಲಂಕಾ ನಡುವಿನ ಎರಡನೇ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ನಡೆಯಲಿದ್ದು ಈ ಪಂದ್ಯವನ್ನು ಗೆದ್ದು ಸರಣಿ ವಶಕ್ಕೆ ಪಡೆಯುವ ಉತ್ಸಾಹದಲ್ಲಿ ಟೀಮ್ ಇಂಡಿಯಾ ಇದೆ. ಆದರೆ ಶ್ರೀಲಂಕಾ ತಂಡ ಈ ಪಂದ್ಯದಲ್ಲಿ ತಿರುಗಿಬೀಳುವ ಪ್ರಯತ್ನ ನಡೆಸಲಿದ್ದು ಸರಣಿ ಸಮಬಲಗೊಳಿಸುವ ವಿಶ್ವಾಸದಲ್ಲಿದೆ. ಇನ್ನು ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಪ್ರಮುಖ ಆಟಗಾರರಾದ ಸೂರ್ಯಕುಮಾರ್ ಯಾದವ್ ಹಾಗೂ ಇಶಾನ್ ಕಿಶನ್ ಆಡುವ ಬಳಗದಿಂದ ಹೊರಗುಳಿದಿದ್ದರು. ಎರಡನೇ ಪಂದ್ಯದಲ್ಲಿ ಈ ಆಟಗಾರರಿಗೆ ಅವಕಾಶ ದೊರೆಯುವ ಸಾಧ್ಯತೆಯಿದೆಯಾ ಎಂಬುದು ಕುತೂಹಲ ಮೂಡಿಸಿದೆ.

ಪಂದ್ಯದ ಸಮಯ ಹಾಗೂ ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ 2ನೇ ಏಕದಿನ ಪಂದ್ಯ ಜನವರಿ 12 ಮಂಗಳವಾರ ನಡೆಯಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯ ವಹಿಸಿಕೊಳ್ಳಲಿದೆ. ಮಧ್ಯಾಹ್ನ 1:30ಕ್ಕೆ ಈ ಪಂದ್ಯ ಆರಂಭವಾಗಲಿದ್ದು 1 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ನೇರಪ್ರಸಾರ: ಈ ಪಂದ್ಯ ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರಪ್ರಸಾರವಾಗಲಿದ್ದು ಹಾಟ್‌ಸ್ಟಾರ್‌ನಲ್ಲಿಯೂ ಪಂದ್ಯವನ್ನು ವೀಕ್ಷಿಸುವ ಅವಕಾಶವಿದೆ.

ಪಿಚ್ ರಿಪೋರ್ಟ್ ಹಾಗೂ ಹವಾಮಾನ ವರದಿ
2ನೇ ಏಕದಿನ ಪಂದ್ಯ ಕೊಲ್ಕತ್ತಾದ ಈಡನ್ ಗಾರ್ಡನ್‌ನಲ್ಲಿ ಡೆಯಲಿದ್ದು ಈ ಕ್ರೀಡಾಂಗಣ ಬ್ಯಾಟಿಂಗ್‌ಗೆ ಸ್ವರ್ಗ ಎನಿಸಿಕೊಂಡಿದೆ. ಇಲ್ಲಿನ ಬೌಂಡರಿಗಳು ಹತ್ತಿರದಲ್ಲಿದ್ದು ಬ್ಯಾಟರ್‌ಗಳಿಗೆ ಅನುಕೂಲವಾಗಲಿದೆ. ಇನ್ನು ಬೌಲಿಂಗ್‌ನಲ್ಲಿ ಸ್ಪಿನ್ನರ್‌ಗಳಿ ಇಲ್ಲಿ ಹೆಚ್ಚು ಮಿಂಚುವ ಅವಕಾಶವಿದೆ. ಇನ್ನು ಸಂಜೆಯಾಗುತ್ತಲೇ ಇಬ್ಬನಿ ಬೀಳುವ ಕಾರಣ ಟಾಸ್ ಗೆದ್ದ ತಂಡದ ನಾಯಕ ಮೊದಲಿಗೆ ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಉತ್ತಮ ನಿರ್ಧಾರವಾಗಿರಲಿದೆ.
ಹವಾಮಾನ ವರದಿ: ಇನ್ನು ಪಂದ್ಯದ ದಿನ ಕೊಲ್ಕತ್ತಾದಲ್ಲಿ ಮಳೆಯಾಗುವ ಸಾಧ್ಯತೆಯಿಲ್ಲ. ಹೀಗಾಗಿ ಪಂದ್ಯ ಸುಗಮವಾಗಿ ಸಾಗಲಿದೆ.

ಸಂಭಾವ್ಯ ತಂಡ ಹೀಗಿದೆ
ಟೀಮ್ ಇಂಡಿಯಾ: ರೋಹಿತ್ ಶರ್ಮಾ(ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್
ಶ್ರೀಲಂಕಾ: ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್(ನಾಯಕ), ಅವಿಷ್ಕ ಫೆರ್ನಾಂಡೋ, ಧನಂಜಯ ಡಿ ಸಿಲ್ವ, ಚರಿತ್ ಅಸಲಂಕ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನ, ದುನಿತ್ ವೆಲ್ಲಲಾಗೆ, ಕಸುನ್ ರಜಿತ, ದಿಲ್ಶಾನ್ ಮಧುಶಂಕ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications