For Quick Alerts
ALLOW NOTIFICATIONS  
For Daily Alerts
 

ಭಾರತ vs ಶ್ರೀಲಂಕಾ: ಈಡನ್ ಗಾರ್ಡನ್‌ನಲ್ಲಿ ಅಲ್ಪ ಮೊತ್ತಕ್ಕೆ ಲಂಕಾ ಪಡೆಯನ್ನು ಕಟ್ಟಿಹಾಕಿದ ಭಾರತೀಯ ಬೌಲರ್‌ಗಳು

Ind vs SL 2nd ODI, Team India need 216 runs to win in 2nd ODI and the series

ಭಾರತ ಹಾಗೂ ಶ್ರೀಲಂಕಾ ನಡುವಿನ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಬೌಲಿಂಗ್ ವಿಭಾಗ ಅದ್ಭುತ ಪ್ರದರ್ಶನ ನೀಡುವ ಮೂಲಕ ಮಿಂಚುಹರಿಸಿದೆ. ಟಾಸ್ ಸೋತು ಮೊದಲಿಗೆ ಬೌಲಿಂಗ್ ನಡೆಸುವ ಸವಾಲು ಸ್ವೀಕರಿಸಿದ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಗಿದೆ. ಟೀಮ್ ಇಂಡಿಯಾ ಪರವಾಗಿ ಕುಲ್‌ದೀಪ್ ಯಾದವ್, ಮೊಹಮ್ಮದ್ ಸಿರಾಜ್ ಭರ್ಜರಿ ಬೌಲಿಂಗ್ ದಾಳಿ ನಡೆಸಿದ್ದು ಶ್ರೀಲಂಕಾ ತಂಡವನ್ನು 215 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾಗಿದೆ.

ಈ ಪಂದ್ಯದಲ್ಲಿ ಶ್ರೀಲಂಕಾ ಮೊದಲ ವಿಕೆಟನ್ನು 29 ರನ್‌ಗಳಿಗೆ ಕಳೆದುಕೊಂಡಿತಾದರೂ ಎರಡನೇ ವಿಕೆಟ್‌ಗೆ ಅದ್ಭುತ ಜೊತೆಯಾಟ ಪಡೆದುಕೊಂಡಿತು. ಚೊಚ್ಚಲ ಪಂದ್ಯವನ್ನಾಡುತ್ತಿರುವ ನುವಾನಿಡು ಫೆರ್ನಾಂಡೋ ಕುಸಾಲ್ ಮೆಂಡಿಸ್ ಜೊತೆಗೂಡಿ ಉತ್ತಮ ಜೊತೆಯಾಟದಲ್ಲಿ ಭಾಗಿಯಾದರು. ಆದರೆ ಈ ಜೋಡಿ ಬೇರ್ಪಟ್ಟ ಬಳಿಕ ಲಂಕಾ ಪಡೆ ಕುಸಿಯುತ್ತ ಸಾಗಿತು. ಕುಸಾಲ್ ಮೆಂಡಿಸ್ 34 ರನ್‌ಗಳ ಕೊಡುಗೆ ನೀಡಿ ಕುಲ್ದೀಪ್ ಯಾದವ್‌ಗೆ ವಿಕೆಟ್ ನೀಡುವ ಮೂಲಕ ಲಂಕಾದ ಕುಸಿತ ಆರಂಭವಾಯಿತು.

