IND vs SL 2nd T20: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ LIVE SCORE

ಭಾರತ-ಶ್ರೀಲಂಕಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಧರ್ಮಶಾಲಾದ ಹಿಮಾಚಲ್ ಪ್ರದೇಶ್ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಂ ಇಂಡಿಯಾ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕಿಳಿಯುತ್ತಿದೆ.
ನಾಯಕ ರೋಹಿತ್ ಶರ್ಮಾ ಮೊದಲ ಟಿ20 ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದ್ರೆ, ಶ್ರೀಲಂಕಾ ನಾಯಕ ದಸುನ್ ಶಂಕರಾ ತಂಡದಲ್ಲಿ ಎರಡು ಬದಲಾವಣೆ ತಂಡಿದ್ದಾರೆ. ಜನಿತ್ ಲಿಯಾನಗೆ ಮತ್ತು ಜೆಫ್ರಿ ವಾಂಡರ್ಸೆ ತಂಡದಿಂದ ಔಟ್ ಆಗಿದ್ದು, ಬಿನೂರ ಫರ್ನಾಂಡೋ ಮತ್ತು ದನುಷ್ಕ ಗುಣತಿಲಕ ಪ್ಲೇಯಿಂಗ್ ಇಲೆವೆನ್‌ನಲ್ಲಿ ಸ್ಥಾನ ಪಡೆದಿದ್ದಾರೆ.
ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿರುವ ಭಾರತದ ಪ್ಲೇಯಿಂಗ್ ಇಲೆವೆನ್ ಮತ್ತು ಶ್ರೀಲಂಕಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿದೆ.
ಟೀಮ್ ಇಂಡಿಯಾ ಪ್ಲೇಯಿಂಗ್ 11
ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್(ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ, ಯುಜವೇಂದ್ರ ಚಹಾಲ್
ಶ್ರೀಲಂಕಾ ಪ್ಲೇಯಿಂಗ್ 11
ಪಾತುಮ್ ನಿಸ್ಸಾಂಕ, ಕಮಿಲ್ ಮಿಶ್ರಾ, ಚರಿತ್ ಅಸಲಂಕ, ದನುಷ್ಕ ಗುಣತಿಲಕ, ದಿನೇಶ್ ಚಂಡಿಮಲ್(ವಿಕೆಟ್ ಕೀಪರ್), ದಸುನ್ ಶನಕ(ನಾಯಕ), ಚಾಮಿಕ ಕರುಣಾರತ್ನೆ, ದುಷ್ಮಂತ ಚಮೀರ, ಪ್ರವೀಣ್ ಜಯವಿಕ್ರಮ, ಬಿನೂರ ಫೆರ್ನಾಂಡೋ, ಲಹಿರು ಕುಮಾರ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications