For Quick Alerts
ALLOW NOTIFICATIONS  
For Daily Alerts
 

IND vs SL 2nd ODI : ಇದೇ ಈಡನ್ ಗಾರ್ಡನ್ಸ್ ಅಂಗಳದಲ್ಲಿ 264 ರನ್ ಸಿಡಿಸಿದ್ದ ರೋಹಿತ್‌ ಶರ್ಮಾ

Ind vs SL 2nd ODI: Rohit Sharma Smashed 264 Runs At Eden Gardens In 2014 Against Sri Lanka

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ ಎರಡನೇ ಪಂದ್ಯ ಇಂದು (ಜನವರಿ 12) ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಅಂಗಳದಲ್ಲಿ ನಡೆಯಲಿದೆ. ಸರಣಿಯ ಮೊದಲನೇ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿರುವ ಟೀಂ ಇಂಡಿಯಾ, ಎರಡನೇ ಪಂದ್ಯದಲ್ಲಿ ಗೆದ್ದು ಸರಣಿ ವಶಪಡಿಸಿಕೊಳ್ಳುವ ಉತ್ಸಾಹದಲ್ಲಿದೆ.

ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಈಡನ್ ಗಾರ್ಡನ್ಸ್ ಮೈದಾನ ಅಚ್ಚು ಮೆಚ್ಚು, 2014ರಲ್ಲಿ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯ 4ನೇ ಪಂದ್ಯದಲ್ಲಿ ವಿಶ್ವದಾಖಲೆಯ ದ್ವಿಶತಕ ಸಿಡಿಸಿದ್ದು ಇದೇ ಅಂಗಳದಲ್ಲಿ.

2014 ನವೆಂಬರ್ 13ರಂದು ನಡೆದ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಶ್ರೀಲಂಕಾ ಬೌಲರ್ ಗಳ ಬೆವರಿಳಿಸಿದ್ದರು. ಮೈದಾನದ ಮೂಲೆ ಮೂಲೆ ಚೆಂಡನ್ನು ಕಳಿಸಿದ್ದ ಅವರು ದ್ವಿಶತಕ ಪೂರೈಸಿದ್ದರು. 172 ಎಸೆತಗಳಲ್ಲಿ 264 ರನ್ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಅವರ ಇನ್ನಿಂಗ್ಸ್‌ನಲ್ಲಿ 33 ಬೌಂಡರಿ, 9 ಭರ್ಜರಿ ಸಿಕ್ಸರ್ ಸೇರಿದ್ದವು. ಇಂದಿಗೂ ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿ ಯಾರಿಗೂ ಈ ದಾಖಲೆಯನ್ನು ಮುರಿಯಲಾಗಿಲ್ಲ.

ಸರಣಿಯ ಮೊದಲನೇ ಪಂದ್ಯದಲ್ಲಿ 67 ಎಸೆತಗಳಲ್ಲಿ 9 ಬೌಂಡರಿ 3 ಸಿಕ್ಸರ್ ಸಹಿತ 83 ರನ್ ಗಳಿಸಿರುವ ರೋಹಿತ್ ಶರ್ಮಾ ಉತ್ತಮ ಲಯದಲ್ಲಿದ್ದಾರೆ. ಕಳೆದ ಪಂದ್ಯದ ಆಟವನ್ನೇ ಇಂದಿನ ಪಂದ್ಯದಲ್ಲಿ ಮುಂದುವರೆಸಿದರೆ ಭಾರತ ಮತ್ತೊಮ್ಮೆ ಬೃಹತ್ ಮೊತ್ತ ಕಲೆಹಾಕುವುದರಲ್ಲಿ ಅನುಮಾನವೇ ಇಲ್ಲ.

Ind vs SL 2nd ODI: Rohit Sharma Smashed 264 Runs At Eden Gardens In 2014 Against Sri Lanka

ಬ್ಯಾಟಿಂಗ್ ಸ್ನೇಹಿ ಪಿಚ್

ಈಡನ್ ಗಾರ್ಡನ್ ಪಿಚ್ ಬ್ಯಾಟರ್ ಗಳಿಗೆ ಹೆಚ್ಚಿನ ಅನುಕೂಲಕರವಾಗಿದೆ. ವೇಗಿಗಳು ಮತ್ತು ಸ್ಪಿನ್ನರ್ ಗಳು ಇಲ್ಲಿ ಸಮನಾಗಿ ಯಶಸ್ಸು ಪಡೆದಿದ್ದಾರೆ. ಉತ್ತಮ ಲೈನ್ ಮತ್ತು ಲೆಂಗ್ತ್‌ನಲ್ಲಿ ಬೌಲಿಂಗ್ ಮಾಡಿದರೆ ಮಾತ್ರ ಇಲ್ಲಿ ಯಶಸ್ಸು ಸಿಗುತ್ತದೆ.

ಇದುವರೆಗೂ ಇಲ್ಲಿ 30 ಅಂತಾರಾಷ್ಟ್ರೀಯ ಏಕದಿನ ಪಂದ್ಯಗಳು ನಡೆದಿದ್ದು, 18 ಪಂದ್ಯಗಳಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಜಯಶಾಲಿಯಾಗಿದೆ. 11 ಪಂದ್ಯಗಳಲ್ಲಿ ಚೇಸಿಂಗ್ ಮಾಡುವ ತಂಡ ಗೆಲುವು ಸಾಧಿಸಿದೆ. 1 ಪಂದ್ಯ ಫಲಿತಾಂಶವಿಲ್ಲದೆ ಕೊನೆಯಾಗಿದೆ.

2014ರಲ್ಲಿ ಭಾರತ ತಂಡ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ 404 ರನ್ ಕಲೆಹಾಕಿದ್ದು, ಇಲ್ಲಿ ದಾಖಲಾದ ಗರಿಷ್ಠ ಸ್ಕೋರ್ ಆಗಿದೆ. ಈ ಎಲ್ಲಾ ಅಂಕಿ ಅಂಶಗಳನ್ನು ಗಮನಿಸಿದರೆ ಇಲ್ಲಿ ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಹೆಚ್ಚಿನ ಅನುಕೂಲವಿದೆ. ಟಾಸ್ ಗೆಲ್ಲುವ ನಾಯಕ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸುವ ಸಾಧ್ಯತೆ ಇದೆ.

Story first published: Thursday, January 12, 2023, 8:31 [IST]
Other articles published on Jan 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+