ಇನ್ನು ನುವಾನಿಡು ಫೆರ್ನಾಂಡೋ ಪದಾರ್ಪಣಾ ಪಂದ್ಯವನ್ನು ಅರ್ಧ ಶತಕ ಸಿಡಿಸುವ ಮೂಲಕ ಸ್ಮರಣೀಯಗೊಳಿಸಿದರು. 63 ಎಸೆತಗಳಲ್ಲಿ 50 ರನ್‌ಗಳಿಸಿದ ಯುವ ಆಟಗಾರ ರನೌಟ್ ಆಗುವ ಮೂಲಕ ನಿರಾಸೆ ಅನುಭವಿಸಿದರು. ಉಳಿದಂತೆ ಕಂಕಾದ ಯಾವ ಆಟಗಾರನಿಂದಲೂ ದೊಡ್ಡ ಮೊತ್ತದ ಕೊಡುಗೆ ಬಾರಲಿಲ್ಲ. ಉತ್ತಮ ಫಾರ್ಮ್‌ನಲ್ಲಿರುವ ನಾಯಕ ಶನಿಕ ಕೂಡ ಕೇವಲ 2 ರನ್‌ಗೆ ವಿಕೆಟ್ ಕಳೆದುಕೊಂಡಿದ್ದಾರೆ. ಅಂತಿಮವಾಗಿ ಶ್ರೀಲಂಕಾ ತಂಡ 39.4 ಓವರ್‌ಗಳಲ್ಲಿ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡು 215 ರನ್ ಮಾತ್ರವೇ ಗಳಿಸಲು ಶಕ್ತವಾಗಿದೆ.

ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಗಿ ಅತ್ಯಂತ ಪರಿಣಾಮಕಾರಿಯಾಗಿ ಬೌಲಿಂಗ್ ನಡೆಸಿದ್ದು ಕುಲ್‌ದೀಪ್ ಯಾದವ್ ಹಾಗೂ ಮೊಹಮ್ಮದ್ ಸಿರಾಜ್. ಇಬ್ಬರು ಕೂಡ ತಲಾ ಮೂರು ವಿಕೆಟ್ ಸಂಪಾದಿಸಿದ್ದಾರೆ. ಇನ್ನು ಉಮ್ರಾನ್ ಮಲಿಕ್ ಕೂಡ ಎರಡು ವಿಕೆಟ್ ಪಡೆದುಕೊಂಡಿದ್ದು ಒಂದು ವಿಕೆಟ್ ಅಕ್ಷರ್ ಪಟೇಲ್ ಪಾಲಾಗಿದೆ.

ಇತ್ತಂಡಗಳ ಆಡುವ ಬಳಗ
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಉಮ್ರಾನ್ ಮಲಿಕ್, ಕುಲ್‌ದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಬೆಂಚ್: ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್, ಇಶಾನ್ ಕಿಶನ್, ಅರ್ಷದೀಪ್ ಸಿಂಗ್, ಯುಜ್ವೇಂದ್ರ ಚಾಹಲ್
ಶ್ರೀಲಂಕಾ: ಕುಸಾಲ್ ಮೆಂಡಿಸ್(ವಿಕೆಟ್ ಕೀಪರ್), ಅವಿಷ್ಕ ಫೆರ್ನಾಂಡೊ, ಚರಿತ್ ಅಸಲಂಕ, ಧನಂಜಯ ಡಿ ಸಿಲ್ವ, ನುವಾನಿಡು ಫೆರ್ನಾಂಡೊ, ದಸುನ್ ಶನಕ(ನಾಯಕ), ವನಿಂದು ಹಸರಂಗ, ಚಾಮಿಕ ಕರುಣಾರತ್ನೆ, ದುನಿತ್ ವೆಲ್ಲಲಾಗೆ, ಲಹಿರು ಕುಮಾರ, ಕಸುನ್ ರಜಿತ
ಬೆಂಚ್: ಮಹೇಶ್ ತೀಕ್ಷಣ, ಅಶೇನ್ ಬಂಡಾರ, ಪ್ರಮೋದ್ ಮದುಶನ್, ಜೆಫ್ರಿ ವಂಡರ್ಸೆ, ಸದೀರ ಸಮರವಿಕ್ರಮ, ಪಾತುಮ್ ನಿಸ್ಸಾಂಕ, ದಿಲ್ಶಾನ್ ಮಧುಶಂಕ

Story first published: Thursday, January 12, 2023, 16:58 [IST]
Other articles published on Jan 12, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